ಬೆಂಗಳೂರು- ಕರ್ನಾಟಕ ಸರ್ಕಾರ ಕನ್ನಡ ಮತ್ತು ಸಂಸ್ಕತಿ ಇಲಾಖೆ ಹಾಗೂ ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದ ಸಹಯೋಗದಲ್ಲಿ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯನ್ನು ನಗರದ ಜೆಸಿ ರಸ್ತೆ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಲಾಗಿತ್ತು.
ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕತಿ ಇಲಾಖೆ ಸಚಿವರಾದ ಶಿವರಾಜ ಎಸ್ ತಂಗಡಗಿರವರು ಸಮಾರಂಭ ವನ್ನು ಉದ್ಘಾಟಿಸಿದರು. ಶ್ರೀ ಭವಾನಿ ಪೀಠ ಗೋಸಾಯಿ ಮಹಾಸಂಸ್ಥಾನ ಮಠದ ಶ್ರೀ ಮಂಜುನಾಥ ಭಾರತಿ ಸ್ವಾಮೀಜಿ ದಿವ್ಯ ಸಾನ್ನಿಧ್ಯ ದಲ್ಲಿ ಶಾಸಕ ಉದಯ ಬಿ ಗರುಡಾಚಾರ್ ಅಧ್ಯಕ್ಷತೆ ವಹಿಸಿದ್ದರು.
ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಮಾರುತಿರಾವ್ ಮುಳೆ, ಕರ್ನಾಟಕ ಕ್ಷತ್ರಿಯ ಮರಾಠ ಪರಿಷತ್ ರಾಜ್ಯಧ್ಯಕ್ಷ ಎಸ್ ಸುರೇಶ್‌ರಾವ್ ಸಾಠೆ ಮತ್ತು ಕರ್ನಾಟಕ ಮರಾಠ ವೆಲ್‌ಫೇರ್ ಅಸೋಸಿಯೇಷನ್ ಅಧ್ಯಕ್ಷ ಎಸ್ ಮನೋಜ್‌ಕುಮಾರ್ ರಣ್ಣೋರೆ ವಿಶೇಷ ಆಹ್ವಾನಿತರಾಗಿ ಭಾಗವಹಿಸಿದ್ದರು. ಸಾಹಿತಿ ಜಗನಾಥರಾವ್ ಬಹುಳೆರವರು ಶಿವಾಜಿ ಮಹಾರಾಜರ ಕುರಿತು ಉಪನ್ಯಾಸ ನೀಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕಿ ಡಾ ಧರಣಿ ದೇವಿ ಮಾಲಗತ್ತಿ ಸ್ವಾಗತ ಕೋರಿದರು.
ಇದೇ ಸಂದರ್ಭದಲ್ಲಿ ಕರ್ನಾಟಕ ಮರಾಠ ಸಮುದಾಯದ ಅಭಿವೃದ್ಧಿ ನಿಗಮದ ಹೊಸ ಯೋಜನೆಗಳ ಚಾಲನೆ ನೀಡಲಾಯಿತು ಎಂದು ಕರ್ನಾಟಕ ಮರಾಠ ಸಮುದಾಯದ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಡಾ. ಪ್ರಕಾಶ ಆರ್ ಪಾಗೋಜಿ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಕಾರ್ಯಕ್ರಮದ ಆರಂಭದಲ್ಲಿ ಶಿವಾಜಿ ಮಹಾರಾಜರ ಬಗ್ಗೆ ಗೀತೆ ಹಾಗೂ ರಾಜಶ್ರೀ ಶಾಹುಮಹಾರಾಜರ ಕುರಿತು ಸಾಕ್ಷ್ಯ ಚಿತ್ರ ಪ್ರದರ್ಶಿಸಲಾಯಿತು ಮತ್ತು ವಿವಿಧ ಜಾನಪದ ಕಲಾ ತಂಡಗಳಿಂದ ಜಾನಪದ ಕಲಾ ಪ್ರದರ್ಶನ, ಹೊಸಪೇಟೆಯ ಮಾರುತಿರಾವ್ ಮತ್ತು ತಂಡದಿಂದ ಸುಗಮಸಂಗೀತ ಏರ್ಪಡಿಸಲಾಗಿತ್ತು.