spot_img
spot_img

ಪದವಿಧರ ಚುನಾವಣಾ ಪ್ರಚಾರ ಸಭೆ

Must Read

ಸಿಂದಗಿ – ಭಾರತೀಯ ಜನತಾ ಪಕ್ಷದ ಇಬ್ಬರು ಅಭ್ಯರ್ಥಿಗಳು ವಿಧಾನ ಸಭೆಯ ಒಳಗೂ ಮತ್ತು ಹೊರಗೂ ಅವರ ನಡೆಸಿದ ಹೋರಾಟದ ಪ್ರತಿಫಲವಾಗಿ ಶಿಕ್ಷಕರ ಮತ್ತು ಪದವೀಧರರ ಹಲವಾರು ಸಮಸ್ಯೆಗಳು ಪರಿಹಾರವಾಗಿವೆ ಆ ಕಾರಣಕ್ಕೆ ಇವರ ಗೆಲುವು ನಿಶ್ಚಿತ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಭವಿಷ್ಯ ನುಡಿದರು.

ಪಟ್ಟಣದ ಮಾಂಗಲ್ಯ ಭವನದಲ್ಲಿ ಹಮ್ಮಿಕೊಂಡ ಭಾರತೀಯ ಜನತಾ ಪಾರ್ಟಿ ಸಿಂದಗಿ ಮತ್ತು ದೇವರ ಹಿಪ್ಪರಗಿ ಮತಕ್ಷೇತ್ರದ ವಾಯುವ್ಯ ಶಿಕ್ಷಕರ ಮತ್ತು ಪದವೀಧರ ಚುನಾವಣಾ ಘಟನಾಯಕರ/ಮತದಾರರ ಸಭೆಯನ್ನು ಉದ್ಘಾಟಿಸಿ ಮಾತನಾಡಿ, ಇಂದು ಸಮಾಜ ಎದುರುಸುತ್ತಿರುವ ಪ್ರತಿಯೊಂದು ಸಮಸ್ಯೆಯು ಶಿಕ್ಷಣದ ಮೂಲಕವೇ ಪರಿಹರಿಸಲು ಸಾಧ್ಯ ಆದರೆ ಇಲ್ಲಿಯವರೆಗೆ ಕಾಂಗ್ರೆಸ್ ಪಕ್ಷಕ್ಕೆ ಶಿಕ್ಷಣದ ಕಾಳಜಿ ಇರಲಿಲ್ಲ. ಕಾರಣ ಅಲ್ಪ ಸಂಖ್ಯಾತರು ಬುದ್ದಿವಂತರಾಗಬಾರದು ಅವರು ಮತಬ್ಯಾಂಕ್‍ಗಳಾಗಿ ಉಳಿಯಬೇಕು ಎನ್ನುವುದು ಅವರ ನಿಲುವಾಗಿತ್ತು. ಆದರೆ ಮಾಜಿ ಪ್ರಧಾನಿ ದಿ. ಅಟಲ್ ಬಿಹಾರಿ ವಾಜಪೇಯಿ ಅವರು ಶಿಕ್ಷಣ ಕ್ಷೇತ್ರಕ್ಕೆ ನೀಡಿದ ಕೊಡುಗೆ ಅಪಾರ. ಶಿಕ್ಷಣದ ಕೊರತೆಯನ್ನು ನಿವಾರಿಸಲು ಸರ್ವ ಶಿಕ್ಷಣ ಅಭಿಯಾನ ಕಾರ್ಯಕ್ರಮ ಪ್ರಾರಂಬಿಸಿದರು. ಮಕ್ಕಳು ಮುಂದಿನ ದಿನಮಾನಗಳಲ್ಲಿ ಜಗತ್ತಿನ ಸ್ಪರ್ಧೆಗೆ ಹೋಗಬೇಕು ಎನ್ನುವ ಉದ್ದೇಶದಿಂದ ಇನ್ನು 30 ವರ್ಷಗಳವರೆಗೆ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಇಂದಿನ ಪ್ರಧಾನಿ ನರೇಂದ್ರ ಮೋದಿಯವರು ಜಾರಿಗೆ ತಂದಿದ್ದಾರೆ ಅದನ್ನು ಮುಂದೆ ತೆಗೆದುಕೊಂಡು ಹೋಗುವ ಸಾಮರ್ಥ್ಯ ಈ ಎರಡು ಅಭ್ಯರ್ಥಿಗಳಲ್ಲಿದೆ ಇವರಿಗೆ ಪ್ರಥಮ ಪ್ರಾಶಸ್ತ್ಯ ನೀಡಿ ಎಂದರು.

ಸಂಸದ ರಮೇಶ ಜಿಗಜಿಣಗಿ ಮಾತನಾಡಿ, ಶಿಕ್ಷಣ ಮಾನವಕುಲದ ಮಂತ್ರವಾಗಿದ್ದು, ಶಿಕ್ಷಣದ ಮುಖಾಂತರ ಗುಣಮಟ್ಟದ ಜೀವನ ನಡೆಸಲು ಸಾಧ್ಯ ಕಾರಣ ಪ್ರಸ್ತುತ ಸಮಾಜದಲ್ಲಿ ಸಮಸ್ಯೆಗಳನ್ನು ಸೃಷ್ಠಿ ಮಾಡುವವರನ್ನು ಆಯ್ಕೆ ಮಾಡದೆ ಸಮಸ್ಯೆಗಳನ್ನು ನಿರ್ನಾಮ ಮಾಡುವ ಅಭ್ಯರ್ಥಿಗಳನ್ನು ಆಯ್ಕೆಮಾಡಬೇಕು. ಶಿಕ್ಷಕರ ಧ್ವನಿಯಾಗಿ, ಶೈಕ್ಷಣಿಕ ಕ್ಷೇತ್ರದಲ್ಲಿ ಜ್ಞಾನವನ್ನು ಹೊಂದಿದ ಅಭ್ಯರ್ಥಿ ಅರುಣ ಶಹಪೂರ ಹಾಗೂ ಸರಳ ಜೀವಿ ಹಣಮಂತ ನಿರಾಣಿ ಅವರಿಗೆ ಪ್ರಥಮ ಪ್ರಾಶಸ್ತ್ಯದ ಮತವನ್ನು ನೀಡಿ ಗೆಲ್ಲಿಸಬೇಕೆಂದು ವಿನಂತಿಸಿದರು.

ಪದವಿಧರ ಕ್ಷೇತ್ರದ ಅಭ್ಯರ್ಥಿ ಹಣಮಂತ ನಿರಾಣಿ ಮಾತನಾಡಿ, ಕಳೆದ ಬಾರಿ ನನ್ನನ್ನು ಹಾಗೂ ಸ್ನೇಹಿತ ಅರುಣ ಶಹಪೂರ ಅವರನ್ನು ಎರಡು ಬಾರಿ ವಿಧಾನ ಪರಿಷತ್ತಿಗೆ ಆಯ್ಕೆ ಮಾಡಿದ್ದಿರಿ. ಈ ಅವಧಿಯಲ್ಲಿ ನಾವಿಬ್ಬರು ಜೋಡೆತ್ತುಗಳಾಗಿ ಶಿಕ್ಷಕ ಮತ್ತು ಪದವೀಧರ ಕ್ಷೇತ್ರದಲ್ಲಿ ಅನೇಕ ಕಾರ್ಯಗಳನ್ನು ಮಾಡಿದ್ದೇವೆ. ಶಿಕ್ಷಣ ಸಂಸ್ಥೆ, ಶಿಕ್ಷಕರ ಮತ್ತು ಸರಕಾರಗಳ ಮದ್ಯ ಸೇತುವೆಯಾಗಿ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ನಾವಿಬ್ಬರೂ ಪ್ರಾಮಾಣಿಕವಾಗಿ ಕಾರ್ಯ ಮಾಡಿದ್ದೇವೆ. ಪದವೀಧರರು ಈ ನಾಡಿನ ಸಂಪನ್ಮೂಲ ಹಾಗಾಗಿ ಯುವಕರಿಗೆ ಮೊದಲನೆಯ ಆದ್ಯತೆ ನೀಡಬೇಕು. ಶಿಕ್ಷಣ ಸುಧಾರಣೆಯಾಗಬೇಕಾದರೆ ಬಾರತೀಯ ಜನತಾ ಪಕ್ಷದ ಅಭ್ಯರ್ಥಿಗಳಾದ ನನ್ನನ್ನು ಹಾಗೂ ಅರುಣ ಶಹಪೂರ ಅವರನ್ನು ಆಯ್ಕೆ ಮಾಡಿ ವಿಧಾನ ಪರಿಷತ್ತಿಗೆ ಕಳುಹಿಸಬೇಕು ಎಂದು ಮನವಿ ಮಾಡಿಕೊಂಡರು.

ಇದೇ ಸಂದರ್ಭದಲ್ಲಿ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಉಮೇಶ ಕತ್ತಿ, ವಿಪ ಸದಸ್ಯ ಲಕ್ಷ್ಮಣ ಸವದಿ, ಸಿಂದಗಿ ಶಾಸಕ ರಮೇಶ ಭೂಸನೂರ, ದೇವರ ಹಿಪ್ಪರಗಿ ಶಾಸಕ ಸೋಮನಗೌಡ ಪಾಟೀಲ, ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್ ರವಿಕುಮಾರ ಮಾತನಾಡಿದರು.

ಲಿಂಬೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಶೋಕ ಅಲ್ಲಾಪೂರ, ಪ್ರಕಾಶ ಅಕ್ಕಲಕೋಟ, ಚಂದ್ರಶೇಖರ ಕವಟಗಿ, ಶಿವಾನಂದ ಚಲವಾದಿ, ರಾಜಶೇಖರ ಶಹಾಪೂರ, ಮಲ್ಲಿಕಾರ್ಜುನ ಜೋಗುರ ಜಿಲ್ಲಾಧ್ಯಕ್ಷ ಆರ್.ಎಸ್.ಪಟೀಲ, ಮಂಡಲ ಅದ್ಯಕ್ಷ ಈರಣ್ಣ ರಾವೂರ ಸೇರಿದಂತೆ ಅನೇಕರು ವೇದಿಕೆ ಮೇಲಿದ್ದರು.

ಜಿಲ್ಲಾಧ್ಯಕ್ಷ ಆರ್.ಎಸ್.ಪಾಟೀಲ ಕೂಚಬಾಳ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಂಡಲ ಅಧ್ಯಕ್ಷ ಈರಣ್ಣ ರಾವೂರ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಗುರು ತಳವಾರ ವಂದಿಸಿದರು. ಶಿವಕುಮಾರ ಬಿರಾದಾರ, ಮಲ್ಲು ಪೂಜಾರಿ, ಶಿವರೂದ್ರ ಬಾಗಲಕೋಟ ಸೇರಿದಂತೆ ಶಿಕ್ಷಕರು, ಪದವೀಧರರು ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

- Advertisement -
- Advertisement -

Latest News

ನಿಪ್ಪಾಣಿ ನಗರಸಭೆಯ ಮೇಲಿನ ಭಗವಾಧ್ವಜ ತೆರವುಗೊಳಿಸಲು ಗಡಾದ ಆಗ್ರಹ

ಮೂಡಲಗಿ - ಸುಮಾರು ೩೧ ವರ್ಷಗಳಿಂದ ಬೆಳಗಾವಿಯ ನಿಪ್ಪಾಣಿ ನಗರಸಭೆಯ ಕಟ್ಟಡದ ಮೇಲೆ ಅನಧಿಕೃತವಾಗಿ ಹಾರಾಡುತ್ತಿರುವ ಭಗವಾ ಧ್ವಜವನ್ನು ತೆರವುಗೊಳಿಸಬೇಕು ಎಂದು ಮನವಿ ಸಲ್ಲಿಸಿ ಒಂದು...
- Advertisement -

More Articles Like This

- Advertisement -
close
error: Content is protected !!