ಮೋದಿಗೆ ಅಗ್ನಿಪರೀಕ್ಷೆ ; ಅಂತಿಮ ಹಂತದ ಮತದಾನ ಆರಂಭ

Must Read

ಹೊಸದೆಹಲಿ – ೨೦೨೪ ರ ಲೋಕಸಭಾ ಮಹಾ ಚುನಾವಣೆಯ ಏಳನೆಯ ಹಾಗೂ ಅಂತಿಮ ಹಂತದ ಚುನಾವಣೆಯ ಮತದಾನ ಪ್ರಕ್ರಿಯೆ ಆರಂಭಗೊಂಡಿದ್ದು ೫೭_ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಇದೇ ಹಂತದಲ್ಲಿ ಪ್ರಧಾನ ಮಂತ್ರಿ ಮೋದಿಯವರ ವಾರಾಣಸಿ ಕ್ಷೇತ್ರದ ಚುನಾವಣೆ ನಡೆಯಲಿದೆ.

ಏಳು ರಾಜ್ಯಗಳ ೫೭ ಕ್ಷೇತ್ರಗಳಿಗೆ ಚುನಾವಣೆ ಶನಿವಾರ ನಡೆಯಲಿದೆ. ಪ್ರಮುಖ ರಾಜ್ಯಗಳೆಂದರೆ ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ಪಂಜಾಬ್ ಮತ್ತು ಹಿಮಾಚಲ ಪ್ರದೇಶ ಸೇರಿವೆ.

ದೂರುಗಳ ಸುರಿಮಳೆ ;

ಈ ಮಧ್ಯೆ ಪ್ರಸಕ್ತ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಬಿಜೆಪಿಯ ವಿರುದ್ಧ ದೂರುಗಳ ಸುರಿಮಳೆಯನ್ನೇ ಸುರಿಸಿದೆ. ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ಒಟ್ಟು ೧೧೭ ದೂರುಗಳನ್ನು ಸಲ್ಲಿಸಿದ್ದು ಅವುಗಳಲ್ಲಿ ೧೪ ದೂರುಗಳು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ವಿರುದ್ಧವೇ ಆಗಿವೆ. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿಯವರ ವಿರುದ್ಧ ೮ ಹಾಗೂ ಗೃಹಸಚಿವ ಅಮಿತ್ ಷಾ ವಿರುದ್ಧ ೩ ದೂರುಗಳನ್ನು ಸಲ್ಲಿಸಲಾಗಿದೆ. ಉಳಿದ ಬಿಜೆಪಿ ನಾಯಕರ ವಿರುದ್ಧವೂ ಹಲವು ದೂರುಗಳನ್ನು ಕಾಂಗ್ರೆಸ್ ಸಲ್ಲಿಸಿದೆ.

ಮೋದಿ ಮನವಿ : 

ಕೊನೆಯ ಹಂತದ ಚುನಾವಣೆಯಲ್ಲಿ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಮುಂದೆ ಬಂದು ಮತ ಚಲಾಯಿಸಬೇಕು ಎಂದು ಪ್ರಧಾನಿ ಮೋದಿ ಮನವಿ ಮಾಡಿಕೊಂಡಿದ್ದಾರೆ.

ಎಕ್ಸ್ ನಲ್ಲಿ ಒಂದು ಪೋಸ್ಡ್ ನಲ್ಲಿ ಅವರು, ೫೭ ಕ್ಷೇತ್ರಗಳ ಅಂತಿಮ ಹಂತದ ಚುನಾವಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಯುವಕರು, ಯುವತಿಯರು ಮತಚಲಾಯಿಸುವರೆಂಬ ವಿಶ್ವಾಸ ನನಗಿದೆ ಎಂದು ಬರೆದುಕೊಡಿದ್ದಾರೆ.

 

Latest News

ಅನ್ನದಾನೇಶ್ವರ ಶ್ರೀಗಳು ಪಂಚಭೂತಗಳಲ್ಲಿ ಲೀನ

ಶ್ರೀಶೈಲ ಜಗದ್ಗುರುಗಳು, ನಾಡಿನ ಹರಗುರು ಚರಮೂರ್ತಿಗಳು ಭಕ್ತರು ಭಾಗಿಮೂಡಲಗಿ - ರಬಕವಿ ಬನಹಟ್ಟಿ ತಾಲೂಕಿನ ಬಂಡಿಗಣಿ ಗ್ರಾಮದ ಶ್ರೀ ಬಸವ ಗೋಪಾಲ ನೀಲಮಾಣಿಕ ಮಠದ ಶ್ರೀ...

More Articles Like This

error: Content is protected !!
Join WhatsApp Group