- Advertisement -
ಸಿಂದಗಿ: ಸರಕಾರ ಆರ್ಥಿಕ ಅವಲಂಬನೆ ಹೆಚ್ಚಾಗಿರೋಕೆ ಮಾಜಿ ಮುಖ್ಯಮಂತ್ರಿ ಎಸ್.ಎಮ್.ಕೃಷ್ಣಾ ಅವರ ದೂರ ದೃಷ್ಟಿಯೇ ಕಾರಣ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.
ಪಟ್ಟಣದ ಬ್ಲಾಕ್ ಕಾಂಗ್ರೆಸ್ ಕಾರ್ಯಾಲಯದಲ್ಲಿ ಮಾಜಿ ಸಿಎಂ, ಮಾಜಿ ಕೇಂದ್ರ ಸಚಿ ಎಸ್.ಎಮ್.ಕೃಷ್ಣ ನಿಧನದ ಹಿನ್ನೆಲೆಯಲ್ಲಿ ಅವರಿಗೆ ಗೌರವ ನಮನ ಸಲ್ಲಿಸಿ ಮಾತನಾಡಿದ ಅವರು, ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಆಡಳಿತಾತ್ಮಕ ಹುದ್ದೆ ಅಲಂಕರಿಸಿದ್ದ ನಮ್ಮ ಕನ್ನಡದ ಹೆಮ್ಮೆಯ ಕೃಷ್ಣಾಜಿ ಅವರ ನಿಧನದ ಸುದ್ದಿ ಕೇಳಿ ಅತ್ಯಂತ ದುಃಖ ತಂದಿದೆ ಎಂದು ತೀವ್ರ ಸಂತಾಪ ಸೂಚಿಸಿದರು.
ಈ ವೇಳೆ ಮಾಜಿ ಶಾಸಕ ಶರಣಪ್ಪ ಸುಣಗಾರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಶ ಪೂಜಾರಿ, ಪುರಸಭೆ ಸದಸ್ಯ ಹಾಸೀಂಪಿರ ಆಳಂದ, ವರ್ಷಾ ಪಾಟೀಲ, ಶಾರದಾ ಬೆಟಗೇರಿ, ಸೇರಿದಂತೆ ಕಾಂಗ್ರೆಸ್ ಪಕ್ಷದ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಸಂತಾಪ ಸಭೆಯಲ್ಲಿ ಭಾಗವಹಿಸಿದ್ದರು.