ಬಾಲ್ಯ ವಿವಾಹ ತಡೆಗಟ್ಟಲು ಗ್ರಾಮ ಪಂಚಾಯತಿಗಳು ಕ್ರಮಗೊಳ್ಳಬೇಕು-ರಾಹುಲ್ ಶಿಂಧೆ

Must Read

ಮೂಡಲಗಿ:-ಬಾಲ್ಯ ವಿವಾಹ ತಡೆಗೆ ಗ್ರಾಮ ಪಂಚಾಯತಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು. ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಬೆಳಗಾವಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ರಾಹುಲ ಶಿಂಧೆ ತಿಳಿಸಿದರು

ತಾಲೂಕಿನ ಹುಣಶ್ಯಾಳ ಪಿಜಿ ಗ್ರಾಮ ಪಂಚಾಯತಿ ಕಾರ್ಯಾಲಯದಲ್ಲಿ ಅವರು ಗ್ರಾಮ ಪಂಚಾಯತಿ ಅಧ್ಯಕ್ಷ ಉಪಾಧ್ಯಕ್ಷರು ಮತ್ತು ಸದಸ್ಯರೊಂದಿಗೆ ಸಂವಾದ ನಡೆಸಿದರು.

ಗ್ರಂಥಾಲಯ, ಹಳ್ಳಿ ಸಂತೆ, ಸರ್ಕಾರಿ ಶಾಲೆ ಹಾಗೂ ಪ್ರವಾಹ ಪೀಡಿತ ಪ್ರದೇಶಗಳನ್ನು ಅವರು ಪರಿಶೀಲಿದರು.
ಗೋಕಾಕ ತಾಲೂಕಿನ ಬಳೋಬಾಳ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಬರುವ ಪ್ರವಾಹ ಪೀಡಿತ ಪ್ರದೇಶಕ್ಕೆ ಹಾಗೂ ತಾಲೂಕಿನ ವಡೇರಹಟ್ಟಿ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಬರುವ ವಸತಿ ನಿಲಯಕ್ಕೆ ಮತ್ತು ಅಂಗನವಾಡಿ ಕೇಂದ್ರಕ್ಕೆ ಮೂಡಲಗಿ ತಾಲೂಕಿನ ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಎಫ್.ಜಿ.ಚಿನನ್ನವರ,ಗೋಕಾಕ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಪರಶುರಾಮ ಘಸ್ತೆ ಭೇಟಿ ನೀಡಿದರು.

ಹುಣಶ್ಯಾಳ ಪಿಜಿ ಸರ್ಕಾರಿ ಶಾಲೆಗೂ ಮೂಡಲಗಿ ಬಿಇಒ ಅಜಿತ ಮನ್ನಿಕೇರಿ ಹಾಗೂ ತಾಲೂಕಾಧಿಕಾರಿಗಳು ಭೇಟಿ ನೀಡಿ ಶಿಕ್ಷಣದ ಪ್ರಗತಿಯ ಬಗ್ಗೆ ಪರಿಶೀಲಿಸಿದರು.
ಸಿಬ್ಬಂದಿಗಳು,ಗ್ರಾಮ ಪಂಚಾಯತ ಸದಸ್ಯರು ಮತ್ತು ಸಾರ್ವಜನಿಕರು ಇದ್ದರು.

Latest News

ಮಕ್ಕಳಲ್ಲಿ ಸಂಸ್ಕಾರದ ಗುಣಗಳು ಕಡಿಮೆಯಾಗುತ್ತಿರುವುದು ವಿಷಾದನೀಯ – ಕಲಶೆಟ್ಟಿ

ಸಿಂದಗಿ-ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಮಾನವೀಯ ಸಂಬಂಧಗಳನ್ನು ಬೆಳೆಸಿಕೊಳ್ಳಬೇಕು ಇಂದು ಸಂಸ್ಕಾರದ ಗುಣಗಳು ಮಕ್ಕಳಲ್ಲಿ ಕಡಿಮೆಯಾಗುತ್ತಿರುವುದು ವಿಷಾದನೀಯ ಎಂದು ನಿವೃತ್ತ ಉಪನ್ಯಾಸಕ ಎಸ್.ಎಸ್.ಕಲಶೆಟ್ಟಿ ಹೇಳಿದರು.ಅವರು ಪಟ್ಟಣದ ಶ್ರೀ ಸಾತವೀರೇಶ್ವರ...

More Articles Like This

error: Content is protected !!
Join WhatsApp Group