spot_img
spot_img

ತಾಲೂಕ ಮಟ್ಟದಲ್ಲಿ ವೀರಾಗ್ರಣಿ ಪ್ರಶಸ್ತಿ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಗಣಿಹಾರ ಶಾಲೆ

Must Read

ಸಿಂದಗಿ: ಬಸವೇಶ್ವರ ಪ್ರಾಥಮಿಕ ಶಾಲೆ ವತಿಯಿಂದ ಆಲಮೇಲ ಎಂಪಿಎಸ್ ಮೈದಾನದಲ್ಲಿ ನಡೆದ ಪ್ರಾಥಮಿಕ ಶಾಲೆಗಳ ತಾಲೂಕ ಮಟ್ಟದ ಕ್ರೀಡಾಕೂಟದಲ್ಲಿ ಓಟ, ರೀಲೆ, ಮತ್ತು ಖೋ ಖೋ ದಲ್ಲಿ ಪ್ರಥಮ ಸ್ಥಾನ ಪಡೆದ ಗಣಿಹಾರ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

100ಮೀ,200 ಮೀ ಓಟದಲ್ಲಿ ಕುಮಾರಿ ಬೌರಮ್ಮ ರೂಡಗಿ ಪ್ರಥಮ ಸ್ಥಾನ ಪಡೆದಿದ್ದು, ಮಲ್ಲಿಕಾರ್ಜುನ ದೊಡಮನಿ 600 ಮೀ ಓಟದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾನೆ. ಅಲ್ಲದೇ ಬಾಲಕ-ಬಾಲಕಿಯರು 4×100 ಮೀಟರ ರಿಲೇ ಓಟದಲ್ಲಿ ಪ್ರಥಮ ಸ್ಥಾನ ಮತ್ತು ಬಾಲಕೀಯರು ಖೋ ಖೋ ದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ತರಬೇತುದಾರ ದೈಹಿಕ ಶಿಕ್ಷಕ ಸಿದ್ಧಲಿಂಗ ಚೌಧರಿ ಮತ್ತು ಕ್ರೀಡಾಪಟುಗಳಿಗೆ ಮುಖ್ಯಗುರುಗಳಾದ ಸಿ ಎಂ ಮೇತ್ರಿ,ಕೆ ಬಿ. ಪೂಜಾರಿ,ಪ್ರಾಥಮಿಕ ಶಿಕ್ಷಕರ ಸಂಘದ ಕೋಶಾಧ್ಯಕ್ಷ ಡಿ ಎಂ ಮಹೂರ, ಎಂ ಎಂ ಅರಬ ಸೇರಿದಂತೆ ಪ್ರಾಥಮಿಕ ಹಾಗೂ ಪ್ರೌಢಶಾಲಾ ಸಿಬ್ಬಂದಿ ಅಭಿನಂದಿಸಿದ್ದಾರೆ.

- Advertisement -
- Advertisement -

Latest News

ವಿರಾಟಪುರ ವಿರಾಗಿ ಚಿತ್ರದ ವಾಲ್ ಪೋಸ್ಟರ್ ಬಿಡುಗಡೆ

ಸಿಂದಗಿ: ಹಾನಗಲ್ಲ ಗುರುಕುಮಾರ ಮಹಾಸ್ವಾಮಿಗಳವರ ಉಸಿರೇ ಸಮಾಜವಾಗಿತ್ತು ತಮ್ಮ ಬಗ್ಗೆ ಕಿಂಚಿತ್ತೂ ವಿಚಾರ ಮಾಡಿದವರಲ್ಲ ಎಂದು ಡಾ. ಪ್ರಭುಸಾರಂಗದೇವ ಶಿವಾಚಾರ್ಯರು ಹೇಳಿದರು. ಪಟ್ಟಣದ ಸಾರಂಗಮಠದಲ್ಲಿ ಹಾನಗಲ್ಲ ಶ್ರೀ...
- Advertisement -

More Articles Like This

- Advertisement -
close
error: Content is protected !!