ಜಯಶ್ರೀ ಅಬ್ಬಿಗೇರಿಗೆ ಗುರುಕುಲ ತಿಲಕ ಪ್ರಶಸ್ತಿ

Must Read

ಜೆಡಿಎಸ್ ಗೆ ಗೆಲುವು ಕುಮಾರಸ್ವಾಮಿಗೆ ಬೇಕಿಲ್ಲ, ಬಿಜೆಪಿ ಗೆಲ್ಲಿಸಲು ಆಸಕ್ತಿ ಹೊಂದಿದ್ದಾರೆ – ಎಸ್ ಎಂ ಪಾಟೀಲ

ಸಿಂದಗಿ: ಈ ಕ್ಷೇತ್ರದ ಅಭಿವೃದ್ಧಿಗೆ ದಿ.ಮನಗೂಳಿ ಅವರು ತಮ್ಮ ಆಯುಷ್ಯವನ್ನೆ ಮುಡಿಪಾಗಿಟ್ಟು ದುಡಿದು ಅಗಲಿ ಹೋಗಿದ್ದಾರೆ ಅವರ ಮಗನಿಗೆ ಕೂಲಿ ಸಿಗಬೇಕು ಆದರೆ ಜೆಡಿಎಸ್ ಪಕ್ಷದ...

ಕಾಂಗ್ರೆಸ್ ಸರ್ಕಾರದ ಕೆಲಸಗಳು ಅದರ ಗೆಲುವಿಗೆ ಕಾರಣವಾಗುತ್ತದೆ – ಸುಜಾತಾ ಕಳ್ಳಿಮನಿ

ಸಿಂದಗಿ: ಸಿದ್ದರಾಮಯ್ಯನವರು ಐದು ವರ್ಷದ ಅಧಿಕಾರದ ಅವಧಿಯಲ್ಲಿ ಈ ಕರುನಾಡಿಗೆ ಬಡವರ ಪರ, ರೈತರ ಪರ ಜಾರಿಗೆ ತಂದ ಯೋಜನೆಗಳು ಈ ಸಿಂದಗಿ ಉಪಚುನಾವಣೆಯಲ್ಲಿ ಕಾಂಗ್ರೆಸ್...

ಬಿಜೆಪಿ ಅಲೆಮಾರಿ ಜನಾಂಗಕ್ಕೆ ಸುಳ್ಳು ಹೇಳಿ ಮತ ಪಡೆಯುತ್ತಿದೆ – ಮೇಘರಾಜ್ ಆರೋಪ

ಸಿಂದಗಿ: ಬಿಜೆಪಿಯ ಸರ್ಕಾರ  ಅಧಿಕಾರಕ್ಕೆ ಬಂದು ಎರಡು ವರ್ಷವಾದರೂ  ಅಲೆಮಾರಿ, ಅರೆ ಅಲೆಮಾರಿ ಸಮುದಾಯದ ಆಶ್ರಯ ಮನೆಗಳನ್ನು  ಮಂಜೂರು ಮಾಡದೆ ಕೇವಲ ಕಾಗದ ಪತ್ರದಲ್ಲಿ ಮಂಜೂರು...

ಬೆಳಗಾವಿ – ಕಸ್ತೂರಿ ಸಿರಿಗನ್ನಡ ವೇದಿಕೆ(ರಿ) ಬೆಳಗಾವಿ ವತಿಯಿಂದ ಅಂತಾರಾಷ್ಟ್ರೀಯ ಶಿಕ್ಷಕ ದಿನಾಚರಣೆಯ ಅಂಗವಾಗಿ 05 ಅಕ್ಟೋಬರ್ 2021ರಂದು ಶಿಕ್ಷಕರಿಗೆ ‘ಗುರುಕುಲ ತಿಲಕ ಪ್ರಶಸ್ತಿ.’ಯನ್ನು ಪ್ರದಾನ ಮಾಡಲಾಗುತ್ತಿದೆ.

ಈ ಪ್ರಶಸ್ತಿಗೆ ಹಿರೇಬಾಗೇವಾಡಿಯ ಸರಕಾರಿ ಪದವಿ ಪೂರ್ವ ಕಾಲೇಜಿನ ಇಂಗ್ಲೀಷ್ ಉಪನ್ಯಾಸಕಿ ಜಯಶ್ರೀ ಅಬ್ಬಿಗೇರಿ ಭಾಜನರಾಗಿದ್ದಾರೆ.

ಉಪನ್ಯಾಸಕಿಯಾಗಿ ವಿದ್ಯಾರ್ಥಿಗಳ ವ್ಯಕ್ತಿತ್ವ ನಿರ್ಮಾಣದಲ್ಲಿ ಬಹು ಮುಖ್ಯ ಪಾತ್ರವಹಿಸಿರುವ ಅವರು ಜಗತ್ತಿಗೆ ಅನಿವಾರ್ಯವಾದ ಇಂಗ್ಲೀಷ್‍ನ್ನು ಗ್ರಾಮೀಣ ಮಕ್ಕಳಿಗೆ ಕಲಿಸಿ ಅವರ ಬಾಳು ಬೆಳಗಲು ಶ್ರಮಿಸುತ್ತಿದ್ದಾರೆ. ಸ್ವತಃ ಉತ್ತಮ ವಾಗ್ಮಿಯಾಗಿ, ನಿರೂಪಕಿಯಾಗಿ, ಹಾಡುಗಾರ್ತಿಯಾಗಿ ಅತ್ಯುತ್ತಮ ವಾಕ್ಪಟುಗಳನ್ನು ಸಂಗೀತಗಾರರನ್ನು ನಿರೂಪಕರನ್ನು ಸಮಾಜಕ್ಕೆ ಕೊಡುಗೆಯಾಗಿ ನೀಡಿದ್ದಾರೆ.

- Advertisement -

ಆಕಾಶವಾಣಿ ಧಾರವಾಡದಲ್ಲಿ ಕನ್ನಡ ಇಂಗ್ಲೀಷ್ ಭಾಷಣಗಳು ಹಿಂದಿ ಪಾಠಗಳು ಸಾರಥ್ಯ ವಹಿಸಿದ ಕಾರ್ಯಕ್ರಮಗಳು ಪ್ರಸಾರವಾಗಿವೆ. ಕೆ.ಎಲ್.ಇ. ವೇಣುಧ್ವನಿ ಎಫ್.ಎಮ್‍ನಲ್ಲಿ ಸಂದರ್ಶನದ ಜೊತೆಯಲ್ಲಿ ಅನೇಕ ಸಮಾಜಮುಖಿ ಕಾರ್ಯಕ್ರಮಗಳನ್ನು ನೀಡುತ್ತಿದ್ದಾರೆ. ಇಂಗ್ಲೀಷ್ ಉಪನ್ಯಾಸಕರಾಗಿದ್ದುಕೊಂಡು ಕನ್ನಡ ಸಾಹಿತ್ಯದಲ್ಲಿ ಅಪೂರ್ವ ಸೇವೆಯನ್ನು ಸಲ್ಲಿಸಿದ್ದಕ್ಕೆ ಅನೇಕ ಪ್ರಶಸ್ತಿಗಳು ಇವರನ್ನು ಅರಸಿ ಬಂದಿವೆ.

ಕನ್ನಡದ ಬಹುತೇಕ ಎಲ್ಲ ಪತ್ರಿಕೆಗಳು ಇವರ ಅಕ್ಷರದ ರುಚಿ ಕಂಡಿವೆ.ವಿಶ್ವದಾದ್ಯಂತ ಹರಡಿಕೊಂಡಿರುವ ಹೊರನಾಡ ಕನ್ನಡಿಗರು (ದುಬೈ, ಲಂಡನ್, ಅಮೇರಿಕಾ ಮಸ್ಕತ್ ಸಿಂಗಾಪುರ) ಇವರ ಆನ್‍ಲೈನ್ ಪತ್ರಿಕೆಗಳ ಓದುಗ ಅಭಿಮಾನಿಗಳಾಗಿದ್ದಾರೆ ಎಂಬುದು ನಿಜಕ್ಕೂ ಹೆಮ್ಮೆಯ ಸಂಗತಿ. ಆಸ್ಟ್ರೇಲಿಯಾದಲ್ಲಿ ನಡೆದ ಜಾಗತಿಕ ಬಸವ ಸಮಿತಿಯ ಸ್ಮರಣಿಕೆಯಲ್ಲಿ ಇವರು ಬರೆದ ಲೇಖನ ಪ್ರಕಟಗೊಂಡ ಕೀರ್ತಿಯ ಗರಿಯನ್ನು ಮುಡಿಗೇರಿಸಿಕೊಂಡಿದ್ದಾರೆ.

ಸುಮಾರು 23 ವರ್ಷಗಳಿಂದ ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಅಬ್ಬಿಗೇರಿಯವರು ಸದ್ಯ ಆಂಗ್ಲಭಾಷಾ ಉಪನ್ಯಾಸಕಿಯಾಗಿ ಹಿರೇಬಾಗೇವಾಡಿ ಪದವಿ ಪೂರ್ವ ಕಾಲೇಜಿನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಕನ್ನಡ ಸಾಹಿತ್ಯದ ವಿವಿಧ ಪ್ರಕಾರಗಳಲ್ಲಿ ಸಾಹಿತ್ಯಕೃತಿಗಳು ಪ್ರಕಟಗೊಂಡಿವೆ. ಶಿಕ್ಷಣ ಹಾಗೂ ಸಾಹಿತ್ಯ ಕ್ಷೇತ್ರಗಳಲ್ಲಿನ ಸೇವೆಗೆ ಹಲವಾರು ರಾಜ್ಯ ಮತ್ತು ರಾಷ್ಟ ಮಟ್ಟದ ಪ್ರಶಸ್ತಿಗಳು ಅರಸಿ ಬಂದಿವೆ.

ಇವರ ಬಹುಮುಖ ವ್ಯಕ್ತಿತ್ವವನ್ನು ಗಮನಿಸಿ ಇವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಿರುವುದಾಗಿ ಕವಿತ್ತ ಕರ್ಮಮಣಿ, ಕರ್ನಾಟಕ ಜಿಲ್ಲಾಧ್ಯಕ್ಷರು, ಕಸ್ತೂರಿ ಸಿರಿಗನಗನ್ನಡ ವೇದಿಕೆ(ರಿ), ಬೆಳಗಾವಿ. ಇವರು ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

LEAVE A REPLY

Please enter your comment!
Please enter your name here

- Advertisement -

Latest News

ಜೆಡಿಎಸ್ ಗೆ ಗೆಲುವು ಕುಮಾರಸ್ವಾಮಿಗೆ ಬೇಕಿಲ್ಲ, ಬಿಜೆಪಿ ಗೆಲ್ಲಿಸಲು ಆಸಕ್ತಿ ಹೊಂದಿದ್ದಾರೆ – ಎಸ್ ಎಂ ಪಾಟೀಲ

ಸಿಂದಗಿ: ಈ ಕ್ಷೇತ್ರದ ಅಭಿವೃದ್ಧಿಗೆ ದಿ.ಮನಗೂಳಿ ಅವರು ತಮ್ಮ ಆಯುಷ್ಯವನ್ನೆ ಮುಡಿಪಾಗಿಟ್ಟು ದುಡಿದು ಅಗಲಿ ಹೋಗಿದ್ದಾರೆ ಅವರ ಮಗನಿಗೆ ಕೂಲಿ ಸಿಗಬೇಕು ಆದರೆ ಜೆಡಿಎಸ್ ಪಕ್ಷದ...
- Advertisement -

More Articles Like This

- Advertisement -
close
error: Content is protected !!