ಕರ್ನಾಟಕ ರಾಜ್ಯದ ಸುವರ್ಣ ಸಂಭ್ರಮ ಉತ್ಸವದಲ್ಲಿ ಕರ್ನಾಟಕ ರಾಜ್ಯದ ಏಕೀಕರಣಕ್ಕಾಗಿ ಹೋರಾಡಿದ ಹೋರಾಟಗಾರರನ್ನು ಸ್ಮರಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. 1956 ರಲ್ಲಿ ಭಾಷಾವಾರು ಪ್ರಾಂತ ರಚನೆಯಾದಾಗ ಮೈಸೂರ್ ರಾಜ್ಯವು ಉದಯವಾಯಿತು 1973 ನವೆಂಬರ್ 1 ರಂದು ಕರ್ನಾಟಕ ಎಂದು ಮರುನಾಮಕರಣವಾಯಿತು. ಇಂದು ಕರ್ನಾಟಕ ರಾಜ್ಯದ ಸುವರ್ಣ ಸಂಭ್ರಮೋತ್ಸವದಲ್ಲಿ ಭಾಗಿಯಾಗಿರುವುದು ನಮಗೆಲ್ಲಾ ಅತ್ಯಂತ ಹೆಮ್ಮೆಯ ವಿಚಾರವಾಗಿದೆ. ಕನ್ನಡ ಭಾಷೆಯನ್ನು ಬಳಸುವ ಮೂಲಕ ಕನ್ನಡ ಭಾಷೆಯನ್ನು ನಾವೆಲ್ಲ ಬೆಳೆಸಬೇಕಾಗಿದೆ. ಎಂದು ಬೆಳಗಾವಿ ಜಿಲ್ಲೆಯ ಹಿರಿಯ ಸಾಹಿತಿಗಳು ಖ್ಯಾತ ಕಾದಂಬರಿಕಾರರಾದ ಯ.ರು ಪಾಟೀಲ ಅವರು ಮಾತನಾಡಿದರು.
ಬೆಳಗಾವಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಕನ್ನಡ ಭವನದಲ್ಲಿ 68ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ರಾಷ್ಟ್ರಧ್ವಜಾರೋಹಣವನ್ನು ಶಿವನಗೌಡ ಪಾಟೀಲ ಇವರು ನೆರವೇರಿಸಿದರು. ಖ್ಯಾತ ಹಿರಿಯ ಸಾಹಿತಿಗಳಾದ ಸರಜೂ ಕಾಟ್ಕರ್ ಇವರು ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳಗಾವಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಮಂಗಲಾ. ಮೆಟಗುಡ್ ಇವರು ವಹಿಸಿದ್ದರು
ಆರಂಭದಲ್ಲಿ ಕೆಎಲ್ಇ ಸಂಗೀತ ಶಾಲೆಯ ವಿದ್ಯಾರ್ಥಿಗಳಿಂದ ಆರು ಕನ್ನಡ ಗೀತೆಗಳನ್ನು ಹಾಡಿದರು. ಗಡಿ ಕನ್ನಡಿಗ ಪತ್ರಿಕಾ ಸಂಪಾದಕರಾದ ಮುರುಗೇಶ ಶಿವಪೂಜಿ ಇವರು ಕಾರ್ಯಕ್ರಮದಲ್ಲಿ ವಿಶೇಷ ಅತಿಥಿಯಾಗಿ ಭಾಗವಹಿಸಿ ಬಹುಮಾನ ವಿತರಣೆಯನ್ನು ಮಾಡಿದರು.
ಕಾರ್ಯಕ್ರಮದ ಆರಂಭದಲ್ಲಿ ಕಾರ್ಯದರ್ಶಿ ಗಳಾದ ಎಂ ವೈ. ಮೆಣಸಿನಕಾಯಿ ಎಲ್ಲರನ್ನೂ ಸ್ವಾಗತಿಸಿದರು. ವೀರಭದ್ರ ಅಂಗಡಿ ಇವರು ಕಾರ್ಯಕ್ರಮವನ್ನು ನಿರೂಪಿಸಿದರು. ಸುನಿಲ ಹಲವಾಯಿ ಇವರು ವಂದನಾರ್ಪಣೆಯನ್ನು ಸಲ್ಲಿಸಿದರು.
ಹಿರಿಯ ಸಾಹಿತಿಗಳಾದ ಸ. ರಾ. ಸುಳಕೂಡೆ, ಶ್ರೀರಂಗ ಜೋಶಿ, ಬಿ.ಬಿ ಮಠಪತಿ ಬೆಳಗಾವಿ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಸುರೇಶ ಹಂಜಿ, ವಿನೋದ ಜಗಜಂಪಿ, ಜಿಲ್ಲಾ ಲೇಖಕಿಯರ ಸಂಘದ ಅಧ್ಯಕ್ಷರಾದ ಜಯಶೀಲಾ ಬ್ಯಾಕೋಡ, ಪ್ರತಿಭಾ ಕಳ್ಳಿಮಠ ಮತ್ತು ಕೆ ಎಲ್ ಇ ಸಂಗೀತ ಶಾಲೆಯ ವಿದ್ಯಾರ್ಥಿನಿಯರು ಕನ್ನಡ ಅಭಿಮಾನಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.