ಬೀಜ ವಿತರಣೆಯಲ್ಲಿ ಗೋಲ್ ಮಾಲ್; ಮೆಹಕರ್ ಗ್ರಾಮಸ್ಥರ ಆರೋಪ, ಕರ್ನಾಟಕ ಸೋಯಾ ಬೀಜ ಮಹಾರಾಷ್ಟ್ರಕ್ಕೆ

Must Read

ಹೊಸ ಪುಸ್ತಕ ಓದು: ಕನ್ನಡ ಸಾಹಿತ್ಯದಲ್ಲಿ ಅನುಭಾವ

ಕನ್ನಡ ಸಾಹಿತ್ಯದಲ್ಲಿ ಅನುಭಾವ ಪ್ರಧಾನ ಸಂಪಾದಕರು : ಪ್ರೊ. ಬಿ. ಬಿ. ಡೆಂಗನವರ ಪ್ರಕಾಶಕರು : ಬೆಳದಿಂಗಳು ಪ್ರಕಾಶನ, ಬೆಳಗಾವಿ, ೨೦೨೦ ಮೊ: ೯೯೦೨೪೯೫೬೯೫ ‘ಕನ್ನಡದಲ್ಲಿ ಅನುಭಾವ ಸಾಹಿತ್ಯ’ ಇದೊಂದು ಮೌಲಿಕ...

ಸ್ನೇಹಿತರ ದಿನಾಚರಣೆಯ ಶುಭಾಷಯಗಳು

ನಮ್ಮಲ್ಲಿ ಎಷ್ಟೋ ದಿನಾಚರಣೆಗಳಿವೆ. ಇದರಲ್ಲಿ ಸ್ನೇಹಕ್ಕೆ ಕೊಡುವ ಬೆಲೆ ಯಾವುದಕ್ಕೂ ಕೊಡಲಾಗದು ಎನ್ನುತ್ತಾರೆ. ಕಾರಣ ಇಲ್ಲಿ ಸ್ವಾರ್ಥ ಅಹಂಕಾರವಿರದೆ ಶುದ್ದ ಭಾವನೆಗಳ ಸಮ್ಮಿಲನವಿರುತ್ತದೆ. ಬಡವ ಬಡವನನ್ನು...

ಪಿಂಜಾರ ಅಭಿವೃದ್ಧಿ ನಿಗಮ ಸ್ಥಾಪಿಸಲು ಒತ್ತಾಯ

ಸಿಂದಗಿ: ರಾಜ್ಯದಲ್ಲಿ ಪಿಂಜಾರ, ನದಾಫ್ ಸಮುದಾಯಗಳು ಶಿಕ್ಷಣ, ಆರ್ಥಿಕ, ಸಾಮಾಜಿಕ, ರಾಜಕೀಯವಾಗಿ ಹಿಂದುಳಿದಿದ್ದು ಈ ಜನಾಂಗ ಉದ್ದಾರವಾಗಬೇಕಾದರೆ ಪಿಂಜಾರ್ ಅಭಿವೃದ್ಧಿ ನಿಗಮ ಅವಶ್ಯಕತೆ ಇದೆ. ಪ್ರವರ್ಗ...

ಬೀದರ – ತಾಲ್ಲೂಕಿನ ಮೇಹಕರ ಗ್ರಾಮಸ್ಥರು ಸೋಯಾ ಬಿತ್ತನೆ ಬೀಜ ಸಿಗದಿರುವುದರಿಂದ ಗ್ರಾಮದ ರೈತ ಸಂಪರ್ಕ ಕೇಂದ್ರದ ಎದುರು ಪ್ರತಿಭಟನೆ ನಡೆಸಿದರು.

‘ನಮ್ಮ ಗ್ರಾಮದಲ್ಲಿ 18 ಸಾವಿರ ಹೆಕ್ಟೇರ ಜಮೀನು ಇದೆ. ಆದರೆ ಸಣ್ಣ ಸಾಗುವಳಿ ರೈತರೊಬ್ಬರಿಗೂ ಸೋಯಾ ಬೀಜ ಸಿಕ್ಕಿಲ್ಲ. ಜಿಲ್ಲಾಡಳಿತ ನಮ್ಮ ಊರಿನ ರೈತರಿಗೆ ಪದೇ ಪದೇ ಅನ್ಯಾಯ ಮಾಡುತ್ತಿದೆ. ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಅವರು ನಮ್ಮ ಬೇಡಿಕೆಗೆ ಸ್ಪಂದಿಸುತ್ತಿಲ್ಲ’ ಎಂದು ರೈತ ಮಹಿಳೆ ನಂದಾಬಾಯಿ
ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ಸಮರ್ಪಕ ಬೀಜ ವಿತರಣೆಯಲ್ಲಿ ಕೃಷಿ ಇಲಾಖೆ ವಿಫಲವಾಗಿದೆ. ಬೀಜ ವಿತರಣೆಯಲ್ಲಿ ಗೋಲ್ ಮಾಲ್ ಮಾಡಲಾಗಿದೆ ಪಕ್ಕದ ಮಹಾರಾಷ್ಟ್ರ ರಾಜ್ಯಕ್ಕೆ ಅಕ್ರಮವಾಗಿ ಬೀಜಗಳನ್ನ ಮಾರಾಟ ಮಾಡಿರಬಹುದು ಅನ್ನೋ ಶಂಖೆಯನ್ನ ವ್ಯಕ್ತ ಪಡಿಸಿದ ರೈತ ಶಿವಾಜಿ ಹುಲಸೂರೆ ಇಲ್ಲಿಯವರೆಗೆ 400 ಟೋಕನ್ ಕೊಟ್ಟಿದ್ದು ನನ್ನ ಕ್ರಮ ಸಂಖ್ಯೆ 39 ಇದೆ ನನಗೆ ಬೀಜ ಸಿಕ್ಕಿಲ್ಲ ಆದ್ರೆ 350 ಕ್ರಮ ಸಂಖ್ಯೆ ದೊಡ್ಡ ಮನುಷ್ಯರಿಗೆ, ಬೇಕಾದವರಿಗೆ ಬೇಕಾ ಬಿಟ್ಟಿಯಾಗಿ ಅಧಿಕಾರಿಗಳು ಬೀಜ ನೀಡಿದ್ದಾರೆ ಎಂದು ಅಸಮಾಧಾನ ಹೊರ ಹಾಕಿದರು.

- Advertisement -

ಕಳೆದ ವಾರದಿಂದ ಇಲ್ಲಿಯ ರೈತ ಸಂಪರ್ಕ ಕೇಂದ್ರದ ಎದುರು ಪ್ರತಿಭಟನೆ ನಡೆಸುತ್ತಿರುವ ವೇಳೆ ಆಗಮಿಸಿದ ಕೃಷಿ ಅಧಿಕಾರಿಗೆ ರೈತರು ತರಾಟೆಗೆ ತೆಗೆದುಕೊಂಡರೂ ಏನು ಪ್ರಯೋಜನ ಆಗಲಿಲ್ಲ.

‘ಸಮರ್ಪಕ ಬಿತ್ತನೆ ಬೀಜ ವಿತರಿಸುವಲ್ಲಿ ಕೃಷಿ ಅಧಿಕಾರಿಗಳು ವಿಫಲರಾಗಿದ್ದಾರೆ. ಈಗಾಗಲೇ ಮಳೆ ಸುರಿಯುತ್ತಿದ್ದು ಬಿತ್ತನೆ ಬೀಜ ಸಿಗದೆ ರೈತರು ಕಂಗಾಲಾಗಿದ್ದಾರೆ. ವಾರದಿಂದ ಪ್ರತಿಭಟನೆ ನಡೆಸುತ್ತಿದ್ದರೂ ಅಧಿಕಾರಿಗಳು ಸ್ಪಂದಿಸುತ್ತಿಲ್ಲ’ ಎಂದು ಗ್ರಾಮಸ್ಥರು ಒಕ್ಕೊರಲಿನ ಧ್ವನಿಯಲ್ಲಿ ದೂರಿದ್ದಾರೆ.

ಮುಂಗಾರು ಮಳೆ ಆರಂಭವಾಗಿದ್ದು ರೈತರು ಬಿತ್ತನೆ ಕಾರ್ಯದಲ್ಲಿ ತೊಡಗಬೇಕಾಗಿದೆ. ಇಲ್ಲಿಯ ಪ್ರಮುಖ ಬೆಳೆಯಾದ ಸೊಯಾಬೀನ್ ಬೀಜವನ್ನು ರೈತರಿಗೆ ಪೂರೈಸುವಲ್ಲಿ ಕೃಷಿ ಇಲಾಖೆ ಹಾಗೂ ತಾಲೂಕಾಡಳಿತ ವಿಫಲವಾಗಿದೆ. ಅದರಲ್ಲೂ ರಾಜ್ಯದ ಬಿತ್ತನೆ ಬೀಜವನ್ನು ಅಕ್ರಮವಾಗಿ ನೆರೆಯ ಮಹಾರಾಷ್ಟ್ರ ಕ್ಕೆ ಸಾಗಿಸಲಾಗಿದೆ ಎಂದು ರೈತರು ದೂರಿದ್ದು ಈ ಬಗ್ಗೆ ತನಿಖೆ ನಡೆಯಬೇಕಾಗಿದೆ.

ವರದಿ: ನಂದಕುಮಾರ ಕರಂಜೆ
ಟೈಮ್ಸ್ ಆಫ್ ಕರ್ನಾಟಕ, ಬೀದರ

- Advertisement -
- Advertisement -

Latest News

ಹೊಸ ಪುಸ್ತಕ ಓದು: ಕನ್ನಡ ಸಾಹಿತ್ಯದಲ್ಲಿ ಅನುಭಾವ

ಕನ್ನಡ ಸಾಹಿತ್ಯದಲ್ಲಿ ಅನುಭಾವ ಪ್ರಧಾನ ಸಂಪಾದಕರು : ಪ್ರೊ. ಬಿ. ಬಿ. ಡೆಂಗನವರ ಪ್ರಕಾಶಕರು : ಬೆಳದಿಂಗಳು ಪ್ರಕಾಶನ, ಬೆಳಗಾವಿ, ೨೦೨೦ ಮೊ: ೯೯೦೨೪೯೫೬೯೫ ‘ಕನ್ನಡದಲ್ಲಿ ಅನುಭಾವ ಸಾಹಿತ್ಯ’ ಇದೊಂದು ಮೌಲಿಕ...
- Advertisement -

More Articles Like This

- Advertisement -
close
error: Content is protected !!