spot_img
spot_img

ಪೂಜಾರಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡಿ ಗೆಲ್ಲಿಸಿ – ರಮೇಶ ಭೂಸನೂರ

Must Read

- Advertisement -

ಸಿಂದಗಿ: ರಾಜ್ಯದಲ್ಲಿ ಬಿಜೆಪಿ ಸರ್ಕಾರವಿರುವದರಿಂದ ಸ್ಥಳೀಯ ಸಂಸ್ಥೆಗಳ ಸಮಸ್ಯೆಗಳಿಗೆ ಅವರು ಸ್ಪಂದಿಸಿ ಪರಿಹಾರ ನೀಡುವಲ್ಲಿ ಪ್ರಾಮಾಣಿಕ ಕೆಲಸ ಮಾಡುವುದಲ್ಲದೆ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿಗೆ ನಡೆದ ಚುನಾವಣೆಯಲ್ಲಿ ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸದಸ್ಯರು ಬಿಜೆಪಿ ಅಭ್ಯರ್ಥಿಗೆ ಪ್ರಥಮ ಪ್ರಾಶಸ್ತ್ಯ ಮತ ನೀಡುವ ಮೂಲಕ ಪಕ್ಷಕ್ಕೆ ಬಲ ನೀಡಬೇಕು ಎಂದು ಶಾಸಕ ರಮೇಶ ಭೂಸನೂರ ಮನವಿ ಮಾಡಿಕೊಂಡರು.

ಪಟ್ಟಣದ ಮಾಂಗಲ್ಯ ಭವನದಲ್ಲಿ ಬಿಜೆಪಿ ಮಂಡಲದ ವತಿಯಿಂದ ವಿಧಾನಪರಿಷತ್ ಚುನಾವಣೆಯ ನಿಮಿತ್ತ ತಾಲೂಕಿನ ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರು, ಪುರಸಭೆ ಸದಸ್ಯರಿಗಾಗಿ ಹಮ್ಮಿಕೊಂಡ ಪೂರ್ವಭಾವಿ ಪ್ರಚಾರ ಸಭೆಯಲ್ಲಿ ಬಿಜೆಪಿ ಅಭ್ಯರ್ಥಿ ಪಿ.ಎಚ್. ಪೂಜಾರ ಅವರ ಪರ ಮತಯಾಚಿಸಿ ಅವರು ಮಾತನಾಡಿ, ಈ ಮತಕ್ಷೇತ್ರದ ವ್ಯಾಪ್ತಿಯಲ್ಲಿನ ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸದಸ್ಯರು ಬಿಜೆಪಿ ಅಭ್ಯರ್ಥಿ ಪಿ.ಎಚ್. ಪೂಜಾರ ಅವರಿಗೆ ನಿರೀಕ್ಷೆ ಮೀರಿ ಮತ ನೀಡಬೇಕು. ಸಿಂದಗಿ ಕ್ಷೇತ್ರದಲ್ಲಿ ನನ್ನ ಅಧಿಕಾರದ ಅವಧಿಯಲ್ಲಿ ಸಾಕಷ್ಟು ಅಭಿವೃದ್ಧಿ ಪರ ಕೆಲಸಗಳನ್ನು ಮಾಡಿದ್ದೇನೆ. ಅಲ್ಲದೇ ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ, ರಾಜ್ಯದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಾಕಷ್ಟು ಅಭಿವೃದ್ಧಿಪರ ಸಾಧನೆಗಳನ್ನು ನೋಡಿ ಬಿಜೆಪಿ ಅಭ್ಯಥಿ ಪಿ.ಎಚ್. ಪೂಜಾರ ಅವರಿಗೆ ಹೆಚ್ಚಿನ ಮತಗಳನ್ನು ನೀಡಿ ಚುನಾಯಿಸಿ ವಿಧಾನ ಪರಿಷತ್ತಿಗೆ ಕಳುಹಿಸಬೇಕು. ಎಂದು ಮನವಿ ಮಾಡಿಕೊಂಡರು.

ಮಾಜಿ ಶಾಸಕ ಶ್ರೀಕಾಂತ ಕುಲಕರ್ಣಿ, ಶಾಸಕರಾದ ಎ.ಎಸ್. ಪಾಟೀಲ ನಡಹಳ್ಳಿ, ಸೋಮನಗೌಡ ಪಾಟೀಲ ಸಾಸನೂರ, ಎಂಎಲ್‍ಸಿ ಅರುಣ ಶಹಾಪೂರ, ಮಾಜಿ ಸಚಿವರಾದ ಎಸ್.ಕೆ. ಬೆಳ್ಳುಬ್ಬಿ, ಅಪ್ಪಾಸಾಹೇಬ ಪಟ್ಟಣಶೆಟ್ಟಿ ಮಾತನಾಡಿ, ಮೇಲ್ಮನೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪಿ.ಎಚ್. ಪೂಜಾರ ಅವರಿಗೆ ಪ್ರಥಮ ಪ್ರಾಶಸ್ತ್ಯ ಮತ ನೀಡುವ ಮೂಲಕ ಬಹುಮತದಿಂದ ಚುನಾಯಿಸಿ ಎಂದು ಮತಯಾಚಿಸಿದರು.

- Advertisement -

ಬಿಜೆಪಿ ಅಭ್ಯಥಿ ಪಿ.ಎಚ್. ಪೂಜಾರ ಮಾತನಾಡಿ, ಕಳೆದ ವಿಧಾನಸಭೆ ಉಪಚುನಾವಣೆಯಲ್ಲಿ ರಮೇಶ ಭೂಸನೂರ ಅವರನ್ನು ಹೇಗೆ ಅತ್ಯಂತ ಬಹುಮತದಿಂದ ಚುನಾಯಿಸಿದ್ದಿರಿ ಹಾಗೆಯೇ ಈ ವಿಧಾನ ಪರಿಷತ್ ಚುನಾವಣೆಯಲ್ಲಿ ನನಗೆ ಪ್ರಥಮ ಪ್ರಾಶಸ್ತ್ಯ ಮತ ನೀಡಿ ಚುನಾಯಿಸಿ ನಿಮ್ಮ ಧ್ವನಿಯಾಗಿ ಕೆಲಸ ಮಾಡುತ್ತೇನೆ ಎಂದು ಹೇಳಿದರು.

ಸಿಂದಗಿ ಬಿಜೆಪಿ ಮಂಡಲ ಅಧ್ಯಕ್ಷ ಈರಣ್ಣ ರಾವೂರ ಪ್ರಾಸ್ತಾವಿಕವಾಗಿ ಮಾತನಾಡಿದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಅಧ್ಯಕ್ಷ ಆರ್.ಪಾಟೀಲ ಕೂಚಬಾಳ, ಸಿದ್ದು ಪಾಟೀಲ, ಮಲ್ಲಿಕಾರ್ಜುನ ಜೋಗುರ, ರಾಜಶೇಖರ ಪೂಜಾರಿ, ಬಿ.ಎಚ್. ಬಿರಾದಾರ, ಚಂದ್ರಶೇಖರ ಕವಟಗಿ, ಶಿವರುದ್ರ ಬಾಗಲಕೋಟೆ, ಉಮೇಶ ಕೊಳಕೂರ, ಬಸವರಾಜ ಕುಂಬಾರ, ಶಿಲ್ಪಾ ಕುದರಗೊಂಡ, ಸಂಜಯ ಪಾಟೀಲ, ಶ್ರೀಮಂತ ನಾಗೂರ, ಸಂತೋಷ ಪಾಟೀಲ ಡಂಬಳ, ಸಿದ್ದು ಬುಳ್ಳಾ ಸೇರಿದಂತೆ ಇತರರು ವೇದಿಕೆ ಮೇಲೆ ಇದ್ದರು.

- Advertisement -

ತಾಲೂಕಿನ ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರು, ಪುರಸಭೆ ಸದಸ್ಯರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ನಿಂಗರಾಜ ಬಗಲಿ ಸ್ವಾಗತಿಸಿದರು. ಗುರು ತಳವಾರ ನಿರೂಪಿಸಿ ವಂದಿಸಿದರು.

- Advertisement -
- Advertisement -

Latest News

ಎಲ್ಲರಂತೆ ವಿಕಲಚೇತನರು ಬಾಳ್ವೆ ನಡೆಸುವಂತಾಗಬೇಕು- ಸಲೀಂ ನದಾಫ

ಬೆಳಗಾವಿ: "ಎಲ್ಲರಂತೆ ವಿಕಲಚೇತನರು ಬಾಳ್ವೆ ನಡೆಸುವಂತಾಗಬೇಕು.ವಿಕಚೇತನರಿಗೆ ಅನುಕಂಪದ ಬದಲು ಅವಕಾಶ ನೀಡುವ ಅಗತ್ಯವಿದೆ. ಶಾಲಾ ಸಿದ್ಧತಾ ಕೇಂದ್ರಗಳ ಬಲವರ್ಧನೆ ಕೂಡ ಅವಶ್ಯಕ. ಈ ತರಬೇತಿ ಸದುಪಯೋಗ...
- Advertisement -

More Articles Like This

- Advertisement -
close
error: Content is protected !!
Join WhatsApp Group