spot_img
spot_img

ಆರ್.ಡಿ.ಪಾಟೀಲ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಸ್ನೇಹ ಸಮ್ಮೇಳನ

Must Read

- Advertisement -

ಸಿಂದಗಿ: ಸಮಾಜದಲ್ಲಿ ತಂತ್ರಜ್ಞಾನ ವೇಗವಾಗಿ ಬೆಳೆದರೂ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನ, ನೈತಿಕತೆ ನಿರ್ಮಾಣದಲ್ಲಿ ಉಪನ್ಯಾಸಕರ ಪಾತ್ರ ಮಹತ್ವದ್ದಾಗಿದೆ ಎಂದು ನಾಲತವಾಡ ವೀರೇಶ್ವರ ಪ.ಪೂ.ಕಾಲೇಜಿನ ಪ್ರಾಚಾರ್ಯ ಡಾ. ದತ್ತಾತ್ರೇಯ ಮಳಖೇಡ ಹೇಳಿದರು.

ಪಟ್ಟಣದ ಶ್ರೀ ಪದ್ಮರಾಜ ವಿದ್ಯಾವರ್ಧಕ ಸಂಸ್ಥೆಯ ಆರ್.ಡಿ.ಪಾಟೀಲ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಜರುಗಿದ ವಾರ್ಷಿಕ ಸ್ನೇಹ ಸಮ್ಮೇಳನದಲ್ಲಿ ಮುಖ್ಯಅತಿಥಿಗಳಾಗಿ ಅವರು ಮಾತನಾಡಿ, ಮುಂದಿನ ಪರೀಕ್ಷೆಗಳಿಗೆ ಸರಿಯಾಗಿ ಅಧ್ಯಯನ ಮಾಡಿ, ವಿದ್ಯಾರ್ಥಿ ಜೀವನದಲ್ಲಿ ಪಿಯುಸಿ ಪ್ರಮುಖ ಘಟ್ಟವಾಗಿದೆ. ಉನ್ನತ ಕೋರ್ಸಗಳಿಗೆ ಪ್ರವೇಶ ಪಡೆಯಲು ಉತ್ತಮ ಫಲಿತಾಂಶ ಪಡೆಯಬೇಕು ಎಂದು ಸಲಹೆ ನೀಡಿದರು. 

ಸಾನ್ನಿಧ್ಯ ವಹಿಸಿದ ಸಂಸ್ಥೆಯ ಚೇರಮನ್‍ರಾದ ಡಾ. ಪ್ರಭು ಸಾರಂಗದೇವ ಶಿವಾಚಾರ್ಯರು ವಿದ್ಯಾರ್ಥಿಗಳಿಗೆ ಆಶೀರ್ವಚನ ನೀಡಿದರು. ಪ್ರಾಚಾರ್ಯ ವಿಮಲಕಾಂತ ಡಿ. ಪಾಟೀಲ ಅಧ್ಯಕ್ಷತೆ ವಹಿಸಿದ್ದರು. 

- Advertisement -

ಇದೇ ಸಂದರ್ಭದಲ್ಲಿ ನಿವೃತ್ತ ಪ್ರಾಚಾರ್ಯ ವಿಜಯಕುಮಾರ ಜಿರಲಿ ಹಾಗೂ ನೂತನ ಪ್ರಾಚಾರ್ಯ ವಿಮಲಕಾಂತ ಪಾಟೀಲ ದಂಪತಿಗಳಿಗೆ, ರಾಜ್ಯಮಟ್ಟದ ಚುನಾವಣಾ ಸಾಕ್ಷರತಾ ಕ್ಲಬ್ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ಎನ್.ಬಿ.ಪೂಜಾರಿ ಅವರಿಗೆ ಮತ್ತು 2021-22 ನೇ ಸಾಲಿನ ಪಿಯುಸಿ ದ್ವಿತೀಯ ವರ್ಷದ ಪರೀಕ್ಷೆಯಲ್ಲಿ ಅತ್ಯುನ್ನತ್ತ ಶ್ರೇಣಿಯಲ್ಲಿ ಪಾಸಾದ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಗೌರವಿಸಲಾಯಿತು. ಸ್ನೇಹ ಸಮ್ಮೇಳನದ ಕಾರ್ಯಾಧ್ಯಕ್ಷ ಪಿ.ವ್ಹಿ.ಮಹಲಿನಮಠ ಅವರು ವಾರ್ಷಿಕ ವರದಿಯನ್ನು ಮಂಡಿಸಿದರು. 

ಈ ಸಮಾರಂಭದಲ್ಲಿ ಸಂಸ್ಥೆಯ ಆಡಳಿತಾಧಿಕಾರಿ ಬಿ.ಜಿ.ಮಠ, ನಿರ್ದೇಶಕ ನೆಹರು ಪೋರವಾಲ, ಸಾಹಿತಿ ಡಾ.ಚನ್ನಪ್ಪ ಕಟ್ಟಿ, ಡಾ.ಎಂ.ಎಂ.ಪಡಶೆಟ್ಟಿ, ಆರ್.ಎಂ.ಬಿರಾದಾರ, ಆರ್.ಎಂ.ಭೂಶೆಟ್ಟಿ, ಶಿವಮಾಂತ ಪೂಜಾರಿ, ಎಸ್.ಆರ್. ಬೂದಿಹಾಳ, ಭೀಮನಗೌಡ ಸಿಂಗನಳ್ಳಿ, ಎಸ್.ಜಿ.ಮಾರ್ಸನಳ್ಳಿ, ಎಸ್.ಎಚ್.ಜಾಧವ, ಎಸ್.ಎಸ್.ತಾಳಿಕೋಟಿ, ಸುನೀಲಪಾಟೀಲ, ಡಾ. ವಿಶ್ವನಾಥ ನಂದಿಕೋಲ, ಬಿ.ಬಿ.ಜಮಾದಾರ, ಬಿ.ಜಿ.ಅವಟಿ ಸಂಗಮೇಶ ಚಾವರ, ಎನ್.ಎಂ.ಶೆಳ್ಳಗಿ ಸೇರಿದಂತೆ ಇನ್ನಿತರರು ಇದ್ದರು.

ಕಾರ್ಯಕ್ರಮವನ್ನು ಬಿ.ಎಂ.ಸಿಂಗನಳ್ಳಿ ಸ್ವಾಗತಿಸಿದರು, ಕಾಲೇಜಿನ ವಿದ್ಯಾರ್ಥಿನಿಯರಾದ ಕುಮಾರಿ ಸೃಷ್ಠಿ, ಭುವನೇಶ್ವರಿ ಪ್ರಾರ್ಥಿಸಿದರು. ಕುಮಾರಿ ಅಶ್ವಿನಿ, ನೀತಾ, ಬೌರಮ್ಮ ನಿರೂಪಿಸಿದರು. ಪ್ರಧಾನ ಕಾರ್ಯದರ್ಶಿ ಲಾಲಸಾಬ ದಲಾಲ ವಂದಿಸಿದರು.

- Advertisement -
- Advertisement -

Latest News

ಅಂಕೋಲೆಯ ಉಪ್ಪಿನ ಸತ್ಯಾಗ್ರಹಕ್ಕೆ ತೊಂಬತ್ನಾಲ್ಕು ವರ್ಷ

ಭಾರತದ ಸ್ವಾತಂತ್ರ್ಯ ಸಂಗ್ರಾಮದ ಇತಿಹಾಸ ಬಹು ವರ್ಣರಂಜಿತ. ಈ ಬೃಹತ್ ಚರಿತ್ರೆಯಲ್ಲಿ ಅಂಕೋಲೆಗೆ ಒಂದು ಪ್ರತ್ಯೇಕ ಅಧ್ಯಾಯವೇ ಇದೆ. ಈ ಅಧ್ಯಾಯ ಒದಗಿ ಬಂದದ್ದು ಇಡೀ...
- Advertisement -

More Articles Like This

- Advertisement -
close
error: Content is protected !!
Join WhatsApp Group