- Advertisement -
ಮೂಡಲಗಿ: ಮಹಾತ್ಮ ಗಾಂಧೀಜಿ ಹಾಗೂ ಲಾಲ ಬಹದ್ದೂರ ಶಾಸ್ತ್ರೀಜಿ ಅವರ ಜಯಂತಿಯನ್ನು ಪಟ್ಟಣದ ಸಮಾಜ ಕಲ್ಯಾಣ ಇಲಾಖೆಯ ಹೆಣ್ಣು ಮಕ್ಕಳ ಹಾಸ್ಟೇಲ್ ಆವರಣದಲ್ಲಿ ಸಸಿಗಳನ್ನು ನೆಡುವ ಮೂಲಕ ಆಚರಿಸಲಾಯಿತು.
ಬಿಇಒ ಅಜೀತ ಮನ್ನಿಕೇರಿ ಮಾತನಾಡಿ, ಪ್ರತಿಯೊಂದು ಜಯಂತಿಗಳಿಗೂ, ಸಾರ್ವಜನಿಕರ ಹುಟ್ಟು ಹಬ್ಬಗಳ ಸಂದರ್ಭದಲ್ಲಿ ಅರಣ್ಯ ಇಲಾಖೆಯ ಸಹಕಾರದೊಂದಿಗೆ ತಾಲೂಕಿನ ಸರ್ಕಾರಿ ಜಾಗಗಳಲ್ಲಿ ಈರಪ್ಪ ಢವಳೇಶ್ವರ ಸಸಿಗಳನ್ನು ನೆಡುತ್ತಿರುವ ಕಾರ್ಯ ಶ್ಲಾಘನೀಯವಾಗಿದೆ ಎಂದರು.
ಈ ಸಮಯದಲ್ಲಿ ತಹಶೀಲ್ದಾರ ಶಿವಾನಂದ ಬಬಲಿ, ಸಿಡಿಪಿಒ ಯಲ್ಲಪ್ಪ ಗದಾಡಿ, ಪಿಎಸ್‍ಐ ಎಚ್ ವೈ ಬಾಲದಂಡಿ, ತಹಶೀಲ್ದಾರ ಕಚೇರಿಯ ಶಿರಸ್ತದಾರ ಪರುಶುರಾಮ ನಾಯಕ್, ಪುರಸಭೆ ಆರೋಗ್ಯ ನಿರೀಕ್ಷಕ ಚಿದಾನಂದ ಮುಗಳಖೋಡ, ಹಾಸ್ಟೇಲ್ ಮೇಲ್ವಿಚಾರಕಿ ಶ್ರೀದೇವಿ ಜೆನಕಟ್ಟಿ, ಸುರೇಶ ಸಣ್ಣಕ್ಕಿ, ಪ್ರಭು ತೇರದಾಳ ಹಾಗೂ ಹಾಸ್ಟೇಲ್ ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.