- Advertisement -
ಮೂಡಲಗಿ: ತಾಲ್ಲೂಕಿನ ಸುಣಧೋಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಗೋವಿಂದ ಯ. ಸಣ್ಣಕ್ಕಿ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಪದವೀಧರ ಪ್ರಾಥಮಿಕ ಶಿಕ್ಷಕರ (ಜಿಪಿಟಿ) ಸಂಘದ ಜಿಲ್ಲಾ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿರುವರು.
ಇತ್ತೀಚೆಗೆ ಚಿಕ್ಕೋಡಿಯಲ್ಲಿ ಜರುಗಿದ ಜಿಲ್ಲಾ ಸಂಘದ ಕಾರ್ಯಕಾರಿಣಿ ಸಭೆಯಲ್ಲಿ ಸಂಘದ ರಾಜ್ಯ ಖಜಾಂಚಿ ಶಂಕರ ಕೆ.ಎನ್. ಅವರ ನೇತೃತ್ವದಲ್ಲಿ ಸಣ್ಣಕ್ಕಿ ಅವರ ಆಯ್ಕೆ ಜರುಗಿತು. ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಚಿಕ್ಕೋಡಿ, ಅಥಣಿ, ರಾಯಬಾಗ, ಮೂಡಲಗಿ, ಗೋಕಾಕ, ಕಾಗವಾಡ, ನಿಪ್ಪಾಣಿ, ಹುಕ್ಕೇರಿ ತಾಲ್ಲೂಕುಗಳ ಪದಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.