ಅವರಾದಿಯಲ್ಲಿ ಹನುಮಾನ ಮೂರ್ತಿ ಪ್ರತಿಷ್ಠಾಪನೆ

Must Read

ಮೂಡಲಗಿ: ತಾಲೂಕಿನ ಅವರಾದಿ ಗ್ರಾಮದಲ್ಲಿ ಶ್ರೀ ಹನುಮಾನ ಸೇವಾ ಸಮಿತಿ ಆಶ್ರಯದಲ್ಲಿ ಶ್ರೀ ಹನುಮಾನ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ ಎ.25 ರಂದು ವಿವಿಧ ಧಾರ್ಮಿಕ ಕಾರ್ಯಕ್ರಮದೊಂದಿಗೆ ಜರುಗಲಿದೆ.

ಎ.25 ರಂದು ಬೆಳಿಗ್ಗೆ 5-05ಕ್ಕೆ ಶ್ರೀ ಹನುಮಂತ ದೇವರ ಮೂರ್ತಿ ಪ್ರತಿಷ್ಠಾಪನೆ ಹಾಗೂ ಹೋಮ ಹವನ, ರುದ್ರಾಭಿಷೇಕ ಜರುಗುವುದು. 10 ಗಂಟೆಗೆ ಜರುಗುವ ಸಮಾರಂಭದ ಸಾನ್ನಿಧ್ಯವನ್ನು ಮರೆಗುದ್ದಿಯ ಡಾ.ನಿರುಪಾದೇಶ್ವರ ಮಹಾಸ್ವಾಮಿಗಳು ವಹಿಸುವರು, ಕಲಬುರ್ಗಿ ಜಿಲ್ಲೆ ಕುಂದಗೊಳದ ಶ್ರೀ ಸಿದ್ಧರಾಮ ಮಹಾಸ್ವಾಮಿಗಳು ಜ್ಯೋತಿ ಬೆಳಗಿಸುವರು, ಶ್ರೀ ಗಂಗಾಧರ ಹಿರೇಮಠ ಶ್ರೀಗಳು ಮತ್ತು ಸೋಮಯ್ಯ ಹಿರೇಮಠ ಶ್ರೀಗಳು, ಮಹಾಂತಯ್ಯಾ ಬ. ಹಿರೇಮಠ ಶ್ರೀಗಳು ಉಪಸ್ಥಿತರಿರುವರು, ಕಹಾಮ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅಧ್ಯಕ್ಷತೆ ವಹಿಸುವರು, ಮುಖ್ಯ ಅತಿಥಿಗಳಾಗಿ ಜಿಲ್ಲೆಯ ಸಂಸದರು ಹಾಗೂ ಶಾಸಕರು, ರಾಜಕೀಯ ಮುಖಂಡರು, ಅಧಿಕಾರಿಗಳು, ಹಿರಿಯರು ಭಾಗವಹಿಸುವರು.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group