Homeಸುದ್ದಿಗಳುಡಿಸೆಂಬರ್ 25 ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ

ಡಿಸೆಂಬರ್ 25 ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ

ಸಿಂದಗಿ: ದೇವಣಗಾಂವ ಗ್ರಾಮದ ಪ್ರಗತಿಪರ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಡಿಸೆಂಬರ್ 25 ರಂದು ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದು ವಿಜಯಪುರ ಉಟಗಿ ಆಸ್ಪತ್ರೆಯ ವೈದ್ಯ ಡಾ.ಮಲ್ಲಿಕಾರ್ಜುನ ಉಟಗಿ ತಿಳಿಸಿದ್ದಾರೆ.

ಶಾಸಕ ರಮೇಶ ಭೂಸನೂರ ಅವರ ನೇತೃತ್ವದಲ್ಲಿ, ಪ್ರಗತಿಪರ ಶಿಕ್ಷಣ ಸಂಸ್ಥೆಯ ಆಶ್ರಯದಲ್ಲಿ, ವಿಜಯಪುರದ ಉಟಗಿ ಆಸ್ಪತ್ರೆಯ ಸಹಯೋಗದೊಂದಿಗೆ ಗ್ರಾಮದ ಪ್ರಗತಿಪರ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.

ಬೆಳಿಗ್ಗೆ 10 ರಿಂದ ಸಂಜೆ 4 ಘಂಟೆಯವರೆಗೆ ವಿವಿಧ ರೋಗಗಳ ತಜ್ಞ ವೈದ್ಯರು ಭಾಗವಹಿಸಲಿದ್ದಾರೆ ಆದ್ದರಿಂದ ಸುತ್ತಲಿನ ಗ್ರಾಮಗಳ ಜನರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ವಿನಂತಿಸಿದ್ದಾರೆ ಹೆಚ್ಚಿನ ಮಾಹಿತಿಗಾಗಿ 7349594645, 9900998660 ಸಂಪರ್ಕಿಸಿ

RELATED ARTICLES

Most Popular

error: Content is protected !!
Join WhatsApp Group