ಸಿಂದಗಿ: ವಿದ್ಯಾರ್ಥಿಗಳಲ್ಲಿ ಪ್ರಜಾಪ್ರಭುತ್ವದ ಆದರ್ಶಗಳನ್ನು ಬೆಳೆಸಲು ಶಾಲಾ ಸಂಸತ್ತು ಸಹಾಯಕವಾಗಿದೆ. ಶಾಲಾ ಸಂಸತ್ತಿನ ಜವಾಬ್ದಾರಿಗಳನ್ನು ಸಮರ್ಪಕವಾಗಿ ನಿರ್ವಹಿಸುವುದರ ಮೂಲಕ ಮಕ್ಕಳು ನಾಳಿನ ನಾಯಕರಾಗಬೇಕೆಂದು ಮಕ್ಕಳ ಸಾಹಿತಿ ಎಸ್.ಎಸ್. ಸಾತಿಹಾಳ್ ಹೇಳಿದರು.
ಅವರು ಪಟ್ಟಣದ ವಿವೇಕ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್ ನಲ್ಲಿ ಜ್ಯೋತಿ ಬೆಳಗಿಸುವುದರ ಮೂಲಕ ಶಾಲಾ ಸಂಸತ್ತನ್ನು ಉದ್ಘಾಟಿಸಿ ಮಾತನಾಡುತ್ತಾ ಅಂಕಗಳಿಗೆ ಗಿಂತಲೂ ಭಾರತೀಯ ಸಂಸ್ಕೃತಿ ಮತ್ತು ಸಂಸ್ಕಾರ ಅನುಸರಿಸುವುದರ ಮೂಲಕ ಮಾನವೀಯ ಮೌಲ್ಯಗಳನ್ನು ಮೈಗೂಡಿಸಿಕೊಳ್ಳಬೇಕೆಂದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಪ್ರಾಚಾರ್ಯ ಶಾನಿಮೋಲ್ ಸ ರಾಬಿನ್ ರವರು ನೂತನ ಸಂಸತ್ ಸದಸ್ಯರಿಗೆ ಪ್ರಮಾಣವಚನ ಬೋಧಿಸಿದರು.
ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ ಎಚ್‌ಜಿ ಕಾಲೇಜಿನ ಪ್ರಾಚಾರ್ಯ ಎ ಆರ್ ಹೆಗ್ಗಣದೊಡ್ಡಿ ಮಾತನಾಡುತ್ತಾ, ವಿದ್ಯಾರ್ಥಿ ನಾಯಕರು ತಮಗೆ ವಹಿಸಿದ ಜವಾಬ್ದಾರಿಯನ್ನು ಸೂಕ್ತವಾಗಿ ನಿಭಾಯಿಸುವುದರ ಮೂಲಕ ನಾಯಕತ್ವದ ಗುಣಗಳನ್ನು ಬೆಳೆಸಿ ಕೊಳ್ಳಬೇಕೆಂದರು.
ಆಡಳಿತ ಅಧಿಕಾರಿ ಟೆನಿ ರಾಬಿನ್ ಹಾಗೂ ಸಂಸ್ಥೆಯ ಅಧ್ಯಕ್ಷ ನೀಲಮ್ಮ ಹೆಗ್ಗಣದೊಡ್ಡಿ ವೇದಿಕೆ ಮೇಲೆ ಉಪಸ್ಥಿತರಿದ್ದರು. ಪ್ರಿಯದರ್ಶಿನಿ ಮೇಡಂ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿನಿ ಪ್ರತಿನಿಧಿ ಕುಮಾರಿ ಶ್ರೀನಿಧಿ ಕುಲಕರ್ಣಿ ವಂದಿಸಿದರು.