ಇದೇ ದಿ.8ರಂದು ಬೆಂಗಳೂರಿನ ವಿಜಯನಗರದಲ್ಲಿರುವ ಶ್ರೀ.ಶ್ರೀ.ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಕ್ರೀಡಾಂಗಣದಲ್ಲಿ ಕರ್ನಾಟಕ ರಾಜ್ಯ ಸರಕಾರಿ ನಿವೃತ್ತ ನೌಕರರ ಸಂಘದ ‘ಸುವರ್ಣ ಮಹೋತ್ಸವ ಸಮಾರಂಭ’ ಜರುಗಲಿದೆ.
ಕಾರ್ಯಕ್ರಮವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉದ್ಘಾಟಿಸಲಿದ್ದು, ದಿವ್ಯ ಸಾನ್ನಿಧ್ಯವನ್ನು ಸಿದ್ದಗಂಗಾ ಮಠದ ಪರಮಪೂಜ್ಯ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳು ಮತ್ತು ಆದಿಚುಂಚನಗಿರಿ ಮಠದ ಶ್ರೀ ಸೌಮ್ಯನಾಥ ಸ್ವಾಮೀಜಿ ಅವರು ವಹಿಸಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಡಾ. ಎಲ್. ಭೈರಪ್ಪ ವಹಿಸಲಿದ್ದು ,ವಸತಿ ಸಚಿವರಾದ ವಿ ಸೋಮಣ್ಣನವರು ಸ್ಮರಣ ಸಂಚಿಕೆ ಬಿಡುಗಡೆ ಮಾಡಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಸರಕಾರದ ಹಿರಿಯ ಸಚಿವರು, ವಿಧಾನಸಭಾ ಸದಸ್ಯರು ಮತ್ತು ವಿಧಾನಪರಿಷತ್ ಸದಸ್ಯರು ಆಗಮಿಸಲಿದ್ದು ರಾಜ್ಯದ ನಿವೃತ್ತ ನೌಕರರ ಸಂಘದ ಪದಾಧಿಕಾರಿಗಳು ಮತ್ತು ರಾಜ್ಯದ ಎಲ್ಲಾ ನಿವೃತ್ತ ಸರಕಾರಿ ನೌಕರರು ಈ ಬೃಹತ್ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ರಂಗೇಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.