ಚಾಮರಾಜನಗರ– ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ, ಬೆಂಗಳೂರು ಇವರ ವತಿಯಿಂದ ಸ್ವಾಮಿ ವಿವೇಕಾನಂದರ 161ನೇ ಜಯಂತ್ಯುತ್ಸವದ ಅಂಗವಾಗಿ 36 ಜಿಲ್ಲೆಗಳಲ್ಲಿ, ಚಾಮರಾಜನಗರ ಜಿಲ್ಲೆಯಿಂದ ಆಧ್ಯಾತ್ಮಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಅಂತಾರಾಷ್ಟ್ರೀಯ ಆಧ್ಯಾತ್ಮಿಕ ಸಂಸ್ಥೆ ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದ ಮುಖ್ಯ ಸಂಚಾಲಕಿ ರಾಜಯೋಗಿನಿ ಬ್ರಹ್ಮಾಕುಮಾರಿ ದಾನೇಶ್ವರೀಜೀಯವರು ಸ್ವಾಮಿ ವಿವೇಕಾನಂದ ರಾಷ್ಟ್ರ ರಾಜ್ಯ ಸದ್ಭಾವನಾ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಭಾನುವಾರ 28 ರಂದು ಸಂಜೆ 5ಗಂಟೆಗೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ವ್ಹಿ.ಬಿ.ಸಿ. ಹೈಸ್ಕೂಲ್ ಮೈದಾನದ ಸಿದ್ದೇಶ್ವರ ಬೃಹತ್ ವೇದಿಕೆಯಲ್ಲಿ ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ ಎಂದು ಓಂ ಶಾಂತಿ ನ್ಯೂಸ್ ಸರ್ವಿಸ್ ನ ಬಿಕೆ ಆರಾಧ್ಯ ತಿಳಿಸಿದ್ದಾರೆ