ಶಾಸಕ ಬಾಲಚಂದ್ರ ಜಾರಕಿಹೊಳಿಯವರಿಂದ ಗಣ ರಾಜ್ಯೋತ್ಸವದ ಶುಭಾಶಯ

Must Read

ಗೋಕಾಕ: ನಾಡಿನ ಜನತೆಗೆ ಅರಭಾವಿ ಶಾಸಕ, ಕಹಾಮ ನಿರ್ದೇಶಕ ಬಾಲಚಂದ್ರ ಜಾರಕಿಹೊಳಿಯವರು ೭೫ ನೇ ಗಣರಾಜ್ಯೋತ್ಸವದ ಶುಭ ಕೋರಿದ್ದಾರೆ.

ನಮ್ಮ ದೇಶದ ಸಾರ್ವಭೌಮತ್ವಕ್ಕಾಗಿ ಜಗತ್ತಿನ ಅತಿ ದೊಡ್ಡದಾದ ಸಂವಿಧಾನವನ್ನು ರಚಿಸಿ ಪ್ರಜಾಪ್ರಭುತ್ವ ದೇಶವನ್ನಾಗಿಸಲು ಹಗಲಿರುಳು ಹೋರಾಟ ನಡೆಸಿರುವ ಎಲ್ಲ ಮಹನೀಯರನ್ನು ಸ್ಮರಿಸುವ ಅವಕಾಶವು ಒದಗಿ ಬಂದಿದೆ. ಇವರು ಹಾಕಿಕೊಟ್ಟ ದೇಶ ಪ್ರೇಮದ ದಾರಿಯಲ್ಲಿ ನಾವೆಲ್ಲರೂ ಒಂದಾಗಿ ಸಾಗೋಣ. ದೇಶ ಪ್ರೇಮಿಗಳ ತ್ಯಾಗ, ಬಲಿದಾನವನ್ನು ಸ್ಮರಿಸೋಣ. ಸಂವಿಧಾನ ಪಿತಾಮಹ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರು ಹಾಕಿಕೊಟ್ಟ ಮಾರ್ಗದಲ್ಲಿ ಮುನ್ನಡೆದು, ದೇಶದ ಐಕ್ಯತೆಗಾಗಿ ಶ್ರಮಿಸೋಣ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಶುಭ ಕೋರಿದ್ದಾರೆ.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group