ಬೈಲಹೊಂಗಲ : ಕನ್ನಡ ಸಾಹಿತ್ಯ ಪರಿಷತ್ತು ಬೈಲಹೊಂಗಲ ತಾಲ್ಲೂಕಾ ಘಟಕದ ವತಿಯಿಂದ ಕನ್ನಡ ಸಾಹಿತ್ಯ ಪರಿಷತ್ತಿನ ೧೦೮ ನೆಯ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮವನ್ನು ಗುರುವಾರ ದಿನಾಂಕ ೦೫ ರಂದು ಮಧ್ಯಾಹ್ನ ೩ ಗಂಟೆಗೆ ಪಟ್ಟಣದ ಕಿತ್ತೂರು ರಾಣಿ ಚನ್ನಮ್ಮ ಶಿಕ್ಷಣ ಸಂಸ್ಥೆಯ ಶಿಕ್ಷಣ ಮಹಾವಿದ್ಯಾಲಯದಲ್ಲಿ (ಬಿ.ಇಡಿ ಕಾಲೇಜು) ಆಯೋಜಿಸಲಾಗಿದೆ ಎಂದು ಬೈಲಹೊಂಗಲ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎನ್.ಆರ್.ಠಕ್ಕಾಯಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕನ್ನಡ ಸಾಹಿತ್ಯ ಪರಿಷತ್ತು ಮೇ ೫, ೧೯೧೫ ರಂದು ಸ್ಥಾಪನೆಯಾಗಿದ್ದು ಈ ದಿನವನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆಯನ್ನಾಗಿ ಆಚರಿಸುತ್ತಿರುವ ಹಿನ್ನೆಲೆಯಲ್ಲಿ ‘ಕನ್ನಡ ಮನಸ್ಸುಗಳ ಮೇಲೆ ಕನ್ನಡ ಸಾಹಿತ್ಯ ಪರಿಷತ್ತು ಬೀರಿದ ಪ್ರಭಾವ’ ಎಂಬ ವಿಷಯದ ಮೇಲೆ ಉಪನ್ಯಾಸ ಏರ್ಪಡಿಲಾಗಿದೆ. ಹಿರೇಬಾಗೇವಾಡಿಯ ಕರ್ನಾಟಕ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯದ ಮುಖ್ಯೋಪಾಧ್ಯಾಯರಾದ ಶಂಕರ ರು. ದಂಡಿನ ಉಪನ್ಯಾಸ ನೀಡಲಿದ್ದಾರೆ. ಶಿಕ್ಷಕ-ಸಾಹಿತಿಗಳಾದ ರಾಜೇಂದ್ರಸ್ವಾಮಿ ಗು. ಹಿರೇಮಠ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಕೆ.ಆರ್.ಸಿ.ಇ.ಎಸ್ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ಎಂ.ಬಿ. ತಲ್ಲೂರ ಅಧ್ಯಕ್ಷತೆ ವಹಿಸಲಿದ್ದಾರೆ.
ಕನ್ನಡ ಸಾಹಿತ್ಯ ಪರಿಷತ್ತಿನ ಬೈಲಹೊಂಗಲ ತಾಲ್ಲೂಕಿನ ಕಾರ್ಯಕಾರಿ ಸಮಿತಿಯ ಎಲ್ಲ ಸದಸ್ಯರು, ಸಾಹಿತಿಗಳು, ಕಲಾವಿದರು ಹಾಗೂ ಎಲ್ಲ ಕನ್ನಡ ಪ್ರೇಮಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಕಸಾಪ ಬೈಲಹೊಂಗಲ ತಾಲ್ಲೂಕಾ ಅಧ್ಯಕ್ಷ ಎನ್.ಆರ್.ಠಕ್ಕಾಯಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.