ಕರ್ನಾಟಕ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಹಾಗೂ ರಾಷ್ಟ್ರೀಯ ಮಹಾ ಪ್ರಧಾನ ಕಾರ್ಯದರ್ಶಿ ಮುರುಗೇಶ ಬಿ.ಶಿವಪೂಜಿಯವರ ನೇತೃತ್ವದ ನಿಯೋಗ ಇಂದು ಗೌರವಾನ್ವಿತ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರನ್ನು ಭೇಟಿಯಾಗಿ ಇಂಡಿಯನ್ ಜರ್ನಲಿಸ್ಟ್ ಯೂನಿಯನ್ ರಾಷ್ಟ್ರೀಯ ಕೌನ್ಸಿಲ್ ಸಭೆ ಉದ್ಘಾಟನಾ ಕಾರ್ಯಕ್ರಮಕ್ಕೆ ಆಹ್ವಾನಿಸಲಾಯಿತು.
ಸಮಾರಂಭವು ಫೆ.೧೯,೨೦ ಹಾಗೂ ೨೧ ರಂದು ಬಳ್ಳಾರಿಯಲ್ಲಿ ನಡೆಯಲಿದೆ
ಕರ್ನಾಟಕ ಪತ್ರಕರ್ತರ ಸಂಘದ ರಾಜ್ಯ ಉಪಾಧ್ಯಕ್ಷ ಮಂಗಳೂರು ಸುದೇಶಕುಮಾರ, ಬಳ್ಳಾರಿ ಜಿಲ್ಲಾಧ್ಯಕ್ಷ ಯಾಳ್ಪಿ ವಲಿಭಾಷಾ, ಜಿಲ್ಲಾ ಉಪಾಧ್ಯಕ್ಷ ಕೆ.ಬಜಾರಪ್ಪ, ಸೇರಿದಂತೆ ರಾಜ್ಯ ಪದಾಧಿಕಾರಿಗಳಾದ ದತ್ತಾತ್ರೇಯ ಹೆಗಡೆ , ರುಕ್ಮಾಂಗದ ಕೆ ಉಪಸ್ಥಿತರಿದ್ದರು.

