ಫೆ. 20ರಂದು ಲಯನ್ಸ್ ಕ್ಲಬ್‍ದಿಂದ ಉಚಿತ ನೇತ್ರ ತಪಾಸಣೆ ಶಿಬಿರ

Must Read

ಮೂಡಲಗಿ: ಲಯನ್ಸ್ ಕ್ಲಬ್ ಮೂಡಲಗಿ ಪರಿವಾರ, ಡಾ. ಸಚಿನ ಮೂಡಲಗಿ ಕಣ್ಣಿನ ಆಸ್ಪತ್ರೆ ಹಾಗೂ ಬೆಳಗಾವಿಯ ಜಿಲ್ಲಾ ಅಂಧತ್ವ ನಿಯಂತ್ರಣ ಕಚೇರಿ ಇವರ ಸಂಯುಕ್ತ ಆಶ್ರಯದಲ್ಲಿ ಫೆ. 20ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 2 ಗಂಟೆಯ ವರೆಗೆ ಕಾಲೇಜು ರಸ್ತೆಯಲ್ಲಿರುವ ನೂತನ ಕಟ್ಟಡದಲ್ಲಿರುವ ಸುಸಜ್ಜಿತ ಮತ್ತು ಅತ್ಯಾಧುನಿಕ ತಂತ್ರಜ್ಞಾನವನ್ನೊಳಗೊಂಡಿರುವ ಡಾ. ಸಚಿನ ಕಣ್ಣಿನ ಆಸ್ಪತ್ರೆಯಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರವನ್ನು ಏರ್ಪಡಿಸಿರುವರು.

ಶಿಬಿರದಲ್ಲಿ ನೇತ್ರ ತಜ್ಞ ಡಾ. ಸಚಿನ ಟಿ. ಅವರು ಕಣ್ಣಿನ ಎಲ್ಲ ಕಾಯಲೆಗಳ ತಪಾಸಣೆ, ಚಿಕಿತ್ಸೆ ಮತ್ತು ಪರಿಹಾರವನ್ನು ಉಚಿತವಾಗಿ ನೀಡುವರು.

ಮೂಡಲಗಿ ತಾಲ್ಲೂಕು ವ್ಯಾಪ್ತಿಯ ಸಾರ್ವಜನಿಕರು ಶಿಬಿರದ ಪ್ರಯೋಜನವನ್ನು ಪಡೆದುಕೊಳ್ಳಬೇಕು ಎಂದು ಲಯನ್ಸ್ ಕ್ಲಬ್ ಪರಿವಾರದ ಅಧ್ಯಕ್ಷ ಬಾಲಶೇಖರ ಬಂದಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಂಪರ್ಕ ಮೊ: 8861586126, 9739906126, 9448839086 ಸಂಪರ್ಕಿಸಲು ತಿಳಿಸಿರುವರು.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group