ಮೂಡಲಗಿ – ಪ್ರಾಥಮಿಕ ಹಾಗೂ ಮಾಧ್ಯಮಿಕ ಶಿಕ್ಷಣವನ್ನು ಸರ್ಕಾರಿ ಶಾಲೆಯಲ್ಲಿ ಪೂರೈಸಿದ ತಾಲೂಕಿನ ವಿದ್ಯಾರ್ಥಿನಿಗೆ ಪ್ರತಿಷ್ಠಿತ ವೈದ್ಯಕೀಯ ಸೀಟು ಒಲಿದು ಬಂದಿದೆ.
ತಾಲೂಕಿನ ಅರಳಿಮಟ್ಟಿ ಗ್ರಾಮದ ಪೂಜಾ ಗೌಡಪ್ಪಾ ಬಾಗೋಜಿ ಎಂಬ ವಿದ್ಯಾರ್ಥಿನಿ ತನ್ನ ಪ್ರಾಥಮಿಕ ಶಿಕ್ಷಣವನ್ನು ಅರಳಿಮಟ್ಟಿಯ ಸರ್ಕಾರಿ ಕನ್ನಡ ಮಾಧ್ಯಮ ಪ್ರಾಥಮಿಕ ಶಾಲೆಯಲ್ಲಿ ಕಲಿತು, ಪ್ರೌಢ ಶಿಕ್ಷಣವನ್ನು ಅವರಾದಿಯ ಸರ್ಕಾರಿ ಪ್ರೌಢ ಶಾಲೆಯಲ್ಲಿ ಮುಗಿಸಿದ ನಂತರ ಪದವಿ ಪೂರ್ವ ಶಿಕ್ಷಣವನ್ನು ರಬಕವಿಯ ಪದ್ಮಾವತಿ ಕಾಲೇಜು ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡಿ ಫಲಿತಾಂಶ ಪ್ರತಿಶತ 93% ಅಂಕ ಪಡೆದು, ವೈದ್ಯಕೀಯ ಶಿಕ್ಷಣದ ರಾಷ್ಟ್ರ ಮಟ್ಟದಲ್ಲಿ ನಡೆಸುವ ರಾಷ್ಟ್ರೀಯ ಅರ್ಹತಾ ಪರೀಕ್ಷೆಯಲ್ಲಿ ಎಐಆರ್- ಮೆಡಿಕಲ್- 27663 ಪಡೆದು, ಶುಲ್ಕವಿಲ್ಲದೆ ಕರ್ನಾಟಕ ವೈದ್ಯಕೀಯ ಮಂಡಳಿಯ ಉನ್ನತ ಕಾಲೇಜು ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ವ್ಯಾಸಂಗಕ್ಕಾಗಿ ಸೀಟು ಪಡೆದಿದ್ದಾಳೆ.
ಗ್ರಾಮೀಣ ಪ್ರದೇಶದ ಬಡ ರೈತ ಕುಟುಂಬದ ವಿದ್ಯಾರ್ಥಿನಿಯ ಸಾಧನೆಗೆ ಅರಳಿಮಟ್ಟಿ ಗ್ರಾಮದ ಶಿಕ್ಷಕ ವೃಂದ ಹಾಗೂ ಗ್ರಾಮದ ಮುಖಂಡರು ಮತ್ತು ಶಿಕ್ಷಣ ಪ್ರೇಮಿಗಳು ಮೆಚ್ಚುಗೆ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.