ಸರ್ಕಾರದ ಮಾರ್ಗಸೂಚಿಯಂತೆ ಗಣೇಶ ಹಬ್ಬ ಆಚರಣೆ ಕಡ್ಡಾಯ – ಪಿಎಸ್ಐ ಬಾಲದಂಡಿ

Must Read

ಕುಡಿಯುವ ನೀರು ವ್ಯತ್ಯಯ ಆಗದಂತೆ ನೋಡಿಕೊಳ್ಳುವ ಭರವಸೆ ನೀಡಿದ ರುದ್ರೇಶ ಘಾಳೆ

ಬೆಳಗಾವಿ - ಕಾರ್ಮಿಕರು ತಮ್ಮ ಬೇಡಿಕೆಗಳನ್ನು ಈಡೇರಿಸಲು ನಡೆಸಿದ ಮುಷ್ಕರದಿಂದಾಗಿ ಬೆಳಗಾವಿ ಜನತೆಗೆ ಕುಡಿಯುವ ನೀರಿನ ವ್ಯವಸ್ಥೆಯಲ್ಲಿ ತೊಂದರೆ ಉಂಟಾಗಿದ್ದು ವಿಷಾದನೀಯವಾಗಿದೆ ವ್ಯವಸ್ಥೆಯನ್ನು ಸಂಪೂರ್ಣವಾಗಿ ಸರಿ...

ಹೆಣ್ಣು ಮಕ್ಕಳು ಪೌಷ್ಠಿಕ ಆಹಾರ ಸೇವನೆ ಮಾಡಬೇಕು – ಡಾ.ನಯನಾ ಭಸ್ಮೇ

ಸವದತ್ತಿ - “ಹೆಣ್ಣು ಮಕ್ಕಳು ಮಾನಸಿಕವಾಗಿ ಹಾಗೂ ದೈಹಿಕವಾಗಿಯೂ ಸದೃಢವಾಗಿರಬೇಕು ಅವರು ಹದಿ ಹರೆಯದ ವಯಸ್ಸಿಗೆ ಬಂದಾಗ ಅವರಲ್ಲಿ ನೈಸರ್ಗಿಕವಾದ ಬದಲಾವಣೆಗಳು ಆಗುತ್ತವೆ ಅಂತಹ ಸಂದರ್ಭದಲ್ಲಿಯೂ...

ಪ್ರೊ.ಅಲಕಾ ಕುರಣೆ ಯವರಿಗೆ ‘ ಶಿಕ್ಷಕ ಶ್ರೀ ‘ ರಾಜ್ಯ ಮಟ್ಟದ ಪ್ರಶಸ್ತಿ

ಬೆಳಗಾವಿ: ಅಕ್ಷರ ದೀಪ ಸಾಹಿತ್ಯ ಮತ್ತು ಸಾಂಸ್ಕೃತಿಕ ಕಲಾ ವೇದಿಕೆ, ಧಾರವಾಡ ಬೆಂಗಳೂರು ಘಟಕದಿಂದ ನೀಡಲಾಗುವ ರಾಜ್ಯ ಮಟ್ಟದ ಶಿಕ್ಷಕ ಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಬೆಳಗಾವಿಯ...

ಮೂಡಲಗಿ – ಕೊರೋನಾ ಕಾರಣದಿಂದಾಗಿ ಈ ವರ್ಷ ಗಣೇಶ ಹಬ್ಬವನ್ನು ಸರಳವಾಗಿ ಆಚರಿಸಲು ಸರ್ಕಾರ ನಿರ್ದೇಶನ ನೀಡಿದ್ದು ನಾವೆಲ್ಲರೂ ಸರ್ಕಾರದ ಆದೇಶದಂತೆ ನಡೆಯುವುದು ಅನಿವಾರ್ಯ. ಆದ್ದರಿಂದ ಸರಳವಾಗಿ ಗಣೇಶ ಹಬ್ಬ ಆಚರಿಸೋಣ ಎಂದು ಪಿಎಸ್ ಐ ಹಾಲಪ್ಪ ಬಾಲದಂಡಿ ಹೇಳಿದರು.

ನಗರದ ಪೊಲೀಸ್ ಠಾಣೆಯಲ್ಲಿ ಕರೆಯಲಾಗಿದ್ದ ಗಣೇಶ ಹಬ್ಬದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ಗಣೇಶ ಹಬ್ಬವನ್ನು ಆಚರಿಸಬಾರದು ಎನ್ನುವುದು ನಮ್ಮ ಉದ್ದೇಶವಲ್ಲ. ಕೊರೋನಾ ರೋಗದಿಂದಾಗಿ ಕಡಿಮೆ ಜನರೊಂದಿಗೆ ಹಬ್ಬಗಳನ್ನು ಆಚರಿಸುವ ಅನಿವಾರ್ಯ ಪರಿಸ್ಥಿತಿ ಬಂದಿದೆ ಆದ್ದರಿಂದ ಸರ್ಕಾರದ ಮಾರ್ಗಸೂಚಿಗಳ ಅಡಿಯಲ್ಲಿ ನಾವೆಲ್ಲ ಹಬ್ಬಗಳನ್ನು ಆಚರಿಸಬೇಕಾಗುತ್ತದೆ ಇದಕ್ಕಾಗಿ ತಾವು ಪೊಲೀಸರು, ಪುರಸಭೆಯವರು, ಕೆಇಬಿಯವರು ಹಾಗೂ ಇತರೆ ಇಲಾಖೆಯ ಅಧಿಕಾರಿಗಳಿಗೆ ಸಹಕಾರ ನೀಡಬೇಕು ಎಂದರು.

- Advertisement -

ಕೆಇಬಿ ವಿಭಾಗಾಧಿಕಾರಿ ಬಿ ಆರ್ ಯಡಳ್ಳಿ ಮಾತನಾಡಿ, ಹಬ್ಬ ಆಚರಣೆಯ ಕಾಲಕ್ಕೆ ವಿದ್ಯುತ್ ಅವಘಡಗಳಯ ಸಂಭವಿಸದಂತೆ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳನ್ನು ತಿಳಿಸಿದರು.

ಪುರಸಭಾ ಅಧ್ಯಕ್ಷ ಹಣಮಂತ ಗುಡ್ಲಮನಿ ಮಾತನಾಡಿ, ಸಂಭ್ರಮದ ಹಬ್ಬ ಆಚರಿಸುವುದು ಎಲ್ಲರ ಆಶೆ ಇದ್ದರೂ ಕೋವಿಡ್ ಮಹಾಮಾರಿಯಿಂದಾಗಿ ಸರಳವಾಗಿ ಆಚರಿಸುವಂತಾಗಿದೆ ಇದಕ್ಕೆ ಎಲ್ಲರೂ ಸಹಕಾರ ನೀಡಬೇಕು ಎಂದರು.

ಮುಖ್ಯಾಧಿಕಾರಿ ದೀಪಕ ಹರ್ದಿ ಮಾತನಾಡಿದರು.

ಪಿಎಸ್ ಐ ಬಾಲದಂಡಿಯವರು ಸರ್ಕಾರದ ಮಾರ್ಗಸೂಚಿಗಳನ್ನು ಓದಿ ಹೇಳಿದರು.

ದೇವಸ್ಥಾನದ ಲ್ಲಿ ಕನಿಷ್ಠ ಸಂಖ್ಯೆಯ ಜನರೊಂದಿಗೆ ನಾಲ್ಕು ಅಡಿಗಿಂತ ಕಡಿಮೆ ಎತ್ತರದ ಗಣೇಶ ಮೂರ್ತಿ ಕೂರಿಸಬೇಕು, ಪೊಲೀಸ್, ಪುರಸಭೆ, ವಿದ್ಯುತ್ ಇಲಾಖೆಗಳಿಂದ ಅನುಮತಿ ಪಡೆದಿರಬೇಕು, ವಾರ್ಡಿಗೆ ಒಂದು ಗಣಪತಿ ಕೂರಿಸಬೇಕು, ಗರಿಷ್ಠ ಐದು ದಿನಗಳವರೆಗೆ ಮಾತ್ರ ಗಣಪತಿ ಕೂರಿಸಬೇಕು, ಗಣಪತಿ ಆಯೋಜಕರು ಕೋವಿಡ್ ನೆಗೆಟಿವ್ ವರದಿ ಹೊಂದಿರಬೇಕು, ಗಣೇಶ ಕೂರಿಸುವ ಸ್ಥಳದಲ್ಲಿ ಕೋವಿಡ್ ಲಸಿಕಾ ಕಾರ್ಯಕ್ರಮ ಹಮ್ಮಿಕೊಳ್ಳಬೇಕು, ಯಾವುದೇ ಸಾಂಸ್ಕೃತಿಕ ಕಾರ್ಯಕ್ರಮ, ಡಿಜೆ ಸೌಂಡ್ ಹಚ್ಚುವುದು ನಿಷೇಧ, ಗಣೇಶ ಮೂರ್ತಿ ತರುವಾಗ, ವಿಸರ್ಜಿಸುವಾಗ ಮೆರವಣಿಗೆ ಮಾಡಬಾರದು,

ಪಾರಂಪರಿಕ ಗಣೇಶ ಮೂರ್ತಿ ಪ್ರತಿಷ್ಠಾಪನೆ ಹಾಗೂ ಸ್ಥಳದಲ್ಲಿಯೇ ವಿಸರ್ಜನೆ ಮಾಡಬೇಕು, ದರ್ಶನಕ್ಕಾಗಿ ಬರುವವರಿಗೆ ಥರ್ಮಲ್ ಸ್ಕ್ಯಾನರ್ ಮಾಡಬೇಕು, ಸಾಮಾಜಿಕ ಅಂತರ ಕಾಪಾಡಬೇಕು, ಎಲ್ಲರೂ ಮಾಸ್ಕ್ ಧರಿಸುವಂತೆ ನೋಡಿಕೊಳ್ಳಬೇಕು, ಬೇರೆ ಧರ್ಮದವರಿಗೆ ತೊಂದರೆಯಾಗದಂತೆ ಹಬ್ಬ ಆಚರಿಸಬೇಕು ಎಂಬ ಸರ್ಕಾರದ ನಿಯಮಗಳನ್ನು ಹೇಳಿ, ಈ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ ೨೦೦೫ ಹಾಗೂ ಭಾರತೀಯ ದಂಡ ಸಂಹಿತೆ ಸೆ.೧೮೮ ರ ಅಡಿಯಲ್ಲಿ ಶಿಸ್ತು ಕ್ರಮ ಜರುಗಿಸಲಾಗುವುದು ಎಂದರು.

ಆರೋಗ್ಯಾಧಿಕಾರಿ ಚಿದಾನಂದ ಮುಗಳಖೋಡ, ವಿವಿಧ ಗ್ರಾಮಗಳ ಗಜಾನನ ಮಂಡಳಿಗಳ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

- Advertisement -

LEAVE A REPLY

Please enter your comment!
Please enter your name here

- Advertisement -

Latest News

ಕುಡಿಯುವ ನೀರು ವ್ಯತ್ಯಯ ಆಗದಂತೆ ನೋಡಿಕೊಳ್ಳುವ ಭರವಸೆ ನೀಡಿದ ರುದ್ರೇಶ ಘಾಳೆ

ಬೆಳಗಾವಿ - ಕಾರ್ಮಿಕರು ತಮ್ಮ ಬೇಡಿಕೆಗಳನ್ನು ಈಡೇರಿಸಲು ನಡೆಸಿದ ಮುಷ್ಕರದಿಂದಾಗಿ ಬೆಳಗಾವಿ ಜನತೆಗೆ ಕುಡಿಯುವ ನೀರಿನ ವ್ಯವಸ್ಥೆಯಲ್ಲಿ ತೊಂದರೆ ಉಂಟಾಗಿದ್ದು ವಿಷಾದನೀಯವಾಗಿದೆ ವ್ಯವಸ್ಥೆಯನ್ನು ಸಂಪೂರ್ಣವಾಗಿ ಸರಿ...
- Advertisement -

More Articles Like This

- Advertisement -
close
error: Content is protected !!