ಬೀದರ್ ಇತಿಹಾಸದಲ್ಲೆ ಮೊದಲ ಬಾರಿಗೆ ಪರಿಷತ್ ಸಭಾಪತಿ ಸ್ಥಾನ

Must Read

ಬೀದರ – ಬೀದರ ಜಿಲ್ಲೆಯ ಇತಿಹಾಸದಲ್ಲಿಯೇ ಸ್ಥಳೀಯ ರಘುನಾಥ್ ಮಲ್ಕಾಪೂರೆಯವರನ್ನು ವಿಧಾನ ಪರಿಷತ್ ಸಭಾಪತಿಯಾಗಿ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಸಭಾಪತಿಯಾಗಿ ನೇಮಕವಾದ ಬಳಿಕ ಮೊದಲ ಬಾರಿಗೆ ಬೀದರ್ ಗೆ ಆಗಮಿಸಿದ ಮಲ್ಕಾಪೂರೆಯವರನ್ನು ಬೀದರ್ – ತೆಲಂಗಾಣ ಗಡಿಯಲ್ಲಿ ಪಕ್ಷದ ಕಾರ್ಯಕರ್ತರು ಪಟಾಕಿ ಸಿಡಿಸಿ, ಸನ್ಮಾನ ಮಾಡಿ ಅದ್ದೂರಿ ಸ್ವಾಗತ ಮಾಡಿಕೊಂಡರು.

ನಂತರ ಮಾತನಾಡಿದ ಮಲ್ಕಾಪೂರೆಯವರು, ಬೀದರ್ ನ ಸಾಮಾನ್ಯ ಕಾರ್ಯಕರ್ತನಾಗಿ 30 ವರ್ಷಗಳಿಂದ ಸಂಘಪರಿವಾರ ಮತ್ತು ಪಕ್ಷದಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ. ಮುಖ್ಯಮಂತ್ರಿ ಹಾಗೂ ರಾಜ್ಯಪಾಲರು ನನ್ನಂತ ಸಾಮಾನ್ಯ ಕಾರ್ಯಕರ್ತನನ್ನು ಸಭಾಪತಿಯಾಗಿ‌ ಮಾಡಿ ಬಹಳ ದೊಡ್ಡ ಜವಾಬ್ದಾರಿ ನೀಡಿದ್ದಾರೆ‌. ಪಕ್ಷಾತೀತವಾಗಿ ಕೆಲಸ ಮಾಡುವ ಸಮಯ ಬಂದಿದೆ ಎಂದರು.

ಈ ಸಮಯದಲ್ಲಿ ನಾನು ಬೀದರ್ ಜಿಲ್ಲೆಯ ಜನರಿಗೆ ಋಣಿಯಾಗಿದ್ದೇನೆ. ಅವರು ಯಾವಾಗಲೂ ನನ್ನ ಬೆಂಬಲಕ್ಕೆ ನಿಂತಿದ್ದಾರೆ ಎಂದು ನೂತನ ಸಭಾಪತಿ ರಘುನಾಥ್ ಮಲ್ಕಾಪೂರೆ ಹೇಳಿದರು.


ವರದಿ: ನಂದಕುಮಾರ ಕರಂಜೆ, ಬೀದರ

Latest News

ಬೆಳ್ಳಿ ಬಂಗಾರ ಕದ್ದ ಖದೀಮರ ಹೆಡೆಮುರಿ ಕಟ್ಟಿದ ಗೋಕಾಕ ಪೋಲಿಸರು

ಗೋಕಾಕ ನಗರದ ಬೀಗ ಹಾಕಿದ್ದ ಮನೆಯೊಂದರ ಕೀಲಿ ಮುರಿದು ಬೆಳ್ಳಿ ಬಂಗಾರ ಸೇರಿದಂತೆ ನಗದು ಹಣ ಕದ್ದು ಪರಾರಿಯಾಗಿದ್ದ ಕುಖ್ಯಾತ ಖದೀಮರನ್ನು ಗೋಕಾಕ ಪೋಲಿಸರು ಬಂಧಿಸುವಲ್ಲಿ...

More Articles Like This

error: Content is protected !!
Join WhatsApp Group