spot_img
spot_img

ಗ್ರಾಮೀಣ ಪ್ರದೇಶಗಳಲ್ಲಿ ನೀರು ನಿರ್ವಹಣೆಗೆ ಜಿ ಪಂ ಸಿಇಓ ಆದೇಶ

Must Read

- Advertisement -

ದಿನಾಂಕ 09 ರಂದು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಜಿಲ್ಲಾ ಪಂಚಾಯತಿ ಬೆಳಗಾವಿ  ಭೋಯರ್ ಹಷ೯ಲ್ ನಾರಾಯಣರಾವ  ಇವರ ಅಧ್ಯಕ್ಷತೆಯಲ್ಲಿ ಎಲ್ಲಾ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಜಿಲ್ಲಾ ಮತ್ತು ತಾಲೂಕ ಅಧಿಕಾರಿಗಳಿಗೆ ಮತ್ತು ಎಲ್ಲಾ ತಾಲೂಕು ಪಂಚಾಯಿತಿ  ಕಾರ್ಯನಿರ್ವಾಹಕ ಅಧಿಕಾರಿಗಳ ಸಭೆಯನ್ನು ವಿಡಿಯೋ ಕಾನ್ಫರೆನ್ಸ್  ಮುಖಾಂತರ ಹಮ್ಮಿಕೊಂಡರು.

ಗ್ರಾಮೀಣ ಮನೆಗಳಲ್ಲಿ ಸುರಕ್ಷಿತ ಕುಡಿಯುವ ನೀರು ಒದಗಿಸಲು  ಗ್ರಾಮ ಪಂಚಾಯಿತಿ ಮತ್ತು ಗ್ರಾಮೀಣ ನೀರು ಮತ್ತು ನೈರ್ಮಲ್ಯ ಸಮಿತಿಗಳ ಜವಾಬ್ದಾರಿಯಾಗಿರುತ್ತದೆ. ಏಪ್ರಿಲ್ ಮತ್ತು ಮೇ ಸಂದರ್ಭದಲ್ಲಿ ಯಾವ ಗ್ರಾಮದಲ್ಲಿಯೂ  ಕೂಡ ನೀರಿನ ಸಮಸ್ಯೆಗಳು ಆಗದಂತೆ ಎಲ್ಲಾ ಅಧಿಕಾರಿಗಳು ಕ್ರಮವನ್ನು ಕೈಗೊಳ್ಳಬೇಕು ಎಂದು  ಎಚ್ಚರಿಕೆ ನೀಡಿದರು.

ತಾಲೂಕ ಅಧಿಕಾರಿಗಳು ಕುಡಿಯುವ ನೀರಿನ ಘಟಕದ ನೀರಿನ ಸಂಸ್ಕರಣಾ ಘಟಕದ ಸುತ್ತಲೂ  ಸ್ವಚ್ಛವಾಗಿ ಇಟ್ಟುಕೊಳ್ಳಬೇಕು. ನೀರಿನ ಸಂಸ್ಕರಣಾ ಘಟಕದ ಪ್ರಮುಖ ಭಾಗಗಳಾದ ಫಿಲ್ಟರ್,ಕ್ಲೋರಿನೀಕರಣ ಬಾಟಲ್ ಇತ್ಯಾದಿಗಳನ್ನು ಕಾಲಕಾಲಕ್ಕೆ ಬದಲಾಯಿಸಬೇಕು ಮತ್ತು ನೀರಿನ ಸಂಸ್ಕರಣಾ ಘಟಕವನ್ನು ನಿಯಮಿತವಾಗಿ ಬ್ಯಾಕ್ ವಾಶ್ ಮಾಡುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಅವರು ಆದೇಶ ನೀಡಿದರು.

- Advertisement -

ಬಹುಗ್ರಾಮ ಕುಡಿಯುವ ನೀರು ಯೋಜನೆಯ ಮುಖಾಂತರ ಡ್ಯಾಮ್ ಗಳಿಂದ ಪ್ರತಿನಿತ್ಯ ಎಷ್ಟು ನೀರು ಸರಬರಾಜು ಆಗುತ್ತದೆ ಎಂಬುದರ ಬಗ್ಗೆ ಪ್ರತ್ಯೇಕವಾಗಿ ಪರಿಶೀಲಿಸಿ ಕಾರ್ಯ ಪಾಲಕ  ಅಭಿಯಂತರ ಮತ್ತು ಸಹಾಯಕ ಕಾರ್ಯ ಪಾಲಕ ಅಭಿಯಂತರರು ವರದಿಯನ್ನು ಸಲ್ಲಿಸಬೇಕೆಂದು ಬೋಯಲ್ ಹರ್ಷ ನಾರಾಯಣರಾವ್ ತಿಳಿಸಿದರು.

ಪ್ರತಿದಿನ ಗ್ರಾಮ ಪಂಚಾಯಿತಿಗಳಲ್ಲಿ ಸರಿಯಾಗಿ ನೀರಿನ ವ್ಯವಸ್ಥೆ ಆಗುತ್ತಿದೆಯೋ ಇಲ್ಲವೋ ಎಂಬುದರ ಬಗ್ಗೆ ಗ್ರಾಮ ಪಂಚಾಯಿತಿ ಅಧಿಕಾರಿ ಕಡೆಯಿಂದ ಮಾಹಿತಿಯನ್ನು ತೆಗೆದುಕೊಳ್ಳಬೇಕು ಇಲಾಖೆಗೆ ಮತ್ತು ತಹಶೀಲ್ದಾರ್ ಅವರ ಜೊತೆಗೆ ಈ ವಾರದಲ್ಲಿ ಟಾಸ್ಕ್ ಫೋರ್ಸ್ ಸಮಿತಿ ಸಭೆಯನ್ನು ಕಾಲಕಾಲ ತಕ್ಕಂತೆ ಕುಡಿಯುವ ನೀರಿನ ಸಂಬಂಧ ಪಟ್ಟಂತೆ ಸಭೆಯನ್ನು ಹಮ್ಮಿಕೊಳ್ಳಬೇಕು.

- Advertisement -

ಕೇಂದ್ರ ಸ್ಥಾನದಲ್ಲಿ ಎಲ್ಲಾ ಅಧಿಕಾರಿಗಳು ಕರ್ತವ್ಯವನ್ನು ನಿರ್ವಹಿಸಬೇಕು ಕಾರಣ ಸಾರ್ವತ್ರಿಕ ಚುನಾವಣೆ ಇರುವುದರಿಂದ ಎಲ್ಲರೂ ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿ ಇರಬೇಕು ಇಲ್ಲದಿರುವುದು ಕಂಡುಬಂದಲ್ಲಿ ಶಿಸ್ತು ಕ್ರಮ ಜರುಗಿಸಲಾಗುತ್ತದೆ ಎಂದು ಜಿ ಪಂ ಕಾರ್ಯ ನಿರ್ವಾಹಕ ಅಧಿಕಾರಿ ತಿಳಿಸಿದ್ದಾರೆ.

ಗ್ರಾಮ ಪಂಚಾಯತಿಯಲ್ಲಿ ಕುಡಿಯುವ ನೀರಿಗೆ ಸಂಬಂಧ ಪಟ್ಟಂತೆ ಏನಾದರೂ ಸಮಸ್ಯೆಗಳು ಕಂಡುಬಂದಲ್ಲಿ ನೇರವಾಗಿ ಈ ಪರಿಹಾರ ದೂರವಾಣಿ 9480985555 ನಂಬರಿಗೆ ಸಂಪರ್ಕ ಮಾಡಬೇಕು ಎಂದು ಕೂಡ ಅವರು  ತಿಳಿಸಿರುತ್ತಾರೆ. 

ಈ ಸಂದರ್ಭದಲ್ಲಿ ರವಿ ಬಂಗಾರೆಪ್ಪನವರ ಯೋಜನಾ ನಿರ್ದೇಶಕರು ಜಿಲ್ಲಾ ಪಂಚಾಯತಿ ಬೆಳಗಾವಿ ಇವರು  ಉಪಸ್ಥಿತರಿದ್ದರು.

- Advertisement -
- Advertisement -

Latest News

ಸಮಾಜದಲ್ಲಿ ಹೆಣ್ಣು ಮಕ್ಕಳಿಗೆ ಸಮಾನತೆ ದೊರಕಬೇಕು- ಸಿಡಿಪಿಓ ಶ್ವೇತಾ

ಮೈಸೂರು ನಗರ ವರ್ತಲ ರಸ್ತೆಯಲ್ಲಿರುವ ಮಾರ್ವೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಇಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ...
- Advertisement -

More Articles Like This

- Advertisement -
close
error: Content is protected !!
Join WhatsApp Group