ಮಾಧ್ಯಮಗಳ ಸಲಹೆಗೆ ಸರ್ಕಾರ ಸ್ಪಂದಿಸಲಿದೆ – ಶಾಲಿನಿ ರಜನೀಶ

Must Read

ಬೆಂಗಳೂರು: ರಾಜ್ಯದ ಶಕ್ತಿ ಕೇಂದ್ರವಾದ ವಿಧಾನ ಸೌಧದ ಮೂರನೇ ಮಹಡಿಯಲ್ಲಿ ಕರ್ನಾಟಕ ಸರ್ಕಾರದ ಮುಖ್ಯಕಾರ್ಯದರ್ಶಿಗಳಾದ ಶ್ರೀಮತಿ ಶಾಲಿನಿ ರಜನೀಶ ಅವರನ್ನು ಗುರುವಾರ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಸೌಹಾರ್ಧಯುತವಾಗಿ ಭೇಟಿ ಮಾಡಿದರು.

ಇದೇ ಸಂದರ್ಭದಲ್ಲಿ ಅವರನ್ನು ಗೌರವಿಸಲಾಯಿತು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಶಾಲಿನಿ ರಜನೀಶ ಅವರು, ಸರ್ಕಾರ ಹಾಗೂ ಮಾಧ್ಯಮ ಕ್ಷೇತ್ರ ಸೌಹಾರ್ದಯುತವಾಗಿ ಸೇರಿ ಕೆಲಸ ಮಾಡೋಣ. ತಮ್ಮ ಸಲಹೆಗೆ ಸರ್ಕಾರ ಸದಾ ಸಕಾರಾತ್ಮಕವಾಗಿ ಸ್ಪಂದಿಸಲಿದೆ ಎಂದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಉಪಾಧ್ಯಕ್ಷರಾದ ಭವಾನಿಸಿಂಗ ಠಾಕೂರ, ಬೀದರ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವಕುಮಾರ ಸ್ವಾಮಿ, ಸಂಘದ ಸದಸ್ಯರಾದ ಸುನಿಲಕುಮಾರ ಹೊನ್ನಾಳೆ ಈ ಸಂದರ್ಭದಲ್ಲಿ ಹಾಜರಿದ್ದರು.

Latest News

ಗಡಿಗಳನ್ನು ಮೀರಿ ಹರಿದ ಭಕ್ತಿ: ಓಮಾನ್‌ನಲ್ಲಿ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವದ ವೈಭವ  

     ಗಡಿಗಳನ್ನು ಮೀರಿ ಹರಿಯುವ ಭಕ್ತಿಯ ಹರಿವು ಮಸ್ಕಟ್‌ನಲ್ಲಿ ಮತ್ತೆ ಒಮ್ಮೆ ತಿರುಮಲೆಯ ಸಾನ್ನಿಧ್ಯವನ್ನು ಮೂಡಿಸಿತು. ದಾರ್ಸೈಟ್‌ನ ಶ್ರೀ ಕೃಷ್ಣ ಮಂದಿರದಲ್ಲಿ ನೆರವೇರಿದ ಶ್ರೀ...

More Articles Like This

error: Content is protected !!
Join WhatsApp Group