ಮೂಡಲಗಿ: ಮಹಾತ್ಮ ಗಾಂಧೀಜಿಯವರ ಅಹಿಂಸಾತ್ಮಕ, ಸರಳ ವ್ಯಕ್ತಿತ್ವ ಮತ್ತು ಲಾಲ ಬಹದ್ದೂರ ಶಾಸ್ತ್ರೀಜಿಯವರ ನೇರ ನಿಷ್ಠುರ ವ್ಯಕ್ತಿತ್ವ ಇಂದಿನ ಯುವ ಜನತೆಗೆ ಪ್ರೇರಣೆಯಾಗಿವೆ ಎಂದು ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಸತೀಶ ಕಡಾಡಿ ಹೇಳಿದರು.
ರವಿವಾರ ಅ. 02 ರಂದು ಕಲ್ಲೋಳಿ ಪಟ್ಟಣದ ಸಾಮಾಜಿಕ ಆರ್ಥಿಕ ಮತ್ತು ಕಲ್ಯಾಣ (ಸೇವಾ) ಸಂಸ್ಥೆ ಹಾಗೂ ಶ್ರೀ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ಸಂಘ ಇವರುಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ ಮಹಾತ್ಮ ಗಾಂಧೀಜಿ ಹಾಗೂ ಲಾಲ ಬಹದ್ದೂರ ಶಾಸ್ತ್ರಿ ಅವರ ಜಯಂತಿ ಅಂಗವಾಗಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಅವರು ನಮ್ಮ ದೇಶದ ಸ್ವತಂತ್ರ ಚಳವಳಿಯ ಇತಿಹಾಸದಲ್ಲಿ ಮಹಾತ್ಮ ಗಾಂಧೀಜಿಯವರ ಅಹಿಂಸಾತ್ಮಕ ಚಳವಳಿ ಜಗತ್ತಿಗೆ ಆದರ್ಶಪ್ರಾಯವಾಗಿತ್ತು. ದೀನ ದಲಿತರ ಉದ್ದಾರಕ್ಕಾಗಿ, ದೇಶದ ಸೇವೆಗಾಗಿ ಅವರು ಅನುಸರಿಸಿದ ಮಾರ್ಗ ಇಂದಿಗೂ ಪ್ರಸ್ತುತವಾಗಿದೆ ಎಂದರು.
ಲಾಲ ಬಹದ್ದೂರ ಶಾಸ್ತ್ರಿಜೀ ಭಾರತದ ಇತಿಹಾಸದಲ್ಲಿ ಶ್ರೇಷ್ಠ ಚಿಂತನೆಯ ರಾಜಕಾರಣಿಯಾಗಿ ದೇಶವನ್ನು ಮುನ್ನಡೆಸಿದರು. ಸರಳ ಮತ್ತು ಸಾತ್ವಿಕ ವ್ಯಕ್ತಿತ್ವದ ಜೊತೆಗೆ ಅಪ್ರತಿಮ ದೇಶಭಕ್ತಿ, ಮತ್ತು ನೇರ ನಿಷ್ಠುರ, ವ್ಯಕ್ತಿತ್ವವನ್ನು ಹೊಂದಿದ್ದರು. ಜೈ ಜವಾನ್, ಜೈ ಕಿಸಾನ್ ಎಂಬ ಘೋಷ ವ್ಯಾಕ್ಯದ ಮೂಲಕ ಕೃಷಿ ಮತ್ತು ವಿಜ್ಞಾನ ರಂಗದಲ್ಲಿ ದೇಶ ಸ್ವಾವಲಂಬನೆ ಸಾಧಿಸಲು ಅನನ್ಯ ಕೊಡುಗೆ ನೀಡಿದ್ದರು ಎಂದರು.
ಸೇವಾ ಸಂಸ್ಥೆಯ ಉಪಾಧ್ಯಕ್ಷ ಸಿದ್ದಪ್ಪ ಹೆಬ್ಬಾಳ, ಅಡಿವೆಪ್ಪ ಕುರಬೇಟ, ಸಹಕಾರಿಯ ಪ್ರಧಾನ ಕಾರ್ಯದರ್ಶಿ ಹಣಮಂತ ಸಂಗಟಿ, ಶಂಕರ ಕೌಜಲಗಿ, ದೊಡ್ಡಪ್ಪ ಉಜ್ಜಿನಕೊಪ್ಪ ಬಸಗೌಡ ಪಾಟೀಲ, ಸೇರಿದಂತೆ ಸಿಬ್ಬಂದಿಗಳು ಉಪಸ್ಥಿತರಿದ್ದರು.