ಕರ್ನಾಟಕ ರಾಜ್ಯ ಬರಹಗಾರರ ಸಂಘವು ಒಂದು ನೋಂದಾಯಿತ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಂಘಟನೆಯಾಗಿದ್ದು, ಕೇಂದ್ರ ಕಛೇರಿ ಹೂವಿನ ಹಡಗಲಿಯಾಗಿದ್ದು ರಾಜ್ಯಾದ್ಯಂತ ಎಲ್ಲಾ ಜಿಲ್ಲೆಗಳಲ್ಲೂ ಜಿಲ್ಲಾ ಘಟಕಗಳನ್ನು, ತಾಲ್ಲೂಕು ಘಟಕಗಳನ್ನು ಹೊಂದಿದೆ. ಅಲ್ಲದೇ ಹೊರ ರಾಜ್ಯದಲ್ಲೂ ತನ್ನ ಘಟಕಗಳನ್ನು ವಿಸ್ತರಿಸಿಕೊಂಡು ಈಗಾಗಲೇ ಹಲವಾರು ಸಾಹಿತ್ಯ ಕಾರ್ಯಕ್ರಮ ನಡೆಸಿಕೊಂಡು ಬಂದಿದೆ.
.ಹಾಸನ ಜಿಲ್ಲಾ ಘಟಕವು ಸುಂದರೇಶ ಡಿ ಉಡುವಾರೆ ಅವರ ಅಧ್ಯಕ್ಷತೆಯಲ್ಲಿ ರಾಜ್ಯದಲ್ಲೆ ಅತ್ಯುತ್ತಮವಾದ ನಾಡು ನುಡಿ ಕಲೆ ಸಾಹಿತ್ಯ ಕವಿ ಕಾವ್ಯ ಗಾಯನ ಕಲಾಕುಂಚ ವಿಭಿನ್ನ ಕಾರ್ಯಕ್ರಮಗಳನ್ನು ಹಾಗು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಹಲವಾ ರಾಜ್ಯ ಹಾಗೂ ಜಿಲ್ಲಾ ಪ್ರಶಸ್ತಿಗಳನ್ನು ನೀಡುತ್ತಾ ಎಲೆ ಮರೆ ಕಾಯಿಯಂತಿರುವ ನೂರಾರು ಪ್ರತಿಭೆಗಳನ್ನು ಗುರುತಿಸಿ ವೇದಿಕೆ ಕಲ್ಪಿಸುತ್ತಾ ಬಂದಿದೆ.
ಪ್ರಸ್ತುತ ಗ್ಯಾರಂಟಿ ರಾಮಣ್ಣ ಅವರನ್ನು ಕರ್ನಾಟಕ ರಾಜ್ಯ ಬರಹಗಾರರ ಸಂಘ ಹಾಸನ ಜಿಲ್ಲಾ ಘಟಕದ ಕೋಶಾಧ್ಯಕ್ಷರಾಗಿ ನೇಮಿಸಿ ರಾಜ್ಯಾಧ್ಯಕ್ಷರಾದ ಮಧುನಾಯ್ಕ ಲಂಬಾಣಿ ಅವರು ಅನುಮೋದನೆ ಮಾಡಿದ್ದಾರೆ.
ಗ್ಯಾರಂಟಿ ರಾಮಣ್ಣನವರು ಲೇಖಕರು,ಜಾನಪದ ಕಲಾವಿದರು, ರಂಗಭೂಮಿ ಕಲಾವಿದರು ಹಾಗು ಬೀದಿ ನಾಟಕದ ನಿರ್ದೇಶಕರಾಗಿ. ಕಲಾ ಸರಸ್ವತಿ ಹಾಗು ಕನ್ನಡ ತಾಯಿಯ ಸೇವೆಯನ್ನು ನಿಸ್ವಾರ್ಥದಿಂದ ಮಾಡುತ್ತಿದ್ದಾರೆ.

