spot_img
spot_img

ಗಾಂಧೀಜಿ ಪ್ರಭಾವ ವಿದೇಶದಲ್ಲೂ ಇದೆ – ಜಿ ಎಲ್ ಪತ್ತಾರ

Must Read

ಸಿಂದಗಿ: ಅಹಿಂಸಾತ್ಮಕ ಹೋರಾಟದ ಮೂಲಕ ದೇಶಕ್ಕೆ ಸ್ವಾತಂತ್ರ್ಯವನ್ನು ತಂದು ಕೊಟ್ಟ ಮಹಾನ್ ಚೇತನ ಮಹಾತ್ಮ ಗಾಂಧಿಯವರ ಪ್ರಭಾವ ಈ ದೇಶಕ್ಕಿಂತಲೂ ವಿದೇಶಗಳಲ್ಲಿ ಪ್ರಚಲಿತವಾಗಿದೆ ಎಂದು ದೇವಣಗಾಂವ ಗ್ರಾಮದ ಪ್ರಗತಿಪರ ಶಿಕ್ಷಣ ಸಂಸ್ಥೆಯ ಪಪೂ ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕ ಜಿ.ಎಲ್.ಪತ್ತಾರ ಹೇಳಿದರು.

ಪಟ್ಟಣದ ಎಲೈಟ್ ವಿಜ್ಞಾನ ಪ.ಪೂ ಮಹಾವಿದ್ಯಾಲಯದ ಆವರಣದಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಎಲೈಟ್ ವಿಜ್ಞಾನ ಪ.ಪೂ ಮಹಾವಿದ್ಯಾಲಯದ  ಸಹಯೋಗದಲ್ಲಿ ಹಮ್ಮಿಕೊಂಡ ಮಹಾತ್ಮಾ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರೀಜಿಯವರ ಜಯಂತಿ ಸಮಾರಂಭದಲ್ಲಿ ಉಪನ್ಯಾಸ ನೀಡಿ, ದೇಶದ ಸ್ವಾತಂತ್ರ್ಯಕ್ಕಾಗಿ ಅನೇಕ ಚಳವಳಿ ಹಾಗೂ ಹೋರಾಟಗಳನ್ನು ರೂಪಿಸಿ ಅಹಿಂಸಾ ಮಾರ್ಗದ ಮೂಲಕ ಸ್ವಾತಂತ್ರ್ಯ ಚಳವಳಿಯನ್ನು ಮುನ್ನಡೆಸಿದರು.

ಪ್ರಸ್ತುತ ದಿನಮಾನಗಳಲ್ಲಿ ಮಹಾತ್ಮ ಗಾಂಧಿಯವರ ತತ್ವ ಆದರ್ಶಗಳನ್ನು ಅಳವಡಿಸಿಕೊಳ್ಳುವ ಮೂಲಕ ಅವರ ಹಾದಿಯಲ್ಲಿ ಸಾಗೋಣ. ಗಾಂಧೀಜಿ ಸತ್ಯ, ಸಮಾನತೆ, ಅಹಿಂಸೆ, ಶಾಂತಿಯ ಬಹುದೊಡ್ಡ ಪ್ರತಿಪಾದಕರಾಗಿದ್ದಾರೆ. ಇಂದು ವಿಶ್ವದಾದ್ಯಂತ ಮಹಾತ್ಮ ಗಾಂಧಿಯವರ ಜನ್ಮ ದಿನಾಚರಣೆಯನ್ನು ಅಹಿಂಸಾ ದಿನವನ್ನಾಗಿ ಆಚರಿಸಲಾಗುತ್ತಿದೆ ಎಂದರು.

ಮಾಜಿ ಪ್ರಧಾನಿ ಲಾಲ್ ಬಹುದ್ದೂರ್ ಶಾಸ್ತ್ರಿ ಅವರ ಕೊಡುಗೆ ಅಪಾರವಾದದ್ದು, ಜೈ ಜವಾನ್ ಜೈ ಕಿಸಾನ್ ಎಂಬ ಘೋಷಣೆಗಳ ಮೂಲಕ ದೇಶದಲ್ಲಿ ಜನಸ್ನೇಹಿ ಆಡಳಿತವನ್ನು ನೀಡಿದ ಅಪರೂಪದ ಪ್ರಧಾನಿಯಾಗಿದ್ದರು ಕೂಡಾ ಪಕೀರರಂತೆ ಜೀವನ ನಡೆಸಿದವರು. ಅವರ ಜೀವನ ಮತ್ತು ತತ್ವಾದರ್ಶಗಳನ್ನು ಅರ್ಥ ಮಾಡಿಕೊಳ್ಳಬೇಕಾದರೆ ಸತ್ಯದೊಂದಿಗೆ ನನ್ನ ಪ್ರಯೋಗಗಳು ಎಂಬ ಅವರ ಆತ್ಮಕಥೆಯನ್ನು ಓದಿ ತಿಳಿಯಬೇಕಾಗಿದೆ. ಮತ್ತು ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರೀಜಿ ದೇಶಕ್ಕೆ ಸರಳ ವ್ಯಕ್ತಿತ್ವವನ್ನು ಮೈಗೂಡಿಸಿಕೊಂಡು ನುಡಿದಂತೆ ಬದುಕಿ ತೋರಿಸಿದ ನಾಯಕರಾಗಿದ್ದಾರೆ ಎಂದು ತಿಳಿಸಿದರು.

ಅಧ್ಯಕ್ಷತೆ ವಹಿಸಿದ ಕಸಾಪ ಅಧ್ಯಕ್ಷ ರಾಜಶೇಖರ ಕೂಚಬಾಳ ಮಾತನಾಡಿ, ಗಾಂಧೀಜಿಯವರು ಅಹಿಂಸೆ ಮತ್ತು ತ್ಯಾಗದ ಮನೋಭಾವ ಹೊಂದಿರುವ ವ್ಯಕ್ತಿ, ಸ್ವಾತಂತ್ರ್ಯ ಬಂದ ನಂತರ ದೇಶದಲ್ಲಿ ಹಲವಾರು ಅಭಿವೃದ್ಧಿ ಕೆಲಸಗಳು ಆಗುತ್ತಿದೆ. ಅವರ ಜಯಂತಿಯನ್ನು ಇಂದು ದೇಶಾದ್ಯಂತ ಆಚರಿಸಲಾಗುತ್ತಿದೆ. ದೇಶದ ಮಾಜಿ ಪ್ರಧಾನಿಯಾದ ಲಾಲ್ ಬಹುದ್ದೂರ್ ಶಾಸ್ತ್ರಿ ಅವರು ಕೂಡ ತಮ್ಮ ಅಧಿಕಾರಾವಧಿಯಲ್ಲಿ ಅನೇಕ ಜನಪರ ಕೆಲಸಗಳನ್ನು ಮಾಡಿ ದೇಶವನ್ನು ಅಭಿವೃದ್ಧಿಯತ್ತ ಸಾಗಿಸಲು ಶ್ರಮ ಪಟ್ಟಿದ್ದಾರೆ. ವಿಜಯಪುರ ಜಿಲ್ಲೆಗೂ ಮತ್ತು ಶಾಸ್ತ್ರೀಜಿ ಅವರಿಗೂ ಅವಿನಾಭಾವ ಸಂಬಂಧವಿದೆ ಎಂದರು.

ಪ್ರಥಮದರ್ಜೆ ಗುತ್ತಿಗೆದಾರ ಮುತ್ತು ಮುಂಡೆವಾಡಗಿ ಇರ್ವರ ಮಹಾನೀಯರ ಪೋಟೋ ಪೂಜೆ ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಹಿರಿಯ ರಾಜಕೀಯ ಧುರೀಣ ಗೊಲ್ಲಾಳಪ್ಪಗೌಡ ಪಾಟೀಲ, ಕಸಾಪ ಗೌರವಾಧ್ಯಕ್ಷ ಮಹಾಂತೇಶ ಪಟ್ಟಣಶೆಟ್ಟಿ, ಕಾನಿಪ ಅಧ್ಯಕ್ಷ ಆನಂದ ಶಾಬಾದಿ, ಕಸಾಪ ಗೌರವ ಕಾರ್ಯದರ್ಶಿ ಶಿಲ್ಪಾ ಕುದರಗೊಂಡ, ಮಾಜಿ ಕಸಾಪ ಅಧ್ಯಕ್ಷ ಚಂದ್ರಶೇಖರ ದೇವರೆಡ್ಡಿ, ಉಪನ್ಯಾಸಕ ಪಿ.ಎಸ್. ಜಮಾದಾರ ವೇದಿಕೆ ಮೇಲಿದ್ದರು.

ಕಾರ್ಯಕ್ರಮದಲ್ಲಿ ಶಿವಕುಮಾರ ಕಲ್ಲೂರ, ಶಿವು ಬಡಾನವರ, ಖಾದರಬಾಷಾ ವಾಲಿಕಾರ, ಶಾಂತೂ ರಾಣಾಗೋಳ, ರಮೇಶ ಪೂಜಾರಿ, ದುಂಡಪ್ಪ ಸೊನ್ನದ, ಅಮರ ಗಾಯಕವಾಡ, ಮುತ್ತು ಹೂಗಾರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಉಪನ್ಯಾಸಕ ಅಶೋಕ ಬಿರಾದಾರ ಸ್ವಾಗತಿಸಿದರು. ಸಾಯಬಣ್ಣ ದೇವರಮನಿ, ಮಾಧ್ಯಮ ಪ್ರತಿನಿಧಿ ಪಂಡಿತ ಯಂಪುರೆ ನಿರೂಪಿಸಿದರು. ಮಹಾಂತೇಶ ನೂಲಾನವರ ವಂದಿಸಿದರು.

- Advertisement -
- Advertisement -

Latest News

ವಿರಾಟಪುರ ವಿರಾಗಿ ಚಿತ್ರದ ವಾಲ್ ಪೋಸ್ಟರ್ ಬಿಡುಗಡೆ

ಸಿಂದಗಿ: ಹಾನಗಲ್ಲ ಗುರುಕುಮಾರ ಮಹಾಸ್ವಾಮಿಗಳವರ ಉಸಿರೇ ಸಮಾಜವಾಗಿತ್ತು ತಮ್ಮ ಬಗ್ಗೆ ಕಿಂಚಿತ್ತೂ ವಿಚಾರ ಮಾಡಿದವರಲ್ಲ ಎಂದು ಡಾ. ಪ್ರಭುಸಾರಂಗದೇವ ಶಿವಾಚಾರ್ಯರು ಹೇಳಿದರು. ಪಟ್ಟಣದ ಸಾರಂಗಮಠದಲ್ಲಿ ಹಾನಗಲ್ಲ ಶ್ರೀ...
- Advertisement -

More Articles Like This

- Advertisement -
close
error: Content is protected !!