ಸತ್ಯ ಅಹಿಂಸೆಯ ಸಾಕಾರ ಮೂರ್ತಿ ಗಾಂಧೀಜಿ, ಪ್ರಾಮಾಣಿಕತೆ ದಕ್ಷತೆಗೆ ಶಾಸ್ತ್ರೀಜಿ – ಎಂ.ಬಿ.ಬಳಿಗಾರ

Must Read

ಜೆಡಿಎಸ್ ಗೆ ಗೆಲುವು ಕುಮಾರಸ್ವಾಮಿಗೆ ಬೇಕಿಲ್ಲ, ಬಿಜೆಪಿ ಗೆಲ್ಲಿಸಲು ಆಸಕ್ತಿ ಹೊಂದಿದ್ದಾರೆ – ಎಸ್ ಎಂ ಪಾಟೀಲ

ಸಿಂದಗಿ: ಈ ಕ್ಷೇತ್ರದ ಅಭಿವೃದ್ಧಿಗೆ ದಿ.ಮನಗೂಳಿ ಅವರು ತಮ್ಮ ಆಯುಷ್ಯವನ್ನೆ ಮುಡಿಪಾಗಿಟ್ಟು ದುಡಿದು ಅಗಲಿ ಹೋಗಿದ್ದಾರೆ ಅವರ ಮಗನಿಗೆ ಕೂಲಿ ಸಿಗಬೇಕು ಆದರೆ ಜೆಡಿಎಸ್ ಪಕ್ಷದ...

ಕಾಂಗ್ರೆಸ್ ಸರ್ಕಾರದ ಕೆಲಸಗಳು ಅದರ ಗೆಲುವಿಗೆ ಕಾರಣವಾಗುತ್ತದೆ – ಸುಜಾತಾ ಕಳ್ಳಿಮನಿ

ಸಿಂದಗಿ: ಸಿದ್ದರಾಮಯ್ಯನವರು ಐದು ವರ್ಷದ ಅಧಿಕಾರದ ಅವಧಿಯಲ್ಲಿ ಈ ಕರುನಾಡಿಗೆ ಬಡವರ ಪರ, ರೈತರ ಪರ ಜಾರಿಗೆ ತಂದ ಯೋಜನೆಗಳು ಈ ಸಿಂದಗಿ ಉಪಚುನಾವಣೆಯಲ್ಲಿ ಕಾಂಗ್ರೆಸ್...

ಬಿಜೆಪಿ ಅಲೆಮಾರಿ ಜನಾಂಗಕ್ಕೆ ಸುಳ್ಳು ಹೇಳಿ ಮತ ಪಡೆಯುತ್ತಿದೆ – ಮೇಘರಾಜ್ ಆರೋಪ

ಸಿಂದಗಿ: ಬಿಜೆಪಿಯ ಸರ್ಕಾರ  ಅಧಿಕಾರಕ್ಕೆ ಬಂದು ಎರಡು ವರ್ಷವಾದರೂ  ಅಲೆಮಾರಿ, ಅರೆ ಅಲೆಮಾರಿ ಸಮುದಾಯದ ಆಶ್ರಯ ಮನೆಗಳನ್ನು  ಮಂಜೂರು ಮಾಡದೆ ಕೇವಲ ಕಾಗದ ಪತ್ರದಲ್ಲಿ ಮಂಜೂರು...

ಸವದತ್ತಿಃ “ಸತ್ಯ ಮತ್ತು ಅಹಿಂಸಾತ್ಮಕ ಹೋರಾಟದ ಮೂಲಕ ಜಗಕೆ ಹೊಸ ಬೆಳಕು ನೀಡಿದ ಮಹಾತ್ಮ ಗಾಂಧೀಜಿ ಮತ್ತು ಸರಳ ವ್ಯಕ್ತಿತ್ವ. ಧೃಡ ನಿರ್ಧಾರದ ಪ್ರಾಮಾಣಿಕತೆ ಮತ್ತು ದಕ್ಷತೆಗೆ ಹೆಸರಾದವರು ಮಾಜಿ ಪ್ರಧಾನಿ ದಿವಂಗತ ಲಾಲ್ ಬಹದ್ದೂರ ಶಾಸ್ತ್ರೀಜಿ ಈ ಇಬ್ಬರೂ ಮಹಾನ್ ಚೇತನಗಳ ಬದುಕಿನ ಆದರ್ಶ ನಮಗೆಲ್ಲರಿಗೂ ಮಾದರಿ” ಎಂದು ಕ್ಷೇತ್ರ ಸಮನ್ವಯಾಧಿಕಾರಿ ಎಂ.ಬಿ.ಬಳಿಗಾರ ತಿಳಿಸಿದರು

ಅವರು ಸವದತ್ತಿ ತಾಲೂಕು ಕ್ರೀಡಾಂಗಣದಲ್ಲಿರುವ ಕ್ಷೇತ್ರ ಸಂಪನ್ಮೂಲ ಕೇಂದ್ರದಲ್ಲಿ ಗಾಂಧೀಜಿ ಮತ್ತು ಶಾಸ್ತ್ರೀಜಿಯವರ ಜಯಂತಿಯಲ್ಲಿ ಇಬ್ಬರೂ ಮಹನೀಯರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದರು.

- Advertisement -

ಈ ಸಂದರ್ಭದಲ್ಲಿ ಕ್ಷೇತ್ರ ಸಂಪನ್ಮೂಲ ವ್ಯಕ್ತಿ ರಾಜು ಭಜಂತ್ರಿ ಮಾತನಾಡಿ, ಈ ಮಹಾನ್ ಚೇತನಗಳ ಸಾಮಾಜಿಕ ಬದ್ಧತೆ ಜೀವನ ಮತ್ತು ಮಾದರಿ ವ್ಯಕ್ತಿತ್ವ ನಮಗೆಲ್ಲರಿಗೂ ಸ್ಪೂರ್ತಿಯ ಸೆಲೆ.ಅವರ ಸತ್ಯದ ಹಾದಿ ಮತ್ತು ಪ್ರಾಮಾಣಿಕತೆ ನಮ್ಮೆಲ್ಲರಿಗೂ ದೀವಿಗೆಯಾಗಿದೆ. ಎಂದು ಗಾಂಧೀಜಿಯವರ ದಕ್ಷಿಣ ಆಫ್ರಿಕೆಯಲ್ಲಿನ ಘಟನೆಗಳನ್ನು ನೆನಪಿಸಿದರು.ವಿಕಲಚೇತನ ಸಂಪನ್ಮೂಲ ವ್ಯಕ್ತಿ ಚಿದಾನಂದ ಬಾರ್ಕಿ ಮಾತನಾಡಿ,“ಗಾಂಧೀಜಿಯವರು ಎಲ್ಲ ವರ್ಗದ ಜನರನ್ನೂ ತಮ್ಮ ಸತ್ಯ ಅಹಿಂಸೆ ಮೂಲಕ ಅವರಿಗೆ ಆದರ್ಶಪ್ರಾಯರಾದರು.ಅವರು ದೀನದಲಿತರ ಉದ್ಧಾರಕ್ಕೆ ಶ್ರಮಿಸಿದರು.ಸ್ವಾತಂತ್ರ್ಯ ಹೋರಾಟದ ಜೊತೆಗೆ ಸ್ವದೇಶಿ ವಸ್ತುಗಳ ಬಳಕೆಗೆ ಕರೆ ನೀಡಿ ಗುಡಿ ಕೈಗಾರಿಕೆಗಳಿಗೆ ಉತ್ತೇಜನ ನೀಡಿದರು. ಹಾಗೆಯೇ ಲಾಲ್ ಬಹದ್ದೂರ ಶಾಸ್ತ್ರೀಜಿಯವರು ಕಡು ಬಡತನದಲ್ಲಿ ಹುಟ್ಟಿ ನದಿಯನ್ನು ಈಜಿ ಶಾಲೆಗೆ ಹೋಗಿ ಶಿಕ್ಷಣ ಕಲಿಯುವ ಜೊತೆಗೆ ದಕ್ಷತೆ ಮತ್ತು ಸಮಯ ಪ್ರಜ್ಞೆಯ ಮೂಲಕ ಜೈಜವಾನ್ ಜೈಕಿಸಾನ್ ತತ್ವದೊಂದಿಗೆ ರೈತರಿಗೆ ಪ್ರಾಮುಖ್ಯತೆ ನೀಡಿದ ಮಹಾನುಭಾವರು”ಎಂದು ಇಬ್ಬರೂ ಮಹನೀಯರ ವ್ಯಕ್ತಿತ್ವ ಕುರಿತು ಮಾತನಾಡಿದರು.

ಈ ಸಂದರ್ಭದಲ್ಲಿ ಬಿ.ಐ.ಇ.ಆರ್.ಟಿ ಗಳಾದ ಎಂ.ಎಂ.ಸಂಗಮ,ರತ್ನಾ ಸೇತಸನದಿ,ವೈ.ಬಿ.ಕಡಕೋಳ,ಲೆಕ್ಕಪರಿಶೋಧಕ ಜಿ.ಎಸ್.ಶಿದ್ಲಿಂಗನವರ,ಜವಾನ ಈರಪ್ಪ ಅವರಾದಿ, ಗುರ್ಲಹೊಸೂರ ಸಮೂಹ ಸಂಪನ್ಮೂಲ ವ್ಯಕ್ತಿ ಬಿ.ಎಂ.ರಾಮಚಂದ್ರ ಉಪಸ್ಥಿತರಿದ್ದರು.

ಕಾರ್ಯಕ್ರಮದ ಪ್ರಾರಂಭದಲ್ಲಿ ಎಂ.ಎಂ.ಸಂಗಮ “ರಘುಪತಿ ರಾಘವ ರಾಜಾರಾಂ” ಗೀತೆಯನ್ನು ಹೇಳಿದರು. ರತ್ನಾ ಸೇತಸನದಿ “ಭಾರತ ದೇಶ ಹೆಮ್ಮೆಯ ದೇಶ”ಎಂಬ ದೇಶ ಭಕ್ತಿ ಗೀತೆಯನ್ನು ಹಾಡಿದರು. ಸಿ.ವ್ಹಿ.ಬಾರ್ಕಿ ಸ್ವಾಗತಿಸಿದರು. ವೈ.ಬಿ.ಕಡಕೋಳ ನಿರೂಪಿಸಿದರು. ಬಿ.ಎಂ.ರಾಮಚಂದ್ರ ಕೊನೆಗೆ ವಂದಿಸಿದರು.ಇದೇ ಸಂದರ್ಭದಲ್ಲಿ ಬಿ.ಆರ್.ಸಿಯ ಸ್ವಚ್ಚತೆ ಕಾರ್ಯಕ್ರಮವನ್ನು ಸಂಘಟಿಸಲಾಗಿತ್ತು.

- Advertisement -

LEAVE A REPLY

Please enter your comment!
Please enter your name here

- Advertisement -

Latest News

ಜೆಡಿಎಸ್ ಗೆ ಗೆಲುವು ಕುಮಾರಸ್ವಾಮಿಗೆ ಬೇಕಿಲ್ಲ, ಬಿಜೆಪಿ ಗೆಲ್ಲಿಸಲು ಆಸಕ್ತಿ ಹೊಂದಿದ್ದಾರೆ – ಎಸ್ ಎಂ ಪಾಟೀಲ

ಸಿಂದಗಿ: ಈ ಕ್ಷೇತ್ರದ ಅಭಿವೃದ್ಧಿಗೆ ದಿ.ಮನಗೂಳಿ ಅವರು ತಮ್ಮ ಆಯುಷ್ಯವನ್ನೆ ಮುಡಿಪಾಗಿಟ್ಟು ದುಡಿದು ಅಗಲಿ ಹೋಗಿದ್ದಾರೆ ಅವರ ಮಗನಿಗೆ ಕೂಲಿ ಸಿಗಬೇಕು ಆದರೆ ಜೆಡಿಎಸ್ ಪಕ್ಷದ...
- Advertisement -

More Articles Like This

- Advertisement -
close
error: Content is protected !!