ಸಾಹಿತ್ಯ ಕ್ಷೇತ್ರಕ್ಕೆ ಬೈಲಹೊಂಗಲದ ಕೊಡುಗೆ ಅಪಾರ – ಬಿರಾದಾರ

Must Read

ನೇಗಿನಹಾಳ: ಅಚ್ಚಗನ್ನಡದ ನಾಡಾಗಿರುವ ಬಯಲು ಹೊಂಗಲವು ಕಲೆ, ಸಾಹಿತ್ಯ, ಸಂಸ್ಕೃತಿ, ಸ್ವಾಭಿಮಾನಗಳ ತವರಾಗಿದ್ದು, ಕನ್ನಡ ಸಾಹಿತ್ಯಕ್ಕೆ ಅಪಾರವಾದ ಕೊಡುಗೆಯನ್ನು ನೀಡಿದೆ ಎಂದು ಯರಗಟ್ಟಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕ ಡಾ. ರಾಜಶೇಖರ ಬಿರಾದಾರ ಹೇಳಿದರು.

ಬೈಲಹೊಂಗಲ ತಾಲೂಕಿನ ಎಂಟನೆಯ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ವಿಚಾರಗೋಷ್ಠಿಯಲ್ಲಿ ಸಾಹಿತ್ಯ ಕ್ಷೇತ್ರಕ್ಕೆ ಬೈಲಹೊಂಗಲ ತಾಲೂಕಿನ ಕೊಡುಗೆ ಎಂಬ ವಿಷಯದ ಕುರಿತು ಉಪನ್ಯಾಸ ನೀಡುತ್ತಾ ಮಾತನಾಡಿದ ಅವರು ಬೈಲಹೊಂಗಲದ ಕವಿ ಸಾಹಿತಿಗಳು ಆಧುನಿಕ ಸಾಹಿತ್ಯ ಪ್ರಕಾರದ ಎಲ್ಲ ವಿಧಗಳಲ್ಲಿಯೂ ಸಾಹಿತ್ಯ ಕೃಷಿಯನ್ನು ನಡೆಸಿದ್ದು ಕನ್ನಡ ಸಾಹಿತ್ಯ ಪರಿಷತ್ತು, ಮಠಮಾನ್ಯಗಳು ಮತ್ತು ಸಹೃದಯಿ ಓದುಗರು ತಾಲೂಕಿನಲ್ಲಿ ಸಾಹಿತ್ಯಕ ಬೆಳವಣಿಗೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸಲು ಶ್ರಮಿಸಿದ್ದಾರೆ ಎಂದು ಪ್ರತಿಪಾದಿಸಿದರು.

ಮಹಾಂತೇಶ ನಗರ ರಹವಾಸಿಗಳ ಬಿ. ಇ.ಡಿ. ಕಾಲೇಜಿನ ಪ್ರಾಚಾರ್ಯೆ ಡಾ. ನಿರ್ಮಲಾ ಬಟ್ಟಲ್ ಅವರು ಬೈಲಹೊಂಗಲ ತಾಲೂಕಿನ ಸ್ವಾತಂತ್ರ್ಯ ಹೋರಾಟಗಾರರು ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದರು.

ಕರ್ನಾಟಕ ರಾಜ್ಯ ಪ್ರೌಢಶಾಲಾ ಶಿಕ್ಷಕರ ಸಂಘದ ಬೆಳಗಾವಿ ಜಿಲ್ಲಾ ಘಟಕದ ಅಧ್ಯಕ್ಷರಾದ ಡಾ. ಗಜಾನಂದ ಸೊಗಲನ್ನವರ ಅವರು ಆಶಯ ನುಡಿಗಳನ್ನು ಆಡಿದರು. ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷರಾದ ಪ್ರೊ. ಸಿ. ವಿ. ಜ್ಯೋತಿ ಅವರು ಗೋಷ್ಠಿಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕನ್ನಡ ಸಾಹಿತ್ಯ ಪರಿಷತ್ತಿನ ಬೆಳಗಾವಿ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷರಾದ ಮೋಹನ ಬಸನಗೌಡ ಪಾಟೀಲ, ತಾಲೂಕು ಘಟಕದ ಅಧ್ಯಕ್ಷರಾದ ಎನ್.ಆರ್. ಠಕ್ಕಾಯಿ, ಗೌರವ ಕಾರ್ಯದರ್ಶಿಗಳಾದ ಡಾ. ಪ್ರಕಾಶ ಮೆಳವಂಕಿ ಉಪಸ್ಥಿತರಿದ್ದರು. ಡಿ.ವೈ. ಗರಗದ ನಿರೂಪಿಸಿದರು, ಸಂತೋಷ ಹಡಪದ ವಂದಿಸಿದರು.

LEAVE A REPLY

Please enter your comment!
Please enter your name here

Latest News

ಗಾಳಿಪಟದ ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ವ್ಯಕ್ತಿ ದಾರುಣ ಸಾವು

ಬೀದರ - ಮಕರ ಸಂಕ್ರಾಂತಿ ನಿಮಿತ್ತ ಗಾಳಿಪಟ ಹಾರಿಸುತ್ತಿರುವ ಸಂದರ್ಭದಲ್ಲಿ ರಸ್ತೆಯಲ್ಲಿ ಬೈಕ್ ಮೇಲೆ ಹೋಗುತ್ತಿದ್ದ ಯುವಕ ಸಂಜಿಕುಮಾರ ಎಂಬುವವರ ಕುತ್ತಿಗೆಗೆ ಗಾಳಿ ಪಟದ ಮಾಂಜಾ(ಚೀನಿ...

More Articles Like This

error: Content is protected !!
Join WhatsApp Group