ಲಿಂಗಾಯತ ವಿದ್ಯಾರ್ಥಿನಿಯರಿಗೆ ಉಚಿತ ಹಾಸ್ಟೆಲ್ ಕಟ್ಟಡದ ಶಂಕುಸ್ಥಾಪನೆ

0
642

ಬೆಳಗಾವಿ – ಅಖಿಲ ಭಾರತ ವೀರಶೈವ ಮಹಾಸಭಾ ಬೆಳಗಾವಿ ಜಿಲ್ಲಾ ಘಟಕದ ವತಿಯಿಂದ ಬೆಳಗಾವಿಯ ಸುಭಾಸ ನಗರದಲ್ಲಿ ವೀರಶೈವ ಲಿಂಗಾಯತ ವಿದ್ಯಾರ್ಥಿನಿಯರಿಗಾಗಿ ಉಚಿತ ವಸತಿ ನಿಲಯ ನಿರ್ಮಾಣಗೊಳ್ಳಲಿದ್ದು ಅದರ ಶಂಕುಸ್ಥಾಪನೆಯನ್ನು ದಿ. ೧೩ ರಂದು ಬೆಳಿಗ್ಗೆ ೮.೩೦ ಕ್ಕೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ನೆರವೇರಿಸಲಿದ್ದಾರೆ.

ಸಮಾರಂಭದ ದಿವ್ಯ ಸಾನ್ನಿಧ್ಯವನ್ನು ನಾಗನೂರು ರುದಗರಾಕ್ಷಿ ಮಠದ ಡಾ.ಅಲ್ಲಮಪ್ರಭು ಸ್ವಾಮಿಗಳು ಹಾಗೂ ಕಾರಂಜಿಮಠದ ಗುರುಸಿದ್ಧ ಮಹಾಸ್ವಾಮಿಗಳು ವಹಿಸಿಕೊಳ್ಳಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ, ಸಂಸದೆ ಶ್ರೀಮತಿ ಮಂಗಲಾ ಅಂಗಡಿ, ಶಾಸಕಿ ಲಕ್ಷ್ಮೀ ಹೆಬ್ಬಾಳಕರ, ಮಾಜಿ ವಿ ಪ ಸದಸ್ಯ ಮಹಾಂತೇಶ ಕವಟಗಿಮಠ ಹಾಗೂ ರಾಜ್ಯ ವೀರಶೈವ ಮಹಾಸಭಾ ಜಿಲ್ಲಾ ಉಸ್ತುವಾರಿಗಳಾದ ರುದ್ರಣ್ಣ ಹೊಸಕೇರಿ ಆಗಮಿಸಲಿದ್ದಾರೆ ಎಂದು ವೀರಶೈವ ಮಹಾಸಭಾ ಬೆಳಗಾವಿ ಜಿಲ್ಲಾ ಘಟಕದ ಅಧ್ಯಕ್ಷೆ ಶ್ರೀಮತಿ ರತ್ನಪ್ರಭಾ ಬೆಲ್ಲದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.