spot_img
spot_img

ಹಾಲು ಉತ್ಪಾದಕರ ಸಹಕಾರಿ ಸಂಘಗಳಿಗೆ ಹೈನುಗಾರ ರೈತರಿಂದ ಬಲ: ಶಾಸಕ ಬಾಲಚಂದ್ರ ಜಾರಕಿಹೊಳಿ

Must Read

spot_img
- Advertisement -

ಮೂಡಲಗಿ: ಹಾಲು ಉತ್ಪಾದಕ ಸಹಕಾರ ಸಂಘಗಳಿಗೆ ದಿನನಿತ್ಯ ಹಾಲು ಪೂರೈಕೆ ಮಾಡುವ ಮೂಲಕ ಸಂಘಗಳ ಏಳ್ಗೆಗೆ ಹೈನುಗಾರರು ಶ್ರಮಿಸಬೇಕು. ನಮ್ಮ ಮೂಡಲಗಿ ತಾಲೂಕಿನಿಂದ ಎರಡು ಸಂಘಗಳು ಜಿಲ್ಲೆಯಲ್ಲಿ ಉತ್ತಮ ಸ್ಥಾನ ಗಳಿಸುವ ಮೂಲಕ ತಾಲೂಕಿಗೆ ಹೆಮ್ಮೆಯ ಸಾಧನೆ ಮಾಡಿವೆ ಎಂದು ಕೆಎಂಎಫ್ ನಿರ್ದೇಶಕರೂ ಆಗಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.

ತಾಲೂಕಿನ ನಾಗನೂರ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹೈನುಗಾರರು ಮತ್ತು ಗ್ರಾಹಕರಿಂದ ನಮ್ಮ ಸಂಸ್ಥೆ ಬೆಳೆಯಲು ಕಾರಣವಾಗಿದೆ ಎಂದು ಹೇಳಿದರು.

- Advertisement -

ಇತ್ತೀಚೆಗೆ ಬೆಳಗಾವಿಯಲ್ಲಿ ಜರುಗಿದ ಜಿಲ್ಲಾ ಹಾಲು ಒಕ್ಕೂಟದ ವಾರ್ಷಿಕ ಸರ್ವಸಾಧಾರಣ ಸಭೆಯಲ್ಲಿ ಮೂಡಲಗಿ ತಾಲೂಕಿನ ಖಾನಟ್ಟಿಯ ಹಾಲು ಉತ್ಪಾದಕರ ಸಹಕಾರ ಸಂಘವು 2022-23ನೇ ಸಾಲಿನಲ್ಲಿ ದಿನಂಪ್ರತಿ 3700 ಲೀಟರ್ ಹಾಲು ಸಂಗ್ರಹಿಸುವ ಮೂಲಕ ಜಿಲ್ಲಾ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಸಂಘವು 20.70 ಲಕ್ಷ ರೂ. ನಿವ್ವಳ ಲಾಭ ಗಳಿಸಿದೆ ಎಂದು ಅವರು ತಿಳಿಸಿದರು.

ನಾಗನೂರ ಹಾಲು ಉತ್ಪಾದಕರ ಸಹಕಾರ ಸಂಘವು ದ್ವಿತೀಯ ಸ್ಥಾನವನ್ನು ಅಲಂಕರಿಸಿದ್ದು, ಇದು ಪ್ರತಿದಿನ 1370 ಲೀಟರ್ ಹಾಲು ಸಂಗ್ರಹಿಸಿ 2022-23ನೇ ಸಾಲಿನಲ್ಲಿ 7.40 ಲಕ್ಷ ರೂ. ನಿವ್ವಳ ಲಾಭ ಗಳಿಸಿದೆ. ಸುಮಾರು 170 ರೈತರು ಈ ಸಂಸ್ಥೆಗೆ ಹಾಲು ಪೂರೈಕೆ ಮಾಡುತ್ತಿರುವ ಹೈನುಗಾರ ರೈತರಿದ್ದಾರೆ. ರೈತರಿಂದಲೇ ನಾವೆಲ್ಲ ಬೆಳೆಯುತ್ತಿದ್ದೇವೆ ಎಂದು ಹೇಳಿದರು.

ಬೆಟಗೇರಿ ಹಾಲು ಉತ್ಪಾದಕರ ಸಹಕಾರಿ ಸಂಘವು ಗೋಕಾಕ ತಾಲೂಕಿನಿಂದ ಪ್ರಥಮ ಸ್ಥಾನ ಪಡೆದಿದ್ದು, ದಿನನಿತ್ಯ 3138 ಲೀಟರ್ ಹಾಲು ಸಂಗ್ರಹ ಮಾಡುತ್ತಿದೆ. ಶಿಂಧಿಕುರಬೇಟ ಹಾಲು ಉತ್ಪಾದಕರ ಸಂಘವು 2528 ಲೀಟರ್ ಹಾಲು ಸಂಗ್ರಹಿಸುವ ಮೂಲಕ ದ್ವಿತೀಯ ಸ್ಥಾನ ಪಡೆದಿದೆ ಎಂದು ತಿಳಿಸಿದರು.

- Advertisement -

ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಇದೇ ಸಂದರ್ಭದಲ್ಲಿ ಮೂಡಲಗಿ ತಾಲೂಕಿನಿಂದ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದಿರುವ ಖಾನಟ್ಟಿ ಹಾಗೂ ನಾಗನೂರ ಹಾಲು ಉತ್ಪಾದಕರ ಸಹಕಾರ ಸಂಘಗಳಿಗೆ ಪ್ರಶಸ್ತಿ ಪತ್ರಗಳನ್ನು ವಿತರಿಸಿದರು. ಜಿಲ್ಲಾ ಹಾಲು ಒಕ್ಕೂಟದಿಂದ ಹಾಲು ಉತ್ಪಾದಕರ ಸಹಕಾರಿ ಸಂಘಗಳಿಗೆ ತಲಾ 4 ಖುರ್ಚಿಗಳನ್ನು ವಿತರಿಸಿದರು.

ಈ ಸಂದರ್ಭದಲ್ಲಿ ಹಿರಿಯ ಸಹಕಾರಿ ಮುಖಂಡ ಬಿ.ಆರ್. ಪಾಟೀಲ(ನಾಗನೂರ), ಜಿಲ್ಲಾ ಹಾಲು ಒಕ್ಕೂಟದ ನಿರ್ದೇಶಕ ಮಲ್ಲಪ್ಪ ಪಾಟೀಲ, ಮುಖಂಡರಾದ ಚಂದ್ರು ಬೆಳಗಲಿ, ಸುಭಾಸ ಪಡದಲ್ಲಿ, ಭೀಮಗೌಡ ಹೊಸಮನಿ, ವಿಠ್ಠಲ ಗುಡೆನ್ನವರ, ಮುತ್ತೆಪ್ಪ ಖಾನಪ್ಪಗೋಳ, ಸಿದ್ದಪ್ಪ ಯಾದಗೂಡ, ಪರಸಪ್ಪ ಬಬಲಿ, ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಸುನೀಲ ಗಡದಿ, ಅರ್ಜುನ ನೇರ್ಲಿ, ಬಸವರಾಜ ತಿಗಡಿ, ಸಂಜು ಕರಬನ್ನವರ, ಖಾನಟ್ಟಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ರಾಮಪ್ಪ ತುಪ್ಪದ, ದುಂಡಪ್ಪ ಅರಗಿ, ವಿಸ್ತರಣಾಧಿಕಾರಿ ರವಿ ತಳವಾರ, ಮೂಡಲಗಿ ತಾಲೂಕಿನ ಎಲ್ಲ ಹಾಲು ಉತ್ಪಾದಕರ ಸಹಕಾರಿ ಸಂಘಗಳ ಅಧ್ಯಕ್ಷರು ಮತ್ತು ಮುಖ್ಯ ಕಾರ್ಯನಿರ್ವಾಹಕರು, ಮುಂತಾದವರು ಉಪಸ್ಥಿತರಿದ್ದರು.

- Advertisement -
- Advertisement -

Latest News

ಕವನ: ಕಲೆಯ ಲೀಲೆ

"ಕಲೆಯ ಲೀಲೆ" ಲೀಲಾವತಿ ಎಂದರೆ ಕಲೆಯ ಕಡಲು ನಟನೆಯಲ್ಲಿ ಕೈಗೆಟುಕದ ಮುಗಿಲು ಮರೆಯದ ಕಲಾವಿದೆ ಇವರು ಮರೆತರು ಇವರ ಇವರಿಂದ ಬೆಳೆದವರು ಸಾರುತ್ತಿದ್ದವು ಮೌಲ್ಯ ಇವರ ಚಿತ್ರಗಳು ಕಲಿಸುತ್ತಿದ್ದವು ಪಾಠ ಇವರ ಹಾಡುಗಳು ಜೀವನವೇ ಇರುತ್ತಿತ್ತು ಇವರ ಸಿನಿಮಾದಲ್ಲಿ ಬದುಕುತ್ತಿದ್ದರು ಸಿನಿಮಾದಂತೆ ಜನರು ಜೀವನದಲ್ಲಿ ಬಡವಾಯಿತು ಸಿನಿಮನೆ ಹಿರಿಯ ಕಲೆ ತಲೆಗಳಿಲ್ಲದೆ ಚಿತ್ರರಂಗ ಸಾಗಿದೆ ಕಲೆ...
- Advertisement -

More Articles Like This

- Advertisement -
close
error: Content is protected !!
Join WhatsApp Group