ಬೈಲಹೊಂಗಲ: ಹಾವೇರಿಯಲ್ಲಿ ಜನವರಿಯಲ್ಲಿ ನಡೆಯಲಿರುವ ೮೬ ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿಯಾಗಿ ಆಯೋಜಿಸಿರುವ ಕನ್ನಡ ಜ್ಯೋತಿಯನ್ನು ಹೊತ್ತ ಕನ್ನಡ ರಥವನ್ನು ಪಟ್ಟಣದ ಚನ್ನಮ್ಮ ವೃತ್ತದಲ್ಲಿ ಅದ್ಧೂರಿಯಾಗಿ ಸ್ವಾಗತಿಸಲಾಯಿತು.
ನಗರದ ಮೂರು ಸಾವಿರ ಮಠದ ಪ್ರಭು ನೀಲಕಂಠ ಮಹಾಸ್ವಾಮಿಗಳ ಸಾನಿಧ್ಯದಲ್ಲಿ ಬೈಲಹೊಂಗಲ ಶಾಸಕರಾದ ಮಹಾಂತೇಶ ಕೌಜಲಗಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಮಂಗಲಾ ಮೆಟಗುಡ್, ಪುರಸಭೆ ಅಧ್ಯಕ್ಷರಾದ ರಾಜು ಜನ್ಮಟ್ಟಿ ಅವರು ಕನ್ನಡ ರಥವನ್ನು ಬರಮಾಡಿಕೊಂಡರು. ನಾಡಿನಾದ್ಯಂತ ಸಂಚರಿಸಿ ಕನ್ನಡದ ಕಂಪನ್ನು ಎಲ್ಲೆಡೆ ಪಸರಿಸುವ ಕಾರ್ಯಕ್ಕೆ ಬೈಲಹೊಂಗಲ ನಾಡಿನ ಸಮಸ್ತ ಕನ್ನಡಿಗರ ಪರವಾಗಿ ಶುಭ ಕೋರಲಾಯಿತು.
ಕುಂಭಮೇಳ, ವಾದ್ಯ, ಜಾಂಜ ಮೇಳದೊಂದಿಗೆ ವೀರ ರಾಣಿ ಚನ್ಮಮ್ಮ ಸಮಾಧಿಯವರೆಗೆ ಜಾಥಾ ನಡೆಯಿತು.
ಕೇಂದ್ರ ಕಸಾಪ ಸಂಘ ಸಂಸ್ಥೆಗಳ ಪ್ರತಿನಿಧಿ ನಬೀಸಾಬ ಕುಷ್ಟಗಿ, ಗ್ರೇಡ್-2 ತಹಶೀಲ್ದಾರರಾದ ಜೆ.ಸಿ ಅಷ್ಟಗಿಮಠ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಎ.ಎನ್.ಪ್ಯಾಟಿ, ಸಮನ್ವಯಾಧಿಕಾರಿಗಳಾದ ಬಿ.ಎನ್.ಕಸಾಳೆ, ಸಿಡಿಪಿಒ ಕಮಲಾ ಬಸರಗಿ, ಪುರಸಭೆ ಮುಖ್ಯಾಧಿಕಾರಿ ವೆಂಕಟೇಶ ನಾಗನೂರ, ಸದಸ್ಯರಾದ ಗುರು ಮೆಟಗುಡ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ವಿದ್ಯಾವತಿ ಭಜಂತ್ರಿ, ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಜಂಟಿ ಕಾರ್ಯದರ್ಶಿಗಳಾದ ಶಿವಾನಂದ ಕುಡಸೋಮಣ್ಣವರ, ಕರ್ನಾಟಕ ರಾಜ್ಯ ಪ್ರಾಥಮಿಕ ಶಿಕ್ಷಕರ ಸಂಘದ ಉಪಾಧ್ಯಕ್ಷರಾದ ಎಸ್.ಡಿ.ಗಂಗಣ್ಣವರ, ಕನ್ನಡ ಸಾಹಿತ್ಯ ಪರಿಷತ್ತಿನ ಮಾರ್ಗದರ್ಶನ ಮಂಡಳಿ ಸದಸ್ಯರಾದ ಶಿವರಂಜನ ಬೋಳನ್ನವರ, ಮಹಾಂತೇಶ ತುರಮರಿ, ಮೋಹನ ಬಸನಗೌಡ ಪಾಟೀಲ, ಕಸಾಪ ತಾಲೂಕಾಧ್ಯಕ್ಷರಾದ ಎನ್.ಆರ್.ಠಕ್ಕಾಯಿ, ಜಿಲ್ಲಾ ಕಾರ್ಯದರ್ಶಿ ಎಂ.ವೈ.ಮೆಣಸಿನಕಾಯಿ, ಕಾರ್ಯಕಾರಿ ಸಮಿತಿ ಸದಸ್ಯರಾದ ಮಲ್ಲಿಕಾರ್ಜುನ ಕೋಳಿ, ಕೋಶಾಧ್ಯಕ್ಷರಾದ ಮಹೇಶ ಕೋಟಗಿ, ಕಾರ್ಯದರ್ಶಿಗಳಾದ ಮಂಜುಳಾ ಶೆಟ್ಟರ, ಸದಸ್ಯರಾದ ದುಂಡೇಶ ಗರಗದ, ಲಕ್ಷ್ಮೀ ಮುಗಡ್ಲಿಮಠ, ಪ್ರೇಮಕ್ಕ ಅಂಗಡಿ, ಸಂತೋಷ ಹಡಪದ, ಅನಿಲ ರಾಜಣ್ಣವರ, ರಾಮಕೃಷ್ಣ ಹೋಟಕರ, ಕಂದಾಯ ನಿರೀಕ್ಷಕರಾದ ಸುರೇಶ ಮಾಳಗಿ, ರಾಜು ಹಕ್ಕಿ, ಯಲ್ಲಪ್ಪ ಭಂಗಿ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.
ತಹಶೀಲ್ದಾರ ಕಚೇರಿ, ಪುರಸಭೆ, ತಾಲೂಕಾ ಪಂಚಾಯತಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಶಿಕ್ಷಣ ಇಲಾಖೆಯ ಸಿಬ್ಬಂದಿ, ಶಿಕ್ಷಕರು, ಸಂಘ ಸಂಸ್ಥೆಯ ಪ್ರತಿನಿಧಿಗಳು, ಸಾಹಿತಿಗಳು, ಕಲಾವಿದರು, ಕನ್ನಡ ಪ್ರೇಮಿಗಳು, ಆಶಾ ಕಾರ್ಯಕರ್ತೆಯರು, ಸ್ತ್ರೀ ಶಕ್ತಿ ಸಂಘದ ಸದಸ್ಯರು, ಮಾಧ್ಯಮ ಪ್ರತಿನಿಧಿಗಳು ಹಾಗೂ ಇನ್ನಿತರ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಪಾಲ್ಗೊಂಡರು.