ಉತ್ತಮ ಶಿಕ್ಷಣದಿಂದ ಉತ್ತಮ ಜೀವನ : ಎನ್.ಆರ್.ಠಕ್ಕಾಯಿ

Must Read

ಬೂದಿಹಾಳ ಸರಕಾರಿ ಪ್ರೌಢಶಾಲೆಯಲ್ಲಿ ಸಂಭ್ರಮದ ಶಾಲಾ ಪ್ರಾರಂಭೋತ್ಸವ

ಬೈಲಹೊಂಗಲ: ತಾಲೂಕಿನ ಬೂದಿಹಾಳ ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ ಸನ್ 2025-26 ನೇ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವ ನಡೆಯಿತು.

ಅತ್ಯಂತ ಖುಷಿಯಿಂದ ಶಾಲೆಗೆ ಆಗಮಿಸಿದ ವಿದ್ಯಾರ್ಥಿಗಳನ್ನು ಶಾಲೆಯ ಶಿಕ್ಷಕರು ಆತ್ಮೀಯವಾಗಿ ಸ್ವಾಗತಿಸಿದರು. ಸರಸ್ವತಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವುದರ ಮೂಲಕ ಹೊಸ ಶೈಕ್ಷಣಿಕ ವರ್ಷವನ್ನು ಬರಮಾಡಿಕೊಳ್ಳಲಾಯಿತು. ಇದೇ ಸಂದರ್ಭದಲ್ಲಿ ಮಕ್ಕಳಿಗೆ ಪಠ್ಯಪುಸ್ತಕ ಹಾಗೂ ಸಮವಸ್ತ್ರ ವಿತರಿಸಲಾಯಿತು. ವಿದ್ಯಾರ್ಥಿಗಳ ಕುಂಭಮೇಳದೊಂದಿಗೆ ಗ್ರಾಮದಲ್ಲಿ ನಡೆದ ಪ್ರಭಾತಪೇರಿ ಎಲ್ಲರ ಗಮನ ಸೆಳೆಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಮುಖ್ಯಶಿಕ್ಷಕ ಎನ್.ಆರ್.ಠಕ್ಕಾಯಿ ಉತ್ತಮ ಶಿಕ್ಷಣ ಉತ್ತಮ ಜೀವನ ರೂಪಿಸುತ್ತದೆ ಎಂದು ಹೇಳಿದರು.

ಹೊಸ ಹುರುಪಿನಿಂದ ವಿದ್ಯಾರ್ಥಿಗಳು ಶಾಲೆಗೆ ಹಾಜರಾಗಿ ಪ್ರತಿದಿನ ಹೊಸದನ್ನು ಕಲಿಯುವ ಕುತೂಹಲ ಬೆಳೆಸಿಕೊಳ್ಳಬೇಕು. ಸರಕಾರಿ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ತಮ್ಮ ವಿದ್ಯಾಭ್ಯಾಸವನ್ನು ಪೂರ್ಣಗೊಳಿಸಿ ಸ್ವಾವಲಂಬಿಗಳಾಗುವ ಗುರಿ ಹೊಂದಿರಬೇಕು ಎಂದು ಅವರು ಅಭಿಪ್ರಾಯಪಟ್ಟರು.

ಸಮನ್ವಿ ಗಡಾದ, ಭೂಮಿಕಾ ಗರಗದ ಅನಿಸಿಕೆ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಎಸ್.ಡಿ.ಎಂ.ಸಿ ಅಧ್ಯಕ್ಷ ವಿನಾಯಕ ಬಡಿಗೇರ, ಸದಸ್ಯರಾದ ರಾಮಲಿಂಗಪ್ಪ ಮೆಕ್ಕೇದ, ಸಿದ್ದಪ್ಪ ಮನಗುತ್ತಿ, ಗ್ರಾಮ ಪಂಚಾಯತಿ ಸದಸ್ಯ ಮಹಾಂತೇಶ ಹುಣಶೀಕಟ್ಟಿ, ಶಿಕ್ಷಕರಾದ ಜಗದೀಶ ನರಿ, ಹೇಮಲತಾ ಪುರಾಣಿಕ, ಮಂಜುಳಾ ಕಾಳಿ, ಸಂತೋಷ ಸಾಳೂಂಕೆ ಉಪಸ್ಥಿತರಿದ್ದರು.10 ನೇ ತರಗತಿ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ಭಾಗ್ಯಶ್ರೀ ಬಡಿಗೇರ ಸ್ವಾಗತಿಸಿದರು. ಸಾನಿಕಾ ಕುಲಕರ್ಣಿ ವಂದಿಸಿದರು. ಚೇತನಾ ಗಡಾದ ನಿರೂಪಿಸಿದರು.

Latest News

ಸಾಹಿತ್ಯಕ್ಕೆ ಬದುಕು ಬದಲಿಸುವ ಶಕ್ತಿಯಿದೆ: ಡಾ.ಸುನಂದಾ

ಜಮಖಂಡಿ: ಸೃಜನಶೀಲ ಸಾಹಿತ್ಯಕ್ಕೆ ನಾಡು ಕಟ್ಟುವ ಮತ್ತು ನಾಡಿನ ಜನರ ಬದುಕು ಬದಲಿಸುವ ಶಕ್ತಿಯಿದೆ. ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ದಿಸೆಯಲ್ಲಿ ಕೊಕ್ಕನವರ ಅಕಾಡೆಮಿ...

More Articles Like This

error: Content is protected !!
Join WhatsApp Group