ಕಬ್ಬಿಗೆ ಬೆಂಕಿ; ಅಪಾರ ಹಾನಿ

Must Read

ಸಿಂದಗಿ: ತಾಲೂಕಿನ ಯಂಕಂಚಿ ಗ್ರಾಮದಲ್ಲಿ ಸಾಹೇಬಗೌಡ ಕೊಪ್ಪಳ ಎಂಬುವವರ ಹೊಲದಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ 4 ಎಕರೆ ಕಬ್ಬು ಸುಟ್ಟು ಕರಕಲಾಗಿ ಸುಮಾರು ರೂ. 10 ಲಕ್ಷಕ್ಕೂ ಅಧಿಕ ಹಾನಿಯಾಗಿದೆ. ಅಲ್ಲದೆ ರೈತನಿಗೆ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ. ಸರಕಾರ ಕೂಡಲೇ ಸ್ಪಂದಿಸಬೇಕು ಎಂದು ಗ್ರಾಮಸ್ಥರಾದ ಸಂಗಮೇಶ ಮನ್ನಿಕಟ್ಟಿ, ಈಶಪ್ಪ ಕೊಪ್ಪಳ ಆಗ್ರಹಿಸಿದ್ದಾರೆ.

ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಲು ಹರಸಾಹಸ ಪಟ್ಟರು. ಅಲ್ಲದೆ ಗ್ರಾಮಲೆಕ್ಕಿಗ ಪ್ರಕಾಶ ಹುಡೆದ ಭೇಟಿ ನೀಡಿ ವರದಿ ಸಂಗ್ರಹಿಸಿ ತಹಶೀಲ್ದಾರ್ ಕಚೇರಿ ಸಲ್ಲಿಸಿದ್ದಾರೆ.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group