ನೌಕರರ ಸಂಘದಿಂದ ಆರೋಗ್ಯ ಶಿಬಿರ

Must Read

ಹುನಗುಂದ: ಪ್ರತಿಯೊಬ್ಬ ನೌಕರರು ಆರೋಗ್ಯದ ಬಗ್ಗೆ ಕಾಳಜಿವಹಿಸಬೇಕು. ಇಂತಹ ಆರೋಗ್ಯ ಶಿಬಿರವನ್ನು  ಏರ್ಪಡಿಸಿದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಕಾರ್ಯ ಶ್ಲಾಘನೀಯ ಎಂದು ತಹಶೀಲ್ದಾರ್  ಪ್ರದೀಪಕುಮಾರ ಹಿರೇಮಠ ಹೇಳಿದರು.

ಇಲ್ಲಿನ ಸಂಗಮೇಶ್ವರ ಕಲ್ಯಾಣ ಮಂಟಪದಲ್ಲಿ  ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಏರ್ಪಡಿಸಿದ್ದ ನೌಕರರ ಉಚಿತ ಆರೋಗ್ಯ ಶಿಬಿರ ಹಾಗೂ ಸಾಮಾನ್ಯ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.

ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಂಗಮೇಶ ಪಾಟೀಲ ಮಾತನಾಡಿ, ಇಂದಿನ ತಾಂತ್ರಿಕ ಹಾಗೂ ಜಾಗತಿಕ ಯುಗದಲ್ಲಿ ನೌಕರರು ಒತ್ತಡಕ್ಕೆ ಒಳಗಾಗಿ ಕಾರ್ಯ ನಿರ್ವಹಿಸುವುದು ಅನಿವಾರ್ಯವಾಗಿದೆ. ಆರೋಗ್ಯದ ಕಡೆ ಕಾಳಜಿಯನ್ನು ಲೆಕ್ಕಿಸದೆ ದುಡಿಯುತ್ತೇವೆ. ನೌಕರರು ನಿಯಮಿತವಾಗಿ ಆರೋಗ್ಯ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದರು.

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲ್ಲೂಕು ಅದ್ಯಕ್ಷ ಮುತ್ತಣ್ಣ ಕಲಗೋಡಿ, ಮಹಾಂತೇಶ ನಾಡಗೌಡ, ತಾಲ್ಲೂಕು ಪಂಚಾಯತ್ ಇಒ ಮುರಳೀಧರ ದೇಶಪಾಂಡೆ, ಬಿಇಒ ಜಾಸ್ಮೀನ್ ಕಿಲ್ಲೇದಾರ, ಸದಾಶಿವ ಗುಡಗುಂಟಿ, ಡಿ ಎಸ್ ಯತ್ನಟ್ಟಿ, ಸವಿತಾ ಸಜ್ಜನ, ರಾಜೇಶ್ವರಿ ಗೌಡರ, ಎಸ್ ಜಿ ಹುದ್ದಾರ, ಮಹಾಂತೇಶ ಪಾಟೀಲ, ಶರಣು ಚಿತ್ತವಾಡಗಿ, ರಮೇಶ ಮಿಣಜಗಿ ಉಪಸ್ಥಿತರಿದ್ದರು.

ಹುನಗುಂದದ ಸಂಗಮೇಶ್ವರ ಕಲ್ಯಾಣ ಮಂಟಪದಲ್ಲಿ  ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಏರ್ಪಡಿಸಿದ್ದ ನೌಕರರ ಉಚಿತ ಆರೋಗ್ಯ ಶಿಬಿರದಲ್ಲಿ ಬಿಇಒ ಜಾಸ್ಮೀನ್ ಕಿಲ್ಲೇದಾರ ಆರೋಗ್ಯ ತಪಾಸಣೆ ಮಾಡಿಸಿಕೊಂಡರು.

Latest News

ಶಿರೀಷಗೆ ಗಡಿತಿಲಕ, ಶಶಿಗೆ ಜನ್ನಾ ಪ್ರಶಸ್ತಿ

ಬೆಳಗಾವಿ - ಇಲ್ಲಿಯ ಬಿ ಎ ಸನದಿ ಸಾಂಸ್ಕೃತಿಕ ಪ್ರತಿಷ್ಠಾನ ಕರ್ನಾಟಕ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಪ್ರತಿವರ್ಷ ಕೊಡಮಾಡುವ ಕನ್ನಡ ಗಡಿತಿಲಕ ಪ್ರಶಸ್ತಿಗೆ ಶಿರೀಷ ಅವರು ಆಯ್ಕೆಯಾಗಿದ್ದಾರೆ...

More Articles Like This

error: Content is protected !!
Join WhatsApp Group