ಬೈಲಹೊಂಗಲ : ಕನ್ನಡ ಸಾಹಿತ್ಯ ಪರಿಷತ್ತು ಬೈಲಹೊಂಗಲ ತಾಲ್ಲೂಕಾ ಘಟಕದ ವತಿಯಿಂದ ಕನ್ನಡ ಸಾಹಿತ್ಯ ಪರಿಷತ್ತಿನ 109 ನೆಯ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮವನ್ನು ಶುಕ್ರವಾರ ದಿನಾಂಕ 05 ರಂದು ಮಧ್ಯಾಹ್ನ 3 ಗಂಟೆಗೆ ಪಟ್ಟಣದ ದೇವಲಾಪೂರ ರಸ್ತೆಯಲ್ಲಿರುವ ಕೆ.ಎಲ್.ಇ ಪಾಲಿಟೆಕ್ನಿಕ್ ಮಹಾವಿದ್ಯಾಲಯದಲ್ಲಿ ಆಯೋಜಿಸಲಾಗಿದೆ ಎಂದು ಬೈಲಹೊಂಗಲ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎನ್.ಆರ್.ಠಕ್ಕಾಯಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕನ್ನಡ ಸಾಹಿತ್ಯ ಪರಿಷತ್ತು ಮೇ 5, 1915 ರಂದು ಸ್ಥಾಪನೆಯಾಗಿದ್ದು ಈ ದಿನವನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆಯನ್ನಾಗಿ ಆಚರಿಸುತ್ತಿರುವ ಹಿನ್ನೆಲೆಯಲ್ಲಿ ‘ಕನ್ನಡದ ಅಸ್ಮಿತೆ-ಕನ್ನಡ ಸಾಹಿತ್ಯ ಪರಿಷತ್ತು’ ಎಂಬ ವಿಷಯದ ಮೇಲೆ ಉಪನ್ಯಾಸ ಏರ್ಪಡಿಲಾಗಿದೆ. ಬೈಲಹೊಂಗಲದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ. ಫಕೀರನಾಯ್ಕ ಗಡ್ಡಿಗೌಡರ ಉಪನ್ಯಾಸ ನೀಡಲಿದ್ದಾರೆ.
ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಕಾರ್ಯಕಾರಿ ಸಮಿತಿ ಸದಸ್ಯರಾದ ಶ್ರೀಮತಿ ಮೀನಾಕ್ಷಿ ಕುಡಸೋಮಣ್ಣವರ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಬೈಲಹೊಂಗಲದ ಕೆ.ಎಲ್.ಇ ಪಾಲಿಟಿಕ್ನಿಕ್ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಪ್ರೊ. ಶ್ರೀಧರ ಬ. ನಿರಡಿ ಅಧ್ಯಕ್ಷತೆ ವಹಿಸಲಿದ್ದಾರೆ.
ಕನ್ನಡ ಸಾಹಿತ್ಯ ಪರಿಷತ್ತಿನ ಸರ್ವ ಸದಸ್ಯರು, ಸಾಹಿತಿಗಳು, ಕಲಾವಿದರು ಹಾಗೂ ಎಲ್ಲ ಕನ್ನಡ ಪ್ರೇಮಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಕಸಾಪ ಬೈಲಹೊಂಗಲ ತಾಲ್ಲೂಕಾ ಅಧ್ಯಕ್ಷ ಎನ್.ಆರ್.ಠಕ್ಕಾಯಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.