- Advertisement -
ಸಿಂದಗಿ: ಕಳೆದ ಬಿಜೆಪಿ ಸರಕಾರದಲ್ಲಿ ಕರ್ನಾಟಕ ರಾಜ್ಯದ ಮಾಜಿ ಉಪ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡು ಪಕ್ಷವನ್ನು ಸಂಘಟಿಸುವಲ್ಲಿ ಹೆಚ್ಚಿನ ಮುತುವರ್ಜಿ ವಹಿಸಿ ಉತ್ತರ ಕರ್ನಾಟಕದಲ್ಲಿ ಪಕ್ಷದ ಗೆಲುವಿಗೆ ಕಾರಣಕರ್ತರಾದ ಲಕ್ಷ್ಮಣ ಸವದಿ ಅವರನ್ನು ಸಚಿವ ಸಂಪುಟದಲ್ಲಿ ಸೇರ್ಪಡೆ ಮಾಡಬೇಕು ಎಂದು ಕಾಂಗ್ರೆಸ್ ಪಕ್ಷದ ಜಿಲ್ಲಾ ಕಾರ್ಯದರ್ಶಿ ಸಂತೋಷ ಗು ಬಿರಾದಾರ ಆಗ್ರಹಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಪಕ್ಷದ ಜಿಲ್ಲಾಧ್ಯಕ್ಷ ಮಲ್ಲು ಲೋಣಿ ಅವರು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಸಾಮಾನ್ಯ ಕಾರ್ಯಕರ್ತರಾಗಿ ಸೇವೆ ಸಲ್ಲಿಸಿ ಪಕ್ಷದ ಸಂಘಟನೆಗೆ ಹೆಚ್ಚಿನ ಆಸಕ್ತಿ ವಹಿಸಿದ್ದಾರೆ ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ನಾಮನಿರ್ದೇಶನ ಮಾಡುವಂತೆ ಒತ್ತಾಯಿಸಿದ್ದಾರೆ.