ಮೂಡಲಗಿ: ಕೆ ಎಚ್ ಸೋನವಾಲಕರ ಸರ್ಕಾರಿ ಪ್ರೌಢ ಶಾಲೆಯು 2021-22 ಸಾಲಿನ ಎಸ್.ಎಸ್.ಎಲ್.ಸಿ ಪರಿಕ್ಷೆಯಲ್ಲಿ ಉತ್ತಮ ಫಲಿತಾಂಶ ಮಾಡಿದೆ ಎಂದು ಶಾಲೆಯ ಮುಖ್ಯೋಪಾಧ್ಯಾಯ ಎಮ್ ಎಮ್ ದಬಾಡಿ ತಿಳಿಸಿದ್ದಾರೆ.
ಪರೀಕ್ಷೆ ಬರೆದ 291 ವಿದ್ಯಾರ್ಥಿಗಳಲ್ಲಿ 254 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ನಿರ್ಮಲಾ ಮೂರಚಟ್ಟಿ 620(ಪ್ರಥಮ), ಪ್ರಿಯಾಂಕ ಢವಳೇಶ್ವರ 617(ದ್ವಿತೀಯ), ನಾಗರತ್ನ ಸಂಗಾನಟ್ಟಿ 614 ಅಂಕ ಪಡೆದು (ತೃತೀಯ) ಸ್ಥಾನ ಪಡೆದುಕೊಂಡಿದ್ದಾರೆ.
ಸಾಧನೆಗೈದ ವಿದ್ಯಾರ್ಥಿಗಳನ್ನು ಮೂಡಲಗಿ ಬಿಇಒ ಅಜೀತ ಮನ್ನಿಕೇರಿ ಮತ್ತು ಶಾಲಾ ಎಸ್.ಡಿ.ಎಮ್.ಸಿ ಪದಾಧಿಕಾರಿಗಳು, ಶಿಕ್ಷಕ ವೃಂದದವರು ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.