spot_img
spot_img

ಇಂದು ವಿಶ್ವ ಶಿಕ್ಷಕರ ದಿನದ ಶುಭಾಶಯಗಳು

Must Read

- Advertisement -

1994 ರಿಂದ ಅಕ್ಟೋಬರ್‌ 5 ರಂದು ವಿಶ್ವ ಶಿಕ್ಷಕರ ದಿನವನ್ನಾಗಿ ಆಚರಿಸಲಾಗುತ್ತದೆ.

ಶಿಕ್ಷಕರಿಗೆ ಬೆಂಬಲ ನೀಡುವುದೇ ಇದರ ಹಿಂದಿನ ಉದ್ದೇಶ ಹಾಗೂ ಭವಿಷ್ಯದ ಪೀಳಿಗೆಗೆ ಕೂಡ ಶಿಕ್ಷಕರ ಅಗತ್ಯವಿರುವುದನ್ನು ತಿಳಿಯಪಡಿಸುವುದಕ್ಕಾಗಿ ಶಿಕ್ಷಕರ ದಿನವನ್ನು ಆಚರಿಸಲಾಗುತ್ತದೆ.

ಯುನೆಸ್ಕೋ ಪ್ರಕಾರ, ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ಕೊಟ್ಟು ಅವರ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು. ಶಿಕ್ಷಕರ ಈ ಸೇವೆಯ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದೇ ವಿಶ್ವ ಶಿಕ್ಷಕರ ದಿನದ ಆಚರಣೆಯ ಉದ್ದೇಶವಾಗಿದೆ. ವಿಶ್ವ ಶಿಕ್ಷಕರ ದಿನವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಲಾಗುತ್ತದೆ ಹಾಗೂ ಜಗತ್ತಿನಾದ್ಯಂತ ಆಚರಿಸಲಾಗುತ್ತದೆ.

- Advertisement -

ವಿಶ್ವ ಶಿಕ್ಷಕರ ದಿನಾಚರಣೆಯ ಬಗ್ಗೆ ಎಜುಕೇಷನ್‌ ಇಂಟರ್‌ನ್ಯಾಷನಲ್‌ಗೆ ಬಲವಾದ ನಂಬಿಕೆ ಇದೆ. ಶಿಕ್ಷಕರ ದಿನವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಲ್ಪಡಬೇಕು ಹಾಗೂ ಜಗತ್ತಿನಾದ್ಯಂತ ಆಚರಣೆ ಮಾಡಬೇಕೆಂಬುದು ಎಜುಕೇಷನ್‌ ಇಂಟರ್‌ನ್ಯಾಷನಲ್‌ ಬಯಕೆಯಾಗಿದೆ.

ಭವಿಷ್ಯದ ಪೀಳಿಗೆಗೆ ಶಿಕ್ಷಣ ನೀಡುವ ಜವಾಬ್ದಾರಿಯು ಸಾಮಾನ್ಯವಾದುದಲ್ಲ. ಆದ್ದರಿಂದ ಇಂಥ ಜವಾಬ್ದಾರಿಯುತ ಕೆಲಸವನ್ನು ಮಾಡುತ್ತಿರುವ ಶಿಕ್ಷಕರನ್ನು ವಿಶ್ವ ಶಿಕ್ಷಕರ ದಿನಾಚರಣೆಯಂದು ಮಾತ್ರ ಸ್ಮರಿಸುವುದಲ್ಲ. ನಮ್ಮ ಜೀವಮಾನ ಪೂರ್ತಿ ನೆನಪಿಸಿಕೊಳ್ಳಬೇಕು. ಹಾಗಾಗಿ ಮತ್ತೊಮ್ಮೆ ಎಲ್ಲರಿಗೂ ವಿಶ್ವ ಶಿಕ್ಷಕರ ದಿನದ ಹಾರ್ದಿಕ ಶುಭಾಶಯಗಳು.


ಹೇಮಂತ ಚಿನ್ನು
ಕರ್ನಾಟಕ ಶಿಕ್ಷಕರ ಬಳಗ

- Advertisement -
- Advertisement -

Latest News

‘Silent killer’ ಎಂದು ಕರೆಯಲ್ಪಡುವ ಒಂದು ಹಾವುಂಟು !

ಈ ಹಾವನ್ನು ಈ ರೀತಿ ಕರೆಯಲು ಹಲವು ಕಾರಣಗಳುಂಟು. ಈ ಹಾವು ರಾತ್ರಿ ವೇಳೆಯಲ್ಲಿಯೇ ಹೆಚ್ಚು ಓಡಾಟ ಮಾಡುವುದು (ನಿಶಾಚರಿ). ಮತ್ತೆ ಈ ಹಾವು ಮನುಷ್ಯರಿಗೆ...
- Advertisement -

More Articles Like This

- Advertisement -
close
error: Content is protected !!
Join WhatsApp Group