spot_img
spot_img

ಒಳ್ಳೆಯದನ್ನೆಲ್ಲ ಕೊಟ್ಟುಬಿಡೋಣ

Must Read

- Advertisement -

ಇಸ್ಲಾಂ ಧರ್ಮದ ಪ್ರಖ್ಯಾತ ಗುರು ‘ಸಾದಿ’ ಸಣ್ಣವರಿದ್ದಾಗ ತನ್ನ ತಂದೆಯೊಂದಿಗೆ ಮಸೀದಿಗೆ ಹೋಗಿದ್ದರು. ತಂದೆ ಮಕ್ಕಳು ಮಸೀದಿಯ ಮೇಲ್ವಿಚಾರಣೆ ನೋಡಿಕೊಳ್ಳಬೇಕಿತ್ತು. ಅಲ್ಲಿ ಪ್ರಾರ್ಥನೆಗೆ ಬಂದವರೆಲ್ಲ ನಿದ್ದೆಗೆ ಜಾರಿದ್ದರು. ಅದನ್ನು ಕಂಡ ಸಾದಿಗೆ ಆಶ್ಚರ್ಯವಾಯಿತು. ಆತ ತಂದೆಗೆ ತಿಳಿಸಿದ. ‘ನಮ್ಮಿಬ್ಬರನ್ನು ಬಿಟ್ಟು ಬಾಕಿಯವರೆಲ್ಲ ಮಲಗಿ ಬಿಟ್ಟಿದ್ದಾರೆ. ಆತನ ತಂದೆಗೆ ಕೋಪ ಬಂದಿತು. ‘ನಿನ್ನ ಕೆಲಸ ನೀನು ಮಾಡು. ಬೇರೆಯವರು ಏನು ಮಾಡುತ್ತಿದ್ದಾರೆಂದು ನೋಡುವುದು ನಿನ್ನ ಕೆಲಸವಲ್ಲ. ‘ಬೇರೆಯವರಲ್ಲಿ ತಪ್ಪು ಕಂಡು ಹಿಡಿಯುವುದರಿಂದ ಯಾವ ಪ್ರಯೋಜನವೂ ಇಲ್ಲ. ಅದರ ಬದಲು ನಿನ್ನಲ್ಲಿರುವ ತಪ್ಪುಗಳ ಬಗ್ಗೆ ಆತ್ಮಾವಲೋಕನ ಮಾಡಿಕೊ. ಬೇರೆಯವರಲ್ಲಿ ಹಲವು ತಪ್ಪುಗಳಿದ್ದು ಒಂದೇ ಒಂದು ಒಳ್ಳೆಯ ಗುಣವಿದ್ದರೂ ಅದರ ಮೇಲೆ ನಿನ್ನ ಗಮನವಿಡು.ಒಳ್ಳೆಯದರತ್ತ ಗಮನ ಹರಿಸುವುದರಿಂದ ಒಳ್ಳೆಯದೇ ಆಗುತ್ತದೆ.’ ಎಂದರು.

ಇತರರಲ್ಲಿ ಒಳ್ಳೆಯ ಗುಣಗಳನ್ನು ಮಾತ್ರ ಕಾಣುತ್ತಿದ್ದರೆ ಇಡೀ ಜಗತ್ತೇ ಒಳ್ಳೆಯದಾಗಿ ಕಾಣಿಸುವುದು. ಒಳಿತು ಕೆಡುಕುಗಳಿಗಿಂತ ನೋಡುವ ದೃಷ್ಟಿ ಒಳ್ಳೆಯದಾಗಿರಬೇಕು. ಸಂಪೂರ್ಣವಾಗಿ ಒಳ್ಳೆಯ ಗುಣಗಳು ತುಂಬಿರುವ ವ್ಯಕ್ತಿ ಸಿಗುವುದು ದುರ್ಲಭ. ಹಾಗಂತ ಬರಿ ಕೆಟ್ಟ ಗುಣಗಳಿರುವ ವ್ಯಕ್ತಿ ಸಿಗುವುದು ಸುಲಭವಲ್ಲ. ಹಾಗಿದ್ದರೆ ಪ್ರತಿಯೊಬ್ಬರಲ್ಲೂ ಒಳ್ಳೆಯ ಮತ್ತು ಕೆಟ್ಟ ಗುಣಗಳು ಇದ್ದೇ ಇರುತ್ತವೆಂಬುದು ಸೂರ್ಯನಷ್ಟೇ ಸ್ಪಷ್ಟ. ಪ್ರತಿಯೊಬ್ಬ ವ್ಯಕ್ತಿ ಒಳ್ಳೆಯ ಮತ್ತು ಕೆಟ್ಟ ಗುಣಗಳ ಒಟ್ಟು ಮೊತ್ತ. ಯಾರಲ್ಲಿ ಒಳ್ಳೆಯ ಗುಣಗಳು ಹೆಚ್ಚಿವೆಯೋ ಅವರು ಒಳ್ಳೆಯವರು. ಹಾಗೆಯೇ ಕೆಟ್ಟ ಗುಣಗಳ ಪ್ರಮಾಣ ಹೆಚ್ಚಿದ್ದರೆ ಕೆಟ್ಟವರು.

ರಸಭರಿತ ಫಲಮೂಲ ಕೊಂಬೆ ತಾನಲ್ಲ.
ಫಲಸತ್ವ ಸಾಗಿಪ ಮಾರ್ಗ ತಾನಹುದು
ಮಾಡಿದನೆನಬೇಡ ನಿನದೆನಬೇಡ
ಜಗವೃಕ್ಷರಸ ಹರಿವ ಕೊಂಬೆ ನೀ ಮೂಢ

- Advertisement -

ಕೊಂಬೆಯಲ್ಲಿ ಗೊಂಚಲು ಗೊಂಚಲಾಗಿ ಬಿಟ್ಟ ಫಲಗಳನ್ನು ಕಂಡು ಕೊಂಬೆಯು ತನ್ನಿಂದ ಹಣ್ಣುಗಳು ಎಂದು ಹೆಮ್ಮೆ ಪಡಬಹುದೆ? ಮರದ ಎಲ್ಲ ಅಂಗಾಂಗಳು ಮತ್ತು ಬೇರುಗಳ ಜತೆಗೆ ನೆಲ ಜಲ ಗಾಳಿ ಬೆಳಕಿನಿಂದ ಪಡೆದ ಫಲಗಳು ಕೊಂಬೆಯ ಮೂಲಕ ಕಾಣಿಸಿಕೊಂಡಿವೆ. ಹೀಗಾಗಿ ಕೊಂಬೆ ಹಣ್ಣುಗಳಿಗೆ ಸಹಕಾರಿಯೇ ಹೊರತು ಹಣ್ಣುಗಳಿಗೆ ಅದೇ ಮೂಲವಲ್ಲ. ಹಾಗೆಯೇ ನಾನಷ್ಟೇ ಒಳ್ಳೆಯವನು ಅಂತ ಅನ್ನುವ ಹಾಗಿಲ್ಲ. ನನ್ನಲ್ಲಿರುವ ಒಳ್ಳೆಯತನಕ್ಕೆ ಜೊತೆಗಿರುವವರೂ ಕಾರಣ ಎಂಬುದನ್ನು ಅರಿಯಬೇಕು.

ಒಳ್ಳೆಯತನ ಗುರುತಿಸುವ ಒಳ್ಳೆಯ ಗುಣ ಎಲ್ಲರಲ್ಲೂ ಇರುವುದಿಲ್ಲ. ಒಳ್ಳೆಯ ನಡೆಯಿಂದ ಏನೂ ಲಾಭವಿಲ್ಲವೆನ್ನುತ್ತೇವೆ. ಆದರೆ ಒಳ್ಳೆಯತನಕ್ಕೆ ಸಾವಿರಾರು ಹೃದಯಗಳನ್ನು ಗೆಲ್ಲುವ ಶಕ್ತಿಯಿದೆ. ನೆಲ್ಸನ್ ಮಂಡೇಲಾ ಹೇಳಿರುವಂತೆ ‘ಮಾನವನ ಒಳ್ಳೆಯತನ ಜ್ಯೋತಿಯಿದ್ದಂತೆ ಅದನ್ನು ಮರೆಮಾಚಬಹುದು ಆದರೆ ಆರಿಸಲಾಗದು.’ಜರಡಿಯಿದ ಹಿಟ್ಟನ್ನು ಶೋಧಿಸುವಂತೆ ಒಳ್ಳೆಯವರು ಒಳ್ಳೆಯದನ್ನೇ ಮಾಡುತ್ತಿರುತ್ತಾರೆ. ಬರ್ನಾಡ್ ಶಾ ಹೇಳಿದಂತೆ ಸಾಯುವ ಮುನ್ನ ನಮ್ಮಲ್ಲಿರುವ ಒಳ್ಳೆಯದನ್ನೆಲ್ಲ ಕೊಟ್ಟುಬಿಡೋಣ.” ಕಾಲ ಎಲ್ಲವನ್ನೂ ಅಳಿಸಿದರೂ ಒಳ್ಳೆಯದನ್ನು ಮಾತ್ರ ಅಳಿಸಲು ಸಾಧ್ಯವಿಲ್ಲ. ಆದ್ದರಿಂದ ಒಳ್ಳೆಯತನ ನಮ್ಮ ಆಯ್ಕೆಯಾಗಿರಲಿ.

ಜಯಶ್ರೀ ಅಬ್ಬಿಗೇರಿ, ಬೆಳಗಾವಿ

- Advertisement -

 

 

- Advertisement -
- Advertisement -

Latest News

ಕವನ : ಗೊಂಬೆಗಳ ಕಣ್ಣೀರು

ಗೊಂಬೆಗಳ ಕಣ್ಣೀರು ಅಂದು ನಾವು ಅಪ್ಪ ಅವ್ವನನ್ನು ಕಾಡಿ ಬೇಡಿ ಗೊಂಬೆಗಳಿಗಾಗಿ ಅಳುತ್ತಿದ್ದೆವು ಜಾತ್ರೆ ಉತ್ಸವದಲ್ಲಿ ಹಿರಿಯರಿಗೆ ದೇವರ ಮೇಲಿನ ಭಕ್ತಿ ನಮಗೋ ಬಣ್ಣ ಬಣ್ಣದ ಗೊಂಬೆಗಳ ಮೇಲೆ ಆಸಕ್ತಿ ಅವ್ವ ಹೇಗೋ ಮಾಡಿ ಅಪ್ಪನ ತುಡುಗಿನಲಿ ತನ್ನಲಿದ್ದ ದುಡ್ಡು ಕೊಟ್ಟು ತಂದಳು ಗೊಂಬೆಗಳ ಮಿತಿ ಇರಲಿಲ್ಲ...
- Advertisement -

More Articles Like This

- Advertisement -
close
error: Content is protected !!
Join WhatsApp Group