ಬೆಳಗಾವಿ: ಕನ್ನಡ ಪುಸ್ತಕ ಪ್ರಾಧಿಕಾರ–ಜಾಗೃತ ಸಮಿತಿ ರಚನೆ ಸಭೆ

Must Read

ಬೆಳಗಾವಿ – ಕನ್ನಡ ಪುಸ್ತಕ ಪ್ರಾಧಿಕಾರದ ಸಹಯೋಗದಲ್ಲಿ ಬೆಳಗಾವಿ ಜಿಲ್ಲಾ ಜಾಗೃತ ಸಮಿತಿ ರಚನೆ ಸಭೆ ಹಾಗೂ ಸಮಿತಿ ಸದಸ್ಯರಿಗೆ ಹಕ್ಕುಪತ್ರ ವಿತರಣೆ ಕಾರ್ಯಕ್ರಮವು ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಇಂದು ಯಶಸ್ವಿಯಾಗಿ ನೆರವೇರಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಹಿರಿಯ ಸಾಹಿತಿ ಡಿ. ಎಸ್. ಚೌಗಲೆ ಅವರು, ಕನ್ನಡದ ಪುಸ್ತಕಗಳನ್ನು ಓದುಗರ ಬಳಿಗೆ ತಲುಪಿಸುವ ಮಹತ್ವದ ಕಾರ್ಯವನ್ನು ಕನ್ನಡ ಪುಸ್ತಕ ಪ್ರಾಧಿಕಾರ ಮಾಡುತ್ತಿದೆ ಎಂದು ಪ್ರಶಂಸಿಸಿದರು. ಇಂತಹ ಪ್ರಯತ್ನಗಳು ಕನ್ನಡ ಸಾಹಿತ್ಯದ ವಿಸ್ತಾರಕ್ಕೆ ಮತ್ತು ಓದುಗರ ಸಂಖ್ಯೆಯ ವೃದ್ಧಿಗೆ ಸಹಕಾರಿಯಾಗುತ್ತವೆ ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಮಾನಸ ಅವರು ಮಾತನಾಡಿ, ಪ್ರಾಧಿಕಾರದ ಉದ್ದೇಶಗಳು, ನಡೆಯುತ್ತಿರುವ ಯೋಜನೆಗಳು ಹಾಗೂ ಮುಂದಿನ ದಿನಗಳಲ್ಲಿ ಕೈಗೊಳ್ಳಲಿರುವ ಕಾರ್ಯಯೋಜನೆಗಳ ಕುರಿತು ವಿವರಿಸಿದರು. ಜಿಲ್ಲಾ ಮಟ್ಟದಲ್ಲಿ ಜಾಗೃತ ಸಮಿತಿಗಳ ರಚನೆಯಿಂದ ಕನ್ನಡ ಪುಸ್ತಕಗಳ ಪ್ರಚಾರ ಹಾಗೂ ವಿತರಣೆಗೆ ಇನ್ನಷ್ಟು ಬಲ ಸಿಗಲಿದೆ ಎಂದು ಹೇಳಿದರು.

ಕಾರ್ಯಕ್ರಮದ ಪ್ರಾಸ್ತಾವಿಕವನ್ನು ಕುಶಾಲ ಬರಗೂರ ಅವರು ಮಾಡಿದರು. ಹಿರಿಯ ಸಾಹಿತಿ ಯಲ್ಲಪ್ಪ ಹಿಮ್ಮಡಿ ಸರ್ ಹಾಗೂ ಶಂಕರ ಬಾಗೇವಾಡಿ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮದ ನಿರೂಪಣೆಯನ್ನು ಹಿರಿಯ ಸಾಹಿತಿ ಶಂಕರ ಬಾಗೇವಾಡಿ ಅವರು ನಿಭಾಯಿಸಿದರು.ಸ್ವಾಗತವನ್ನು ಶ್ರೀನಿವಾಸ ಕರಿಯಪ್ಪ ನೆರವೇರಿಸಿದರು.

ಕಾರ್ಯಕ್ರಮದ ಅಂತ್ಯದಲ್ಲಿ ಜಾಗೃತ ಸಮಿತಿ ಸದಸ್ಯರಿಗೆ ಹಕ್ಕುಪತ್ರಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಸಾಹಿತಿಗಳು, ಸಾಹಿತ್ಯಾಸಕ್ತರು ಹಾಗೂ ಗಣ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group