ಮೂಡಲಗಿ– ಸರ್ಕಾರದ ಯೋಜನೆಗಳನ್ನು ಪ್ರತಿ ಮಕ್ಕಳು ಪಡೆದು ಉತ್ತಮ ಶಿಕ್ಷಣ ಹೊಂದಿ ಕಲಿತ ಶಾಲೆಗೂ ಹೆತ್ತ ತಂದೆ ತಾಯಿಗೂ ಗ್ರಾಮಕ್ಕೂ ಕೀರ್ತಿ ತರಬೇಕು ಎಂದು ಮೂಡಲಗಿ ಕ್ಷೇತ್ರ ಶಿಕ್ಷಣಾಧಿಕಾರಿ ಅಜೀತ ಮನ್ನಿಕೇರಿ ಹೇಳಿದರು,
ಸಮೀಪದ ಕಲ್ಲೋಳಿಯ ಬಸವೇಶ್ವರ ಶಿಕ್ಷಣ ಸಂಸ್ಥೆಯಲ್ಲಿ 2022-23 ನೇ ಶೈಕ್ಷಣಿಕ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರ ವಿತರಣೆ ಮಾಡಿ ಅವರು ಮಾತನಾಡಿದರು,
ಈ ಸಂಸ್ಥೆಯಲ್ಲಿ ಕಲಿಯುವ ಮಕ್ಕಳು ಭಾಗ್ಯಶಾಲಿಗಳು 1 ನೇ ತರಗತಿಯಿಂದ 10ನೇ ತರಗತಿಯ ವರೆಗೆ ಉಚಿತ ಶಿಕ್ಷಣದ ಜೊತೆಗೆ ಸರ್ಕಾರದ ಸೌಲಭ್ಯಗಳು ಸಿಗುತ್ತವೆ. ಮಕ್ಕಳು ಅವುಗಳ ಸದುಪಯೋಗ ಮಾಡಿಕೊಳ್ಳಬೇಕು ಎಂದರು.
ಸಂಸ್ಥೆಯ ಅಧ್ಯಕ್ಷ ರಮೇಶ ಬೆಳಕೂಡ ಮಾತನಾಡಿ, ನಮ್ಮ ಸಂಸ್ಥೆಯಲ್ಲಿ ಪ್ರತಿ ಮಗುವಿಗೂ ಕಾಳಜಿಯಿಂದ ಶಿಕ್ಷಣ ನೀಡಲಾಗುತ್ತಿದೆ ಇದರ ಪ್ರಯೋಜನವನ್ನು ಪಾಲಕರು ಪಡೆಯಬೇಕು ಎಂದರು.
ಸಂಸ್ಥೆಯ ಆಡಳಿತಾಧಿಕಾರಿ ಪ್ರಕಾಶ ಗರಗಟ್ಟಿ,ಶಾಲೆಯ ಮುಖ್ಯ ಶಿಕ್ಷಕರು ಹಿಪೋ ಕ್ಯಾಂಪಸ್ ಪ್ರಾಚಾರ್ಯರು ಇದ್ದರು.