spot_img
spot_img

ಗಾಂಧೀಜಿ, ಅಹಿಂಸೆಯ ಮೂಲಕ ಜಗತ್ತನ್ನು ಗೆದ್ದರು- ಶಿಕ್ಷಕ ಕಬ್ಬೂರ ಅಭಿಮತ

Must Read

- Advertisement -

ಸವದತ್ತಿ-  ಶಾಂತಿಯ  ಹರಿಕಾರರಾದ ಮಹಾತ್ಮ ಗಾಂಧೀಜಿಯವರು ಇಡೀ ವಿಶ್ವಕ್ಕೆ ಅಹಿಂಸೆಯ ಪಾಠ ಹೇಳಿಕೊಟ್ಟು, ಅದರ ಮೂಲಕವೇ ಜಗತ್ತನ್ನು ಗೆದ್ದರು, ಅದೇ ರೀತಿ ಲಾಲ್ ಬಹದ್ದೂರ ಶಾಸ್ತ್ರಿಯವರು ಭಾರತೀಯ ಜನರಿಗೆ ದೇಶಪ್ರೇಮ ಹಾಗೂ ನೈತಿಕತೆ ಮಾರ್ಗದರ್ಶನ ಮಾಡಿದರು. ಅವರ ಜಯಂತಿಯ ಈ ದಿನದಂದು ಅವರು ಹಾಕಿಕೊಟ್ಟ ದಾರಿಯಲ್ಲಿ ನಾವು ನೀವೆಲ್ಲ ಸಾಗಬೇಕಾಗಿದೆ, ಈ ಇಬ್ಬರು ಮಹಾನ್ ನಾಯಕರು ನಮ್ಮೆಲ್ಲರ ಹೆಮ್ಮೆಯಾಗಿದ್ದಾರೆ ಎಂದು ಶಿಕ್ಷಕ ಎನ್.ಎನ್.ಕಬ್ಬೂರ ತಮ್ಮ ಅಭಿಪ್ರಾಯ ಹಂಚಿಕೊಂಡರು.

ಪಟ್ಟಣದ ಸ.ಕಿ.ಪ್ರಾ ಕನ್ನಡ ಶಾಲೆ ನಂ-6 ರಲ್ಲಿ ಗಾಂಧಿ ಜಯಂತಿಯ ಅಂಗವಾಗಿ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ನಂತರ ಗಾಂಧೀಜಿ ಮತ್ತು ಶಾಸ್ತ್ರಿಜಿಯವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು.

ಮಕ್ಕಳು ಗಾಂಧೀಜಿ ಹಾಗೂ ಶಾಸ್ತ್ರೀಜಿಯವರ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಭಾಷಣಗಳ ಮೂಲಕ ಹಂಚಿಕೊಂಡರು, ಈ ವೇಳೆ ಶಿಕ್ಷಕಿ ಎಮ್.ಆರ್.ಫಂಡಿ ಮಕ್ಕಳಿಗೆ ಬುಕ್ ಹಾಗೂ ಪೆನ್ನುಗಳನ್ನು ಬಹುಮಾನವಾಗಿ ನೀಡಿದರು. ಅಂಗನವಾಡಿ ಕಾರ್ಯಕರ್ತೆಯರು, ಅಡುಗೆ ಸಿಬ್ಬಂದಿಯವರು, ಪಾಲಕ-ಪೋಷಕರು ಮತ್ತು ಮಕ್ಕಳು ಉಪಸ್ಥಿತರಿದ್ದರು.

- Advertisement -

LEAVE A REPLY

Please enter your comment!
Please enter your name here

- Advertisement -

Latest News

ಬೆಳಗಾವಿ – ಮನಗೂರು ವಿಶೇಷ ರೈಲು ಅ.16 ರಿಂದ

ಬೆಳಗಾವಿ: ಜಿಲ್ಲೆಯ ಜನರ ಬಹುದಿನಗಳ ಬೇಡಿಕೆಯಂತೆ ಬೆಳಗಾವಿ- ಮನಗೂರು ವಿಶೇಷ ಎಕ್ಸ್ಪ್ರೆಸ್ ರೈಲಿನ ಸಂಚಾರವು ಅ-16 ರಿಂದ ಪ್ರಾರಂಭವಾಗಲಿದೆ ಎಂದು ಹುಬ್ಬಳ್ಳಿ ನೈರುತ್ಯ ರೈಲ್ವೆ ಇಲಾಖೆ...
- Advertisement -

More Articles Like This

- Advertisement -
close
error: Content is protected !!
Join WhatsApp Group