spot_img
spot_img

ಸಮಗ್ರ ಬುಡಕಟ್ಟು ಅಭಿವೃದ್ಧಿಗೆ ಕೇಂದ್ರದಿಂದ ಅನುದಾನ

Must Read

- Advertisement -

ಮೂಡಲಗಿ: ಕರ್ನಾಟಕದಲ್ಲಿ ಸಮಗ್ರ ಬುಡಕಟ್ಟು ಅಭಿವೃದ್ಧಿ ಯೋಜನೆಗಾಗಿ ಕಳೆದ ಮೂರು ವರ್ಷಗಳಲ್ಲಿ ಕೇಂದ್ರ ಸರ್ಕಾರ ರೂ.3161.82 ಲಕ್ಷ ರೂ ಅನುದಾನ ಬಿಡುಗಡೆಯಾಗಿದ್ದು, ಅದರಲ್ಲಿ ರೂ. 2445.28 ಲಕ್ಷ ರೂ ಅನುದಾನ ಬಳಕೆಯಾಗಿದ್ದು, ರೂ. 716.54 ಲಕ್ಷ ರೂ ವೆಚ್ಚದ ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದು ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವ ಅರ್ಜುನ ಮುಂಡಾ ಅವರು ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.

ನವದೆಹಲಿ ಸಂಸತ್ತಿನ ಚಳಿಗಾಲ ಅಧಿವೇಶನದಲ್ಲಿ ರಾಜ್ಯಸಭೆ ಸದಸ್ಯ ಈರಣ್ಣ ಕಡಾಡಿ ಅವರು ಕರ್ನಾಟಕದಲ್ಲಿ ಕಳೆದ ಮೂರು ವರ್ಷಗಳಲ್ಲಿ ಸಮಗ್ರ ಬುಡಕಟ್ಟು ಅಭಿವೃದ್ಧಿ ಯೋಜನೆಯ ಕುರಿತು ಕೇಳಿದ ಪ್ರಶ್ನೆಗೆ ಸಚಿವ ಅರ್ಜುನ ಮುಂಡಾ ಲಿಖಿತವಾಗಿ ಉತ್ತರಿಸಿ, ಕರ್ನಾಟಕ ಸರ್ಕಾರವು ಸೂಚಿಸಿದಂತೆ ಮೈಸೂರು, ಕೊಡಗು, ಚಿಕ್ಕಮಗಳೂರು, ದಕ್ಷಿಣ ಕನ್ನಡ ಮತ್ತು ಉಡುಪಿ ಐದು ಜಿಲ್ಲೆಗಳಲ್ಲಿ ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆಗಾಗಿ ಬುಡಕಟ್ಟು ವ್ಯವಹಾರಗಳ ಸಚಿವಾಲಯವು ಕಳೆದ ಮೂರು ವರ್ಷಗಳಲ್ಲಿ ಸಿ.ಸಿ. ರಸ್ತೆಗಳು ಮತ್ತು ಚರಂಡಿ, ಸಮುದಾಯ ಭವನ, ಡೈರಿ ಅಭಿವೃದ್ಧಿ ಯೋಜನೆಗಳು, ಹಸು ಸಾಕಣೆ, ಸರಕು ವಾಹನ, ಹಂದಿ ಸಾಕಾಣಿಕೆ, ಕುರಿ/ಮೇಕೆ ಸಾಕಾಣಿಕೆ ಹೀಗೆ ಹಲವಾರು ಕಾರ್ಯಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಉತ್ತರಿಸಿದ್ದಾರೆ.

- Advertisement -
- Advertisement -

Latest News

ಇದು ಇಂದಿನ ಹಾಸ್ಟೆಲ್ ಹುಡುಗ ಹುಡುಗಿಯರಿಗೆ ನಾವೆಲ್ಲ ಹೇಳಬೇಕಾದ ಖಾಸ್ ಬಾತ್

ಸರ್... ಓ ಸರ್...ಕಾಂಬಳೆ ಸರ್  ... ಸರ್ ನಮಸ್ಕಾರ್ರಿ ಆರಾಮ ಅದೀರಿ?? ನಾ ಯಾರ್ ಹೇಳ್ರಿ ಅನ್ನುತ್ತಿದ್ದಂತೆಯೇ ನಿವೃತ್ತಿ ಹೊಂದಿ ಐದಾರು ವರ್ಷ ಆಗಿದ್ದ ಬಿಸಿಎಮ್...
- Advertisement -

More Articles Like This

- Advertisement -
close
error: Content is protected !!
Join WhatsApp Group