spot_img
spot_img

ವಾಹನ ಸವಾರರಿಗೆ ಬೆಲೆ ಏರಿಕೆ ಬರೆ – ಈರಣ್ಣ ಕಡಾಡಿ

Must Read

- Advertisement -

ಮೂಡಲಗಿ:ಲೋಕಸಭಾ ಚುನಾವಣೆ ನಂತರ ರಾಜ್ಯದ ವಾಹನ ಸವಾರರಿಗೆ ಕಾಂಗ್ರೆಸ್ ಸರ್ಕಾರ ಪೆಟ್ರೋಲ್ 3 ರೂ, ಡೀಸೆಲ್ 3.50 ರೂ. ಏರಿಸುವ ಮೂಲಕ ಗ್ಯಾರಂಟಿ ಬರೆ ನೀಡಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಸರ್ಕಾರದ ನಿರ್ಧಾರವನ್ನು ಟೀಕಿಸಿದ್ದಾರೆ.

ಅಂತಾರಾಷ್ಟ್ರೀ ಯ ತೈಲಬೆಲೆ ಕಂಪನಿಗಳು ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಹೊಸ ಭಾರತೀಯ ತೈಲ ಬೆಲೆಗಳನ್ನು ಬಿಡುಗಡೆ ಮಾಡುತ್ತವೆ. ಇಲ್ಲಿ ಯಾವುದೇ ಏರಿಕೆಗಳು ಇಲ್ಲದಿದ್ದರೂ ಕೂಡ ರಾಜ್ಯ ಸರ್ಕಾರ ಏಕಾಏಕಿ ಬೆಲೆ ಏರಿಸುವ ಮೂಲಕ ವಾಹನ ಸವಾರರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದರು.

ಒಂದು ಕಡೆ ಗ್ಯಾರಂಟಿ ಯೋಜನೆಗಳನ್ನು ಘೋಷಿಸಿ ಇನ್ನೊಂದು ಕಡೆ ಗ್ರಾಹಕರ ಜೇಬಿಗೆ ಕತ್ತರಿ ಹಾಕೋ ಕೆಲಸವನ್ನು ಕರ್ನಾಟಕ ಸರ್ಕಾರ ಮಾಡಿದ್ದು ಇದು ಅತ್ಯಂತ ಅವೈಜ್ಞಾನಿಕವಾಗಿದೆ ರೊಚ್ಚಿಗೆದ್ದು ಜನ ಬೀದಿಗಿಳಿಯುವ ಮುಂಚೆ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆಯನ್ನು ತಕ್ಷಣ ಹಿಂಪಡೆಯಬೇಕೆಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಆಗ್ರಹಿಸಿದ್ದಾರೆ.

- Advertisement -
- Advertisement -

Latest News

ವಿದ್ಯಾರ್ಥಿ ಜೀವನದ ನಿಜವಾದ ಕೌಶಲ ಆಲಿಸುವಿಕೆ – ನಟ ಮಾಸ್ಟರ್ ಮಂಜುನಾಥ ಅಭಿಮತ

ವಿದ್ಯಾರ್ಥಿ ಜೀವನದಲ್ಲಿ ಕೇಳುವಿಕೆ ಹಾಗೂ ಅರ್ಥಮಾಡಿಕೊಳ್ಳುವಿಕೆಯು ನಿಜವಾದ ಕೌಶಲ್ಯವಾಗಿದೆ ಎಂದು ಕನ್ನಡದ ಪ್ರಸಿದ್ಧ ನಟ ಮಾಸ್ಟರ್ ಮಂಜುನಾಥ ಅಭಿಪ್ರಾಯಪಟ್ಟರು. ಬೆಂಗಳೂರಿನ ಕ್ರಿಸ್ತು ಜಯಂತಿ ಕಾಲೇಜಿನ ಸಮಾಜ ವಿಜ್ಞಾನ...
- Advertisement -

More Articles Like This

- Advertisement -
close
error: Content is protected !!
Join WhatsApp Group