ಸ್ಮಾರ್ಟ್ ಸಿಟಿ ಯೋಜನೆಗೆ ಕೇಂದ್ರದಿಂದ ಹಣ – ಕಡಾಡಿ ಮಾಹಿತಿ

Must Read

ಮೂಡಲಗಿ: ಬೆಳಗಾವಿ ಸ್ಮಾಟ್ ಸಿಟಿ ಮಿಷನ್ ಯೋಜನೆಗೆ ನಗರ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ಕೇಂದ್ರ ಸರ್ಕಾರ 392 ಕೋಟಿ ಅನುದಾನವನ್ನು ಬಿಡುಗಡೆ ಮಾಡಲಾಗಿದ್ದು, ಈಗಾಗಲೇ 294 ಕೋಟಿ ರೂ. ಅನುದಾನ ಬಳಕೆ ಆಗಿದೆ ಎಂದು ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ರಾಜ್ಯ ಸಚಿವ ಕೌಶಲ್ ಕಿಶೋರ್ ಅವರು ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆಂದು ಸಂಸದ ಈರಣ್ಣ ಕಡಾಡಿ ಹೇಳಿದರು.

ಸಂಸತ್ತಿನ ಚಳಿಗಾಲ ಅಧಿವೇಶನದಲ್ಲಿ ಭಾರತ ಸರ್ಕಾರದ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು ಕರ್ನಾಟಕದಲ್ಲಿ ನಗರ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯ ಕುರಿತು ಸಂಸದ ಈರಣ್ಣ ಕಡಾಡಿ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯದ ಬೆಳಗಾವಿ, ಬೆಂಗಳೂರು, ದಾವಣಗೆರೆ, ಹುಬ್ಬಳಿ-ಧಾರವಾಡ, ಮಂಗಳೂರು, ಶಿವಮೊಗ್ಗ ಮತ್ತು ತುಮಕೂರು ಸೇರಿದಂತೆ 7 ನಗರಗಳಲ್ಲಿ ಸ್ಮಾಟ್ ಸಿಟಿ ಮಿಷನ್ ಯೋಜನೆಯನ್ನು ಕೈಗೊಳ್ಳಲಾಗಿದ್ದು, ಇದುವರೆಗೆ ರಾಜ್ಯಕ್ಕೆ ಒಟ್ಟು 2213 ಕೋಟಿ ರೂ ಅನುದಾನ ಬಿಡುಗಡೆ ಮಾಡಲಾಗಿದ್ದು ಇದರಲ್ಲಿ 1682.48 ಕೋಟಿ ರೂ ಅನುದಾನದ ಬಳಕೆ ಆಗಿದೆ ಎಂದರು.

ಕೇಂದ್ರ ಸರ್ಕಾರ ಅಮೃತ ಯೋಜನೆಯಡಿ ರಾಜ್ಯಕ್ಕೆ 1660.98 ಕೋಟಿ ರೂ ಬಿಡುಗಡೆ ಮಾಡಿದ್ದು, ಇದರಲ್ಲಿ 1540.79 ಕೋಟಿ ರೂ ಅನುದಾನದ ಬಳಕೆ ಆಗಿದೆ. ಬೆಳಗಾವಿ ಜಿಲ್ಲೆಗೆ 184.28 ಕೋಟಿ ರೂ ಯೋಜನಾ ವೆಚ್ಚವನ್ನು ಅಂದಾಜಿಸಲಾಗಿದೆ ಎಂದ ಸಚಿವರು ಸ್ವಚ್ಚ ಭಾರತ ಮಿಷನ್ (ನಗರ) ಯೋಜನೆಯಡಿ ರಾಜ್ಯಕ್ಕೆ 820.96 ಕೋಟಿ ರೂ ಅಂದಾಜಿಸಲಾಗಿದ್ದು, ಮೊದಲ ಹಂತದ ಅನುದಾನದಲ್ಲಿ 199.01 ಕೋಟಿ ರೂ ಬಿಡುಗಡೆಯಾಗಿದೆ ಎಂದರು. ಪ್ರಧಾನ ಮಂತ್ರಿ ಆವಾಸ್ ನಗರ ಯೋಜನೆಗೆ ರಾಜ್ಯಕ್ಕೆ ಕಳೆದ ಮೂರು ವರ್ಷದಲ್ಲಿ 5246.22 ಕೋಟಿ ರೂ ಅನುದಾನ ಬಿಡುಗಡೆ ಮಾಡಿದ್ದು, ಇದರಲ್ಲಿ 4685.61 ಕೋಟಿ. ರೂ ಅನುದಾನದ ಬಳಕೆ ಆಗಿದೆ. ಬೆಂಗಳೂರು ಮೆಟ್ರೋ ಯೋಜನೆಗೆ ಪ್ರಸಕ್ತ 2021-22 ಸಾಲಿಗೆ 2982 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದ್ದು ಇದರಲ್ಲಿ 2328 ಕೋಟಿ ರೂ ಅನುದಾನದ ಬಳಕೆ ಆಗಿದೆ ಎಂದರು.

Latest News

ಪ್ರಗತಿಪರ ಕೃಷಿಕರು ನಟರು ಪುಟ್ಟಸ್ವಾಮಿಗೌಡ ಆರ್.ಕೆ.

ಪುಟ್ಟಸ್ವಾಮಿಗೌಡ ಆರ್. ಕೆ. ರಂಗಭೂಮಿ ನಟ ಪ್ರಗತಿ ಪರ ಕೃಷಿಕರು. ಮೊನ್ನೆ ಮೈಸೂರಿನಲ್ಲಿ ಚೆನ್ನರಾಯಪಟ್ಟಣದ ಡಾ.ಚಂದ್ರ ಕಾಳೇನಹಳ್ಳಿ ರಚನೆ ನಿರ್ವಹಣೆಯಲ್ಲಿ ದಸರಾ ಉತ್ಸವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ...

More Articles Like This

error: Content is protected !!
Join WhatsApp Group