ಉಚಿತ ಕಣ್ಣು ತಪಾಸನೆ ಹಾಗೂ ಶಸ್ತ್ರಚಿಕಿತ್ಸೆ ಶಿಬಿರ

Must Read

ಸಿಂದಗಿ; ಪೂಜ್ಯ ಶ್ರೀ ಚೆನ್ನವೀರಸ್ವಾಮೀಜಿ ಪ್ರತಿಷ್ಠಾನ, ಸಿಂದಗಿ, ಜಿಲ್ಲಾ ಅಂಧತ್ವ ನಿವಾರಣಾ ಸಂಸ್ಥೆ, ವಿಜಯಪುರ ಹಾಗೂ ಅನುಗ್ರಹ ವಿಜನ್ ಫೌಂಡೇಶನ್ ಟ್ರಸ್ಟ್, ವಿಜಯಪುರ, ಜಿ.ಪಿ. ಪೋರವಾಲ ಕಲಾ, ವಾಣಿಜ್ಯ ಮತ್ತು ವಿ.ವಿ. ಸಾಲಿನಮಠ ವಿಜ್ಞಾನ ಮಹಾವಿದ್ಯಾಲಯ ಇವುಗಳ ಸಹಯೋಗದಲ್ಲಿ 22 ರಂದು ಬುಧವಾರ ಬೆಳಗ್ಗೆ 10 ರಿಂದ 1 ಗಂಟೆಯವರೆಗೆ ಸಾರಂಗಮಠ ಮಠದಲ್ಲಿ ಉಚಿತ ಕಣ್ಣಿನ ತಪಾಸಣೆ ಹಾಗೂ ಶಸ್ತ್ರಚಿಕಿತ್ಸಾ ಶಿಬಿರ ಹಮ್ಮಿಕೊಳ್ಳಲಾಗಿದೆ

ಕಾರಣ ಸಾರ್ವಜನಿಕರು ಈ ಶಿಬಿರದ ಸದುಪಯೋಗ ಪಡೆದುಕೊಳ್ಳುವಂತೆ ಪೂಜ್ಯ ಶ್ರೀ ಚೆನ್ನವೀರಸ್ವಾಮೀಜಿ ಪ್ರತಿಷ್ಠಾನವು ವಿನಂತಿಸಿದೆ

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ವಿಜಯಪುರ ನಗರದ ಅನುಗ್ರಹ ಕಣ್ಣಿನ ಆಸ್ಪತ್ರೆ,ಯ ಡಾ|| ಪ್ರಭುಗೌಡ ಐ.ಎಲ್.(ಚಬನೂರ), ಜಿಲ್ಲಾ ಅಧ್ಯಕ್ಷರು ಜಿಲ್ಲಾ ಅಂಧತ್ವ ಸಂಸ್ಥೆ ಹಾಗೂ ಸಮನ್ವಯ ಅಧಿಕಾರಿ ಡಾ|| ಎಸ್.ಎಮ್, ಗುಣಾಲ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಬಸವರಾಜ ಹುಬ್ಬಳ್ಳಿ, ತಾಲೂಕಾ ಆರೋಗ್ಯ ಅಧಿಕಾರಿ ಡಾ| ಎ.ಎ. ಮಾಲ, ಸಾರ್ವಜನಿಕ ಸಂಪರ್ಕ ಅಧಿಕಾರಿ ದತ್ತಾತ್ರೇಯ ಮ. ಹೊಸಮಠ, ಅನುಗ್ರಹ ಕಣ್ಣಿನ ಆಸ್ಪತ್ರೆ, ಸುರೇಶ ಮಹೇಂದ್ರಿಕರ ಹೆಚ್ಚಿನ ವಿಷಯಗಳಿಗಾಗಿ ನೇತ್ರಾಧಿಕಾರಿಗಳು, ಸಿಂದಗಿ-ಆಲಮೇಲ .9986065552, 9632762966 ಸಂಪರ್ಕಿಸಬಹುದು ಎಂದಿದ್ದಾರೆ

ಶಸ್ತ್ರ ಚಿಕಿತ್ಸೆ ಮಾಡಿಸಿಕೊಳ್ಳುವವರು ಆಧಾರ ಕಾರ್ಡ ಮತ್ತು 2 ಪಾಸ್‍ಪೋರ್ಟ ಸೈಜ್ ಫೋಟೊ ಕಡ್ಡಾಯವಾಗಿ ತರಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group